BWSSB water restrictions: ಕುಡಿಯುವ ನೀರಲ್ಲಿ ಬೈಕ್, ಕಾರು ತೊಳೆದರೆ ಬೀಳುತ್ತೆ ₹5000 ದಂಡ! ಜಲಮಂಡಳಿ ಕಠಿಣ ಆದೇಶ!

Kannadaprabha News   | Kannada Prabha
Published : Jul 30, 2026, 10:25 AM IST
Water Board orders Rs 5K fine for washing vehicles with drinking water

ಸಾರಾಂಶ

ಮುಂಗಾರು ಕೈಕೊಟ್ಟಿದ್ದರಿಂದ ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಜಲಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ವಾಹನ ತೊಳೆಯಲು, ಈಜು ಕೊಳಗಳಿಗೆ ಕುಡಿಯುವ ನೀರು ಬಳಸುವುದನ್ನು ನಿಷೇಧಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ 5,000 ರೂ. ದಂಡ ವಿಧಿಸುವುದಾಗಿ ಎಚ್ಚರಿಸಿದೆ.

ಬೆಂಗಳೂರು (ಜು.30): ಮುಂಗಾರು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ವಾಹನ ತೊಳೆಯಲು, ಈಜು ಕೊಳಗಳಲ್ಲಿ ಕುಡಿಯುವ ನೀರು ಬಳಸುವುದನ್ನು ಬೆಂಗಳೂರು ಜಲಮಂಡಳಿ ನಿಷೇಧಿಸಿದ್ದು, ಆದೇಶ ಉಲ್ಲಂಘಿಸಿದವರಿಗೆ 5 ಸಾವಿರ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.

ವಾಟರ್ ಫ್ಲೋ ರೆಸ್ಟ್ರಿಕ್ಟರ್, ಏರೇಟರ್ ಅಳವಡಿಕೆ ಕಡ್ಡಾಯ

ಮನೆಗಳು, ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಕಟ್ಟಡಗಳು, ಸರ್ಕಾರಿ ಕಚೇರಿಗಳು, ಹೋಟೆಲ್‌ಗಳು, ಕೈಗಾರಿಕೆಗಳು ಸೇರಿದಂತೆ ಎಲ್ಲ ಕಟ್ಟಡಗಳಲ್ಲಿ ವಾಟರ್ ಫ್ಲೋ ರೆಸ್ಟ್ರಿಕ್ಟರ್, ಏರೇಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಏರೇಟರ್ ಅಳವಡಿಕೆಯಿಂದ ನೀರಿನ ಬಳಕೆಯನ್ನು ಶೇ.30 ರಿಂದ 50ರವರೆಗೆ ಕಡಿಮೆ ಮಾಡಬಹುದಾಗಿದೆ ಎಂದು ತಿಳಿಸಿದೆ.

ಇನ್ನು ವಾಹನ ತೊಳೆಯುವುದು, ಉದ್ಯಾನಗಳಿಗೆ ನೀರು ಹಾಯಿಸುವುದು, ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಸ್ವಚ್ಛಗೊಳಿಸುವುದು, ಕಟ್ಟಡ ನಿರ್ಮಾಣ ಕಾಮಗಾರಿಗಳು ಸೇರಿದಂತೆ ಇನ್ನಿತರ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಇದಕ್ಕೆ ಕಡ್ಡಾಯವಾಗಿ ಸಂಸ್ಕರಿತ ನೀರನ್ನೇ ಬಳಸಬೇಕು ಎಂದು ಡಾ. ಮಂಜುಳ ತಿಳಿಸಿದ್ದಾರೆ.

ಈಜುಕೊಳಗಳಿಗೆ ಕುಡಿಯುವ ನೀರು ಬಳುವಂತಿಲ್ಲ

ನಗರದಲ್ಲಿನ ಖಾಸಗಿ ಹಾಗೂ ಸಾರ್ವಜನಿಕ ಈಜುಕೊಳಗಳಲ್ಲಿ ಕುಡಿಯುವ ನೀರು ಬಳಸುವಂತಿಲ್ಲ. ಸಂಸ್ಕರಿತ ನೀರು ಅಥವಾ ಇತರೆ ಪರ್ಯಾಯ ಮೂಲಗಳಿಂದಲೇ ಬಳಸಬೇಕು. ಈ ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಜಲಮಂಡಳಿ ಸರಬರಾಜು ಮಾಡುತ್ತಿರುವ ನೀರಿನ ಪ್ರಮಾಣದಲ್ಲಿ ಶೇ.50 ರವರೆಗೆ ಕಡಿತಗೊಳಿಸಿ 5,000 ರು. ದಂಡ ವಿಧಿಸಲಾಗುತ್ತದೆ. ಉಲ್ಲಂಘನೆ ಮುಂದುವರಿದಲ್ಲಿ ಪ್ರತಿದಿನ 500 ರು.ಹೆಚ್ಚುವರಿ ದಂಡ ವಿಧಿಸುವುದರ ಜೊತೆಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಮಂಡಳಿ ಎಚ್ಚರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

KPSC Scam: ಕೆಪಿಎಸ್‌ಸಿ ನೇಮಕಾತಿ ಹಗರಣ: ಸಿಬಿಐಗೆ ವಹಿಸಲು ಹೈಕೋರ್ಟ್‌ ಇಂಗಿತ, ಹೇಳಿದ್ದೇನು?
KPSC Scam: ಈ ಎರಡು ಜಿಲ್ಲೆಗಳಲ್ಲಿ 120 ಎಕರೆ ಭೂ ಖರೀದಿ! ಕೆಪಿಎಸ್‌ಸಿ ಸಾಹುಕಾರನ ವಿರುದ್ಧ ಮತ್ತೊಂದ ದೂರು!