Voters data Theft Case: ಮತದಾರ ಪಟ್ಟಿ ಪರಿಷ್ಕರಣೆ ಅಕ್ರಮ: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತ್ತು ಆದೇಶ ವಾಪಸ್

By Ravi JanekalFirst Published Dec 24, 2022, 12:27 PM IST
Highlights

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತ್ತು ಆದೇಶ ಸರ್ಕಾರ ವಾಪಸ್ ಪಡೆದಿದೆ. ಅಕ್ರಮ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಬೆಂಗಳೂರು ನಗರ ಮಾಜಿ ಡಿಸಿ ಕೆ. ಶ್ರೀನಿವಾಸ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ರಂಗಪ್ಪ.ಬೇರೆಡೆ ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು (ಡಿ.24) : ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತ್ತು ಆದೇಶ ಸರ್ಕಾರ ವಾಪಸ್ ಪಡೆದಿದೆ. ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಬೆಂಗಳೂರು ನಗರ ಮಾಜಿ ಡಿಸಿ ಕೆ. ಶ್ರೀನಿವಾಸ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ರಂಗಪ್ಪ. ಇದೀಗ ಇಬ್ಬರ ಅಮಾನತ್ತು ಆದೇಶ ಹಿಂಪಡೆಯಲಾಗಿದ್ದು, ಇಬ್ಬರು ಅಧಿಕಾರಿಗಳು ಬೇರೆಡೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಐಎಎಸ್ ಅಧಿಕಾರಿ ಕೆ. ಶ್ರೀನಿವಾಸ್ ಅವರನ್ನು ಮ್ಯಾನೇಜಿಂಗ್ ಡೈರೆಕ್ಟರ್, ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ ಬೆಂಗಳೂರು ಹಾಗೂ ರಂಗಪ್ಪ. ಎಸ್, ಎಕ್ಸಿಕ್ಯುಟಿವ್ ಡೈರೆಕ್ಟರ್, ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣದ ಸಂಬಂಧ ಚಿಲುವೆ ಸಂಸ್ಥೆಯ ವಿರುದ್ಧ ಹಲಸೂರುಗೇಟ್‌  ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿವಿಶೇಷ ಪರಿಷ್ಕರಣೆ 2023 ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ಬಿಬಿಎಂಪಿ ನೀಡಿತ್ತು. ಈ ವೇಳೆ ಚಿಲುಮೆ ಸಂಸ್ಥೆಯು ಮತದಾರರ ವೈಯಕ್ತಿ ಮಾಹಿತಿಯನ್ನು ಕಳವು ಮಾಡುತ್ತಿರುವ ಬಗ್ಗೆ ದೂರು ಬಂದಿತ್ತು. ಹೀಗಾಗಿ ಬಿಬಿಎಂಪಿಯ ಷರತ್ತು ಉಲ್ಲಂಘಿಸಿರುವ ಹಿನ್ನೆಲೆ ಚಿಲುಮೆ ಸಂಸ್ಥೆಯ ವಿರುದ್ಧ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ್ದರು.

Bengaluru: ಚಿಲುಮೆ ಕೇಸಲ್ಲಿ ಅಮಾನತು ಪ್ರಶ್ನಿಸಿ ಹೈಕೋರ್ಟ್‌ಗೆ ಮಾಜಿ ಡೀಸಿ ಅರ್ಜಿ

ಇತಿಹಾಸದಲ್ಲೇ ದೊಡ್ಡ ಹಗರಣ ಎಂದಿದ್ದ ಸಿದ್ದರಾಮಯ್ಯ:

ಈ ಪ್ರಕರಣದ ಬಗ್ಗೆ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ಮೇಲೆ ನಿರಂತರ ದಾಳಿ ನಡೆಸಿದ್ದರು. ದೇಶದ ಇತಿಹಾಸದಲ್ಲಿ ಇದು ದೊಡ್ಡ ಹಗರಣ. ಕನ್ನಡಿಗರ ಮತದಾನದ ಹಕ್ಕು ಕಸಿಯುವ ಮೂಲಕ ಪ್ರತಿ ಗಂಟೆಯೂ ರಾಜಕೀಯ ವ್ಯವಸ್ಥೆಯನ್ನು ಕಲುಷಿತಗೊಳಿಸಲು ಸರ್ಕಾರ ಕೆಲಸ ಮಾಡಿದೆ. ಅಮೆರಿಕದ ವಾಟರ್‌ ಗೇಟ್‌ ರೀತಿಯಲ್ಲೇ ಭಾರತದಲ್ಲಿ ‘ವೋಟರ್‌ ಗೇಟ್‌’ ಹಗರಣ ನಡೆದಿದೆ. ನ್ಯಾಯಾಂಗ ತನಿಖೆ ಬೇಡಿಕೆಗೆ ಸೂಕ್ತ ಸ್ಪಂದನೆ ನೀಡದಿದ್ದರೆ ಕೇಂದ್ರ ಚುನಾವಣಾ ಆಯೋಗದ ಮೊರೆ ಹೋಗುತ್ತೇವೆ ಅಂತ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು.

ಮತದಾರರ ಪಟ್ಟಿ ಅಕ್ರಮ: ಬಿಬಿಎಂಪಿ ಸಿಬ್ಬಂದಿಗೆ ನಡುಕ..!

click me!