
ಧಾರವಾಡ (ಡಿ.13): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿ ಕೊಡದೇ ಇದ್ದರೆ ಏನಂತೆ, ಮುಂದೆ ಇನ್ನೊಬ್ಬ ಮುಖ್ಯಮಂತ್ರಿ ಬರುತ್ತಾರೆ. ಅವರಿಂದಲೇ ನಾವು ಮೀಸಲಾತಿ ಪಡೆಯುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಷಯವಾಗಿ ಸುವರ್ಣಸೌಧದ ಎದುರು ನಡೆದ ಪ್ರತಿಭಟನೆ ವೇಳೆ ನಡೆದ ಲಾಠಿಚಾರ್ಜ್ ವಿರೋಧಿಸಿ ಗುರುವಾರ ಇಲ್ಲಿಯ ಜ್ಯೂಬಿಲಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಂಚಮಸಾಲಿ ಹೋರಾಟ ಅಸಂವಿಧಾನಿಕ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸ್ವಾಮೀಜಿ, ನಮ್ಮ ಬೇಡಿಕೆ ಸಂವಿಧಾನ ಬದ್ಧವಾಗಿದೆ. ಆದರೆ, ಮುಖ್ಯಮಂತ್ರಿಯವರು ನಮ್ಮ ಬೇಡಿಕೆಯೇ ಸಂವಿಧಾನ ವಿರೋಧಿ ಎಂದಿದ್ದು ಖಂಡನೀಯ. ಡಾ.ಬಿ.ಆರ್. ಅಂಬೇಡ್ಕರ್ ಅವರು ಬರೀ ಇವರ ಸ್ವತ್ತಲ್ಲ. ಅಂಬೇಡ್ಕರ್ ಹಾಗೂ ಅವರ ಸಂವಿಧಾನ ನಮಗೂ ಅನ್ವಯ ಆಗುತ್ತದೆ. ಹೋರಾಟದಿಂದಲೇ ನಮ್ಮ ಸಮಾಜ 2ಎ ಮೀಸಲಾತಿ ಪಡೆದುಕೊಳ್ಳಲು ಪ್ರಯತ್ನಿಸುತ್ತದೆ ಎಂದರು.
ಸಿದ್ದರಾಮಯ್ಯನವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡದೇ ಇದ್ದರೆ ಏನಂತೆ, ಮುಂದೆ ಇನ್ನೊಬ್ಬ ಮುಖ್ಯಮಂತ್ರಿ ಬರುತ್ತಾರೆ. ಅವರಿಂದಲೇ ನಾವು ಮೀಸಲಾತಿ ಪಡೆಯುತ್ತೇವೆ ಎಂದು ಮಾರ್ಮಿಕವಾಗಿ ನುಡಿದರು.
10 ಸಾವಿರ ಜನ ನುಗ್ಗಿದಾಗ ಲಾಠಿ ಬೀಸದೆ ಮುತ್ತು ಕೊಡಬೇಕಾ? : ಪರಮೇಶ್ವರ್
ಮುಖ್ಯಮಂತ್ರಿಯವರು ಸುಳ್ಳು ಹೇಳಿ ಪಂಚಮಸಾಲಿ ಮೀಸಲಾತಿ ಹೋರಾಟದ ಹಾದಿ ತಪ್ಪಿಸುತ್ತಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡದಿದ್ದರೆ ಹೇಗೆ ಪಡೆಯಬೇಕು ಎಂಬುವುದು ನಮಗೂ ಗೊತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ, ಲಿಂಗಾಯತ ಪಂಚಮಸಾಲಿ ಸಮಾಜದ ಶಾಸಕರು, ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮೀಸಲಾತಿ ಹೋರಾಟದಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ