
ವಿಜಯಪುರ[ಜ.31]: ಟ್ಯಾಂಕರ್ ಮೂಲಕ ಬಾವಿಗೆ ನೀರು ತುಂಬುವ ಸಮಯದಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮದ ತೋಟದ ವಸ್ತಿಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಗ್ರಾಮದ ಮಾಳಪ್ಪ ಅವದುರಿಸಿದ್ದ ನರೂಟಿ (24) ಸ್ಥಳದಲ್ಲೇ ಮೃತಪಟ್ಟವ್ಯಕ್ತಿ. ರಾತ್ರಿ ಮಲ್ಲಿಕಾರ್ಜುನ ಕೊಂಗನಳ್ಳಿ ಎಂಬುವರ ಹೊಲದಲ್ಲಿ ಬಾವಿಗೆ ನೀರು ಪೂರೈಕೆ ಮಾಡಲು ಟ್ರ್ಯಾಕ್ಟರ್ ಹಿಂಬದಿ ನಡೆಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಟ್ರ್ಯಾಕ್ಟರ್ ಟ್ಯಾಂಕರ್ ಸಮೇತ ಬಾವಿಗೆ ಬಿದ್ದಿದೆ. ಆಗ ಚಾಲಕನಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಅಸುನೀಗಿದ್ದಾನೆ.
ಕ್ರೇನ್ ಮೂಲಕ ಟ್ರ್ಯಾಕ್ಟರ್ ಅನ್ನು ಹೊರ ತೆಗೆಯಲಾಗಿದೆ. ಕಳೆದ ವರ್ಷವೇ ಮಾಳಪ್ಪನ ವಿವಾಹವಾಗಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ