ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ: ಸಚಿವ ಶರಣ್ ಪ್ರಕಾಶ್ ಪಾಟೀಲ್

Published : Sep 29, 2025, 01:10 AM IST
Sharan Prakash Patil

ಸಾರಾಂಶ

ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ‌ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.

ಸೇಡಂ (ಸೆ.29): ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ‌ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು. ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮವಾಗಿ ಸೇಡಂ ತಾಲೂಕಿನ ಮಳಖೇಡ ಕಾಗಿಣಾ ನದಿ ಪ್ರವಾಹ ಉಂಟಾಗಿದ್ದು, ಮಳಖೇಡದ ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳಖೇಡ ಕಾಗಿಣಾ ನದಿ ತೀರದ ಸಮಖೇಡ ತಾಂಡಾದ ಪ್ರತಿ ಮನೆಗಳಿಗೆ ಭೇಟಿ ನೀಡಿದ ಸಚಿವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಮಳಖೇಡದ ಕೋಲಿವಾಡ, ದರ್ಗಾ ಕಾಲೋನಿ ಹಾಗೂ ಮಳಖೇಡ ಕಾಲೋನಿ ರಸ್ತೆ, ಹಳ್ಳ ಹಾಗೂ ಕಾಗಿಣಾ ನದಿ ತೀರದ ಪ್ರದೇಶಗಳಲ್ಲಿನ ಮನೆಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ವಹಿಸುವಂತೆ ತಾಲೂಕಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಗಂಜಿ ಕೇಂದ್ರಗಳನ್ನು ‌ಸ್ಥಾಪಿಸಲಾಗಿದ್ದು, ಪಂಚಾಯತ್ ಅಧಿಕಾರಿಗಳು ಪ್ರವಾಹ ಪೀಡಿತರನ್ನು ಗುರುತಿಸಿ ನಿಗಾ ವಹಿಸಬೇಕು. ಕಾಗಿಣಾ ನದಿ ಪಾತ್ರದ ಸ್ಥಳದಲ್ಲಿ ಜನ ಜಾನುವಾರುಗಳು ಇಳಿಯದಂತೆ ಪೊಲೀಸರು ಹಾಗೂ ಅಧಿಕಾರಿಗಳು ಎಚ್ಚರಿಕೆ ನೀಡಿ, ಡಂಗುರ ಹೊಡಿಸಲು ಸಚಿವ ಶರಣಪ್ರಕಾಶ ಪಾಟೀಲ ಸೂಚಿಸಿದರು.

ಭೇಟಿ ನೀಡಿ, ಪರಿಶೀಲನೆ

ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಯಾದ ವಿವಿಧ ಗ್ರಾಮಗಳಿಗೆ ಮನೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ತಾಲೂಕಾಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಪಟ್ಟಿ ಮಾಡಿ ವರದಿ ಸಲ್ಲಿಸುವಂತೆ ತಾಕೀತು ಮಾಡಿ, ಸಾರ್ವಜನಿಕರಿಗೆ ಮಳೆಯಿಂದ ಆದ ಹಾನಿಯ ಬಗ್ಗೆ ನಿಗಾಯಿಟ್ಟು ವರದಿ ಬರೆದುಕೊಳ್ಳಿ ಎಂದು ಖಡಕ್ ಸೂಚನೆ ನೀಡಿದರು. ಸೇಡಂ ತಾಲೂಕಿನ ಬೀರನಳ್ಳಿ, ಮೀನಹಾಬಳ, ಯಡಗಾ, ಕುಕ್ಕುಂದಾ, ಕಾಚೂರು ಗ್ರಾಮ ಸೇರಿದಂತೆ ಇನ್ನು ಅನೇಕ ಅತಿವೃಷ್ಟಿಯಿಂದ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ‌ ಜನರ ಮಾತುಗಳನ್ನು ಆಲಿಸಿದೆ.

ಪ್ರವಾಹ ಹಾನಿ ಪರಿಶೀಲನೆ ನಡೆಸಿ, ಯಾವ ಯಾವ ಗ್ರಾಮಗಳಲ್ಲಿ ಇರುವುದಕ್ಕೂ ಮನೆಯಿರುವುದಿಲ್ಲ ಅಂಥಹ ಗ್ರಾಮಸ್ಥರಿಗೆ ಮನೆ ಕಲ್ಪಿಸಿ, ಪಂಚಾಯತ್ ಕಡೆಯಿಂದ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಅಭಯ ನೀಡಿದರು. ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸೂಕ್ತ ಆಹಾರ ಸಾಮಗ್ರಿಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಹಾಯಕ ಆಯುಕ್ತರು, ತಹಸೀಲ್ದಾರರಿಗೆ ತಿಳಿಸಿದರು‌.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುನೀತ್ ಕೆರೆಹಳ್ಳಿ ತಂಡದಿಂದ ಅಕ್ರಮ ವಲಸಿಗರ ಬೇಟೆ: ಪೊಲೀಸರು ಮಾಡಬೇಕಾದ ಕೆಲಸವನ್ನು ಸಂಘಟನೆಗಳು ಮಾಡಬೇಕೇ?
ಸಿದ್ದರಾಮಯ್ಯ ಮೇಲೆ ದೈವಕೃಪೆ: ಹಾಲುಮತದ ಬಗ್ಗೆ ಮಾತನಾಡಿದರೆ ಸರ್ವನಾಶ; ರಾಜಕಾರಣಿಗೆ ಕೋಡಿಶ್ರೀ ವಾರ್ನ್!