
ಬೆಂಗಳೂರು (ಜೂ.22): ರಾಜ್ಯದ ಸುದ್ದಿ ಸಂವಹನ ಸಂಸ್ಥೆಯಾಗಿರುವ ‘ವಿಶ್ವ ಸಂವಾದ ಕೇಂದ್ರ, ಕರ್ನಾಟಕ’ದಿಂದ ನೀಡಲಾಗುವ ವಾರ್ಷಿಕ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ-2025ಕ್ಕೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಭಾಜನರಾಗಿದ್ದಾರೆ.
ಜೂ.29ರಂದು ನಗರದ ಬಸವನಗುಡಿಯಲ್ಲಿರುವ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರವಿ ಹೆಗಡೆ ಅವರಿಗೆ ‘ತಿ.ತಾ.ಶರ್ಮ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಇದೇ ವೇಳೆ ಸುಧರ್ಮಾ ಪತ್ರಿಕೆಯ ಕೆ.ಎಸ್. ಜಯಲಕ್ಷ್ಮೀ ಅವರಿಗೆ ಬೆ.ಸು.ನಾ ಮಲ್ಯ ಪತ್ರಿಕೋದ್ಯಮ ಪ್ರಶಸ್ತಿ, ಎಂ.ವಿ.ಕಾಮತ್ ಪತ್ರಿಕೋದ್ಯಮ ಪ್ರಶಸ್ತಿಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ರಾಮು ಪಾಟೀಲ್, ಚಂದ್ರಶೇಖರ್ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿಗೆ ನ್ಯೂಸ್ 18 ಕನ್ನಡದ ಎ. ಹರಿಪ್ರಸಾದ್, ಹೊ.ವೆ.ಶೇಷಾದ್ರಿ ಅಂಕಣಕಾರ ಪ್ರಶಸ್ತಿಗೆ ಹೊಸದಿಗಂತ, ಉತ್ಥಾನದ ರಾಧಾಕೃಷ್ಣ ಕಲ್ಚಾರ್ ಹಾಗೂ ವಿ.ಎಸ್.ಕೆ ಡಿಜಿಟಲ್ ಮೀಡಿಯಾ ಪ್ರಶಸ್ತಿಯನ್ನು ಟಿವಿ ವಿಕ್ರಮದ ಕು.ಮುಮ್ತಾಸ್ ಅಬ್ದುಲ್ ನೆಲ್ಯಡ್ಕ ಅವರಿಗೆ ಪ್ರದಾನ ಮಾಡಲಾಗುವುದು.
ಆರ್‌ಎಸ್‌ಎಸ್ ಅಖಿಲ ಭಾರತೀಯ ಸಹಬೌದ್ಧಿಕ್ ಪ್ರಮುಖ ಸುಧೀರ್, ವಿಶ್ವ ಸಂವಾದ ಕೇಂದ್ರದ ಅಧ್ಯಕ್ಷ ಡಾ.ವಿ. ಶ್ರೀಧರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ