ಖಾಲಿ ತಟ್ಟೆಯೊಂದಿಗೆ ನಮ್ಮ ಮೀಸಲಾತಿಗೆ ಕೈ ಹಾಕಿದರೆ ನಡೆಯೋಲ್ಲ: ಉಗ್ರಪ್ಪ

Kannadaprabha News, Ravi Janekal |   | Kannada Prabha
Published : Nov 05, 2025, 10:10 AM IST
Kuruba community ST reservation

ಸಾರಾಂಶ

Kuruba community ST reservation:ಹೊಸಪೇಟೆಯಲ್ಲಿ ನಡೆದ ಸಭೆಯಲ್ಲಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು ಕುರುಬರನ್ನು ಎಸ್‌ಟಿಗೆ ಸೇರಿಸಲು ಮೀಸಲಾತಿ ಪ್ರಮಾಣ ಹೆಚ್ಚಳದ ಷರತ್ತು ವಿಧಿಸಿದ್ದಾರೆ. ಆದರೆ, ಇದಕ್ಕೆ ವಾಲ್ಮೀಕಿ ಸಮಾಜದಿಂದ ವಿರೋಧ ವ್ಯಕ್ತವಾಗಿದೆ. ಕುಲಶಾಸ್ತ್ರ ಅಧ್ಯಯನ ನಡೆಯಬೇಕು ಎಂದಿfದಾರೆ

ಹೊಸಪೇಟೆ (ನ.5): ಕುರುಬರು ಸೇರಿದಂತೆ ಯಾವುದೇ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸಲು ನಮ್ಮ ವಿರೋಧವಿಲ್ಲ. ಆದರೆ, ಅದು ನಿಯಮಾನುಸಾರವಾಗಿ ಅರ್ಹತೆ ಪಡೆದಿರಬೇಕು. ಜೊತೆಗೆ ಹೆಚ್ಚುವರಿ ಮೀಸಲಾತಿಯನ್ನೂ ತರಬೇಕು. ಅನ್ನದ ಜೊತೆಗೆ ತಟ್ಟೆಯನ್ನೂ ತರಬೇಕು. ಖಾಲಿ ತಟ್ಟೆಯೊಂದಿಗೆ ಬಂದು ನಮ್ಮ ಮೀಸಲಾತಿಗೆ ಕೈ ಹಾಕುವುದಾದರೆ ಸಲ್ಲದು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.

ಎಸ್‌ಟಿ ಸೇರ್ಪಡೆಗೆ ಕುಲಶಾಸ್ತ್ರ ಅಧ್ಯಯನ ಅಗತ್ಯ:

ಹೊಸಪೇಟೆ ತಾಲೂಕು ವಾಲ್ಮೀಕಿ ನಾಯಕ ಸಮಾಜದಿಂದ ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಮೀಸಲಾತಿ ಕುರಿತ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೊಳಿಸುವ ಕುಲಶಾಸ್ತ್ರ ಅಧ್ಯಯನ ನಡೆಯಬೇಕು. ಬಳಿಕ ಸರ್ಕಾರ ರಚಿಸುವ ಸಮಿತಿ ಅದನ್ನು ನಿರ್ಧಾರ ಮಾಡುತ್ತದೆ. ಆದರೆ, ಅದಕ್ಕೂ ಮುನ್ನವೇ ನಮ್ಮ ತಟ್ಟೆಗೆ ಕೈ ಹಾಕಬೇಡಿ ಎಂಬುದನ್ನು ನಾವೆಲ್ಲ ಸ್ಪಷ್ಟವಾಗಿ ಹೇಳಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಇದರ ಮನವರಿಕೆ ಆಗಿದೆ. ಹೀಗಿದ್ದರೂ ಎಸ್‌ಟಿಗೆ ಸೇರಿಸಲೇಬೇಕು ಎಂದಾದರೆ ಎಸ್‌ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲೇಬೇಕು ಎಂದು ಆಗ್ರಹಿಸಿದರು.

ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು:

ಕುರುಬ ಸಮುದಾಯ ಎಸ್‌ಟಿಗೆ ಒಳಪಡುತ್ತದೆಯೇ ಎಂಬುದರ ಕುರಿತು ಮೊದಲಾಗಿ ಕುಲಶಾಸ್ತ್ರೀಯ ಅಧ್ಯಯನ ಆಗಬೇಕು. ಗೊಲ್ಲ, ಬೆಸ್ತರು ಮೊದಲಾದ ಸಮಯದಾಯಗಳಲ್ಲೂ ಇದೇ ರೀತಿಯ ಅಧ್ಯಯನ ಆಗಬೇಕು. ಅದರ ಹೊರತಾಗಿ ಈಗಿನ ಸ್ಥಿತಿಯಲ್ಲೇ ಎಸ್‌ಟಿಗೆ ಸೇರಿಸುವ ಪ್ರಯತ್ನಗಳು ಒಳ್ಳೆಯದಲ್ಲ. ಕುಲಶಾಸ್ತ್ರೀಯ ಅಧ್ಯಯನ ನಡೆದು ಎಲ್ಲ ಅರ್ಹರನ್ನೂ ಎಸ್‌ಟಿಗೆ ಸೇರಿಸಬಹುದು. ಜೊತೆಗೆ ಮೀಸಲಾತಿ ಪ್ರಮಾಣವನ್ನೂ ಹೆಚ್ಚಿಸಬೇಕು ಎಂದರು.

ವಾಲ್ಮೀಕಿ ಸಮಾಜದ ಕಾರ್ಯದರ್ಶಿ ದೇವರಮನೆ ಶ್ರೀನಿವಾಸ್ ಮಾತನಾಡಿ, ಹೆಚ್ಚುವರಿ ಮೀಸಲಾತಿಯೊಂದಿಗೆ ಇತರೆ ಸಮುದಾಯಗಳನ್ನು ಎಸ್‌ಟಿಗೆ ಸೇರ್ಪಡೆಗೊಳಿಸಬಹುದು ಎಂಬ ಉಗ್ರಪ್ಪ ಅಭಿಪ್ರಾಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಬಹುಸಂಖ್ಯಾತ ಕುರುಬರು ಸೇರಿದಂತೆ ಇನ್ನಿತರೆ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದರಿಂದ ಮೂಲ ಫಲಾನುಭವಿಗಳಿಗೆ ಭವಿಷ್ಯದಲ್ಲಿ ಅನ್ಯಾಯವಾಗುತ್ತದೆ ಎಂದರು.

ಮುಂದಿನ ದಿನಗಳಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಮತ್ತು ಕಮಲಾಪುರಗಳಲ್ಲಿ ಎರಡು ವಿಚಾರ ಸಂಕಿರಣಗಳನ್ನು ಏರ್ಪಡಿಸಿ, ವಾಲ್ಮೀಕಿ ನಾಯಕ ಸಮಾಜದ ಸ್ಪಷ್ಟ ಅಭಿಪ್ರಾಯಗಳನ್ನು ರಾಜ್ಯಕ್ಕೆ ತಿಳಿಸಲು ಸಭೆ ನಿರ್ಧರಿಸಿತು. ಸಮಾಜದ ಅಧ್ಯಕ್ಷ ಗೋಸಲ ಭರಮಪ್ಪ, ಏಳು ಕೇರಿಗಳ ಮುಖಂಡರು ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!