
ಬೆಂಗಳೂರು(ಜು.22): ಕಳೆದ ಒಂದು ವಾರದಿಂದ ನಗರದಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನ್‌ನಿಂದ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಿದ್ದ ನಿಷೇಧ ತೆರವಾಗಿರುವ ಹಿನ್ನೆಲೆಯಲ್ಲಿ ಲಾಲ್‌ಬಾಗ್ ಮತ್ತು ಕಬ್ಬನ್ ಉದ್ಯಾನವನಗಳಲ್ಲಿ ಬುಧವಾರದಿಂದ ಸಾರ್ವಜನಿಕರ ವಾಯು ವಿಹಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಇಂದಿನಿಂದ(ಬುಧವಾರ) ಬೆಳಗ್ಗೆ 6 ರಿಂದ 9 ಮತ್ತು ಸಂಜೆ 4.30 ರಿಂದ 7 ಗಂಟೆಯವರೆಗೂ ಸಾರ್ವಜನಿಕರ ವಾಯುವಿಹಾರಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್ ಮಾಹಿತಿ ನೀಡಿದ್ದಾರೆ.
ಕೊರೋನಾ ಎಫೆಕ್ಟ್: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ರದ್ದು!
ಸರ್ಕಾರದ ಮಾರ್ಗ ಸೂಚಿಯಂತೆ ಉದ್ಯಾನಗಳಲ್ಲಿನ ಬೆಂಚ್‌ಗಳ ಮೇಲೆ ಜನ ಕೂರಬಾರದು ಎಂಬ ನಿಯಮವಿದೆ. ಲಾಲ್‌ಬಾಗ್ ಮತ್ತು ಕಬ್ಬನ್ ಉದ್ಯಾನದಲ್ಲಿ ಸುಮಾರು 500ಕ್ಕೂ ಹೆಚ್ಚು ಬೆಂಚ್‌ಗಳಿದ್ದು, ಇವುಗಳ ಮೇಲೆ ಕೂರದಂತೆ ಭದ್ರತಾ ಸಿಬ್ಬಂದಿಯಿಂದ ಸಾರ್ವಜನಿಕರಿಗೆ ಸೂಚನೆಗಳನ್ನು ಕೊಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ