
ಚಿಕ್ಕೋಡಿ (ಡಿ.31): ಶ್ರೀರಾಮಸೇನೆಯಿಂದ ಆಯೋಜನೆಗೊಂಡಿರುವ 'ಮೋದಿ ಗೆಲ್ಲಿಸಿ, ದೇಶ ಉಳಿಸಿ' ಅಭಿಯಾನ ಕಾರ್ಯಕ್ರಮಕ್ಕೆ ಗೈರಾದ ಹಿನ್ನೆಲೆ ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ವಿರುದ್ಧ ಶ್ರೀ ರಾಮಸೇನೆ ರಾಷ್ಟ್ರೀಯ ಗೌರವಾಧ್ಯಕ್ಷ ಆಂದೋಲ ಮಠದ ಸಿದ್ಧಲಿಂಗ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯನ್ನ ಗೆಲ್ಲಿಸಬೇಕಿದೆ. ಶ್ರೀರಾಮಸೇನೆಯಿಂದ ಆರಂಭವಾಗಿರುವ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಮೋದಿ ಗೆಲ್ಲಿಸಲು ಈ ಕಾರ್ಯಕ್ರಮಕ್ಕೆ ಶಿವಮೊಗ್ಗದಿಂದ ಮಾಜಿ ಸಚಿವರಾದ ಕೆಎಸ್ ಈಶ್ವರಪ್ಪ ಬಂದು ಚಾಲನೆ ನೀಡಿದ್ದಾರೆ. ಆದರೆ ದುರಂತ ಅಂದ್ರೆ ಈ ಕಾರ್ಯಕ್ರಮಕ್ಕೆ ಸ್ಥಳೀಯ ಸಂಸದರು ನಾಟ್ ರಿಚೇಬಲ್ ಆಗಿದ್ದಾರೆ. ಇದು ನಿಜಕ್ಕೂ ನೋವಿನ ಸಂಗತಿ ಎಂದು ಶ್ರೀಗಳು ಬೇಸರ ವ್ಯಕ್ತಪಡಿಸಿದರು.
ಹಿಂದೂ ಸಮಾಜ ಮುಂದೊಂದು ದಿನ ಮಸೀದಿಗಳನ್ನು ಒಡೆದು ಪುಡಿಪುಡಿ ಮಾಡುತ್ತೆ: ಕೆಎಸ್ ಈಶ್ವರಪ್ಪ ಮತ್ತೆ ಪ್ರಚೋದನಕಾರಿ ಮಾತು!
ವಿಶ್ವದಲ್ಲಿ ಭಾರತವನ್ನು ನಂಬರ್ ಒನ್ ಮಾಡುವುದು ಮೋದಿಯಿಂದ ಮಾತ್ರ ಸಾಧ್ಯವಿದೆ. ಹೀಗಾಗಿ ಮತ್ತೊಮ್ಮೆ ಪ್ರಧಾನಿಯನ್ನಾಗಿ ನರೇಂದ್ರ ಮೋದಿಯನ್ನು ಗೆಲ್ಲಿಸಲೇಬೇಕಾಗಿದೆ. ನಮ್ಮಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮುಖ ನೋಡಿ ಎಲ್ಲರೂ ಬಿಜೆಪಿಗೆ ವೋಟು ಹಾಕ್ತಾರೆ. ಹೊರತು ಇಲ್ಲಿ ಎಂಪಿ ಮುಖ ನೋಡಿ ವೋಟು ಹಾಕಲ್ಲ. ಇಂಥ ಕಾರ್ಯಕ್ರಮಕ್ಕೆ ಸ್ಥಳೀಯ ಸಂಸದರೇ ಗೈರಾಗಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮಹಮ್ಮದ್ ಬಿನ್ ತುಘಲಕ್ ಎಂಬ ಹುಚ್ಚು ದೊರೆ ರೀತಿ ಆಡ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ