ವಿಷಗಾಳಿ ಆತಂಕ: ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು

Published : Apr 24, 2025, 09:27 AM ISTUpdated : Apr 24, 2025, 09:30 AM IST
ವಿಷಗಾಳಿ ಆತಂಕ: ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು

ಸಾರಾಂಶ

ಕಡೇಚೂರು ಕೈಗಾರಿಕಾ ಪ್ರದೇಶವು "ರೆಡ್ ಝೋನ್‌"ಗೆ ಬರುವುದರಿಂದ ಕಡೇಚೂರು ಜಿಟಿಟಿಸಿಯನ್ನು ಸ್ಥಳಾಂತರಿಸುವ ಕುರಿತು ಶಿಫಾರಸ್ಸು ಮಾಡಲಾಗಿದೆ ಎಂದು ಆಯೋಗಕ್ಕೆ ನೀಡಿದ ವಿವರಣೆಗಳಲ್ಲಿ ತಿಳಿಸಿದ್ದಾರೆ.

ಆನಂದ್‌ ಎಂ. ಸೌದಿ

ಯಾದಗಿರಿ (ಏ.24): ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದ ಕೆಮಿಕಲ್‌ ಕಂಪನಿಗಳಿಂದ ಹೊರ ಹೊಮ್ಮುತ್ತಿರುವ ವಿಷಗಾಳಿ-ತ್ಯಾಜ್ಯ ದುರ್ನಾತದಿಂದಾಗಿ ಉಸಿರಾಡಲೂ ಕಷ್ಟವಾಗುತ್ತಿದೆ ಎಂದು ದೂರಿ, ಕಡೇಚೂರು ಪ್ರದೇಶದಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ವಿದ್ಯಾರ್ಥಿಗಳ ಕುರಿತ ಏ.16 ರಂದು ಪ್ರಕಟಗೊಂಡಿದ್ದ "ಕನ್ನಡಪ್ರಭ" ವರದಿಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಏ.16 ರಂದು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ತರಬೇತಿ ಕೇಂದ್ರದ ಪ್ರಾಂಶುಪಾಲರು, ಪರಿಸರ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ನೀಡಿದ್ದ ಸಮನ್ಸ್‌ನಂತೆ ಏ.23 ರಂದು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಈ ಕುರಿತು ವಿಚಾರಣೆ ನಡೆಸಿದೆ.

ಕೈಗಾರಿಕಾ ಪ್ರದೇಶ ಹಾಗೂ ಜಿಟಿಸಿಸಿ ಸ್ಥಾಪನೆ ಕುರಿತು ಆಯೋಗಕ್ಕೆ ವಿವರಗಳನ್ನು ಸಲ್ಲಿಸಿರುವ ಪರಿಸರ ಅಧಿಕಾರಿಯು, ಪರಿಸರ ಮಾಲಿನ್ಯ ಕುರಿತು ದೂರುಗಳ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಆದೇಶದಂತೆ ನಡೆಸಿದ ಪರಿಶೀಲನೆ ವೇಳೆ, ತಾಂತ್ರಿಕ ಸಮಿತಿಯ ಶಿಫಾರಸ್ಸಿನಂತೆ, ಪರಿಶೀಲನೆ ವೇಳೆ ಕಂಡುಬಂದ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ನೋಟೀಸ್‌ ನೀಡಲು ತೀರ್ಮಾನಿಸಲಾಗಿದೆ. ಹಾಗೆಯೇ, ಕಡೇಚೂರು ಕೈಗಾರಿಕಾ ಪ್ರದೇಶವು "ರೆಡ್ ಝೋನ್‌"ಗೆ ಬರುವುದರಿಂದ ಕಡೇಚೂರು ಜಿಟಿಟಿಸಿಯನ್ನು ಸ್ಥಳಾಂತರಿಸುವ ಕುರಿತು ಶಿಫಾರಸ್ಸು ಮಾಡಲಾಗಿದೆ ಎಂದು ಆಯೋಗಕ್ಕೆ ನೀಡಿದ ವಿವರಣೆಗಳಲ್ಲಿ ತಿಳಿಸಿದ್ದಾರೆ.

ಸದರಿ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ವಿರುದ್ಧ "ಕನ್ನಡಪ್ರಭ" ದಿನಪತ್ರಿಕೆಯಲ್ಲಿ ಪ್ರಕಟವಾಗುತ್ತಿರುವ ವಿಷಯವಾಗಿ, ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿ, ಜಂಟಿಸ್ಥಳ ಪರಿಶೀಲನೆ ಕೈಗೊಂಡು ವರದಿ ನೀಡವಂತೆ ಏ.19 ರಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಪರಿವೀಕ್ಷಣೆ ಬಾಕಿಯಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ನೀಡಿದ ವಿವರಣೆ ವರದಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕ್ರಿ ಕೊಡೋದು ಹ್ಯಾಂಗರ ಇರಲಿ, ಬದುಕಿದ್ರ ಸಾಕು: ಭೂ ಸಂತ್ರಸ್ತರ ಅಳಲು

ಕನ್ನಡಪ್ರಭ ವರದಿ ಆಧರಿಸಿ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಏ.23 ರಂದು ಬೆಂಗಳೂರು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದ್ದರಿಂದ ಇಲ್ಲಿಗೆ ಆಗಮಿಸಿದ್ದ ಅಧಿಕಾರಿಗಳ ತಂಡದಿಂದ ಮಾಹಿತಿ ಪಡೆಯಲಾಗಿದೆ. ಜಿಟಿಸಿಸಿ ಸ್ಥಳಾಂತರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೆಡ್‌ ಝೋನ್‌ನಲ್ಲಿ ಮಕ್ಕಳ ತರಬೇತಿ ಕೇಂದ್ರ ಸ್ತಾಪನೆಗೆ ಕೆಐಎಡಿಬಿ ಹೇಗೆ ತೀರ್ಮಾನಿಸಿತ್ತು ? ಈ ಕುರಿತು ನೋಟೀಸ್‌ ನೀಡಲಾಗುವುದು.
-ಶಶಿಧರ್‌, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!