
ಮೈಸೂರು : ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧ ಕುರಿತು ಪ್ರತಿಕ್ರಿಯಿಸಿ, ಶಾಲಾ ಆವರಣದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಸುತ್ತೋಲೆ ಹೊರಡಿಸಿದ್ದರು. ಅದನ್ನೇ ನಾವೀಗ ಜಾರಿಗೊಳಿಸುತ್ತಿದ್ದೇವೆ. ಸರ್ಕಾರದ ಆದೇಶ ಕೇವಲ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಮಾತ್ರವಲ್ಲ, ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೂ ಅನ್ವಯವಾಗುತ್ತದೆ. ಸರ್ಕಾರಿ ಶಾಲೆ, ಆಟದ ಮೈದಾನ, ಸರ್ಕಾರಿ ಸ್ಥಳಗಳು, ಉದ್ಯಾನವನಗಳಲ್ಲಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.
ಶಾಲಾ ಆವರಣದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ, ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಸುತ್ತೋಲೆ ಹೊರಡಿಸಿದ್ದರು.
I Love RSS Campaign: ಬಿಜೆಪಿ ನಾಯಕರಿಂದ ‘ಐ ಲವ್ ಆರ್‌ಎಸ್‌ಎಸ್’ ಅಭಿಯಾನ: ಪ್ರಿಯಾಂಕ್ ಖರ್ಗೆಗೆ ಟಾಂಗ್
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆಯವರು ಸರ್ಕಾರದ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬೆನ್ನಲ್ಲೇ ಕಲಬುರಗಿ ನಗರದಲ್ಲಿ ಬಿಜೆಪಿ ನಾಯಕರು ಬೀದಿಗಿಳಿದು, ‘ಐ ಲವ್ ಆರ್‌ಎಸ್‌ಎಸ್’ ಪೋಸ್ಟರ್ ಅಭಿಯಾನ ಶುರು ಮಾಡಿದ್ದಾರೆ.
‘ಯಾರು ಭಾರತವನ್ನು ಪ್ರೀತಿಸುತ್ತಾರೋ, ಅವರು ಆರ್‌ಎಸ್‌ಎಸ್ ಅನ್ನೂ ಪ್ರೀತಿಸುತ್ತಾರೆ’ ಎಂದು ಇಲ್ಲಿನ ಪ್ರಮುಖ ರಸ್ತೆ, ವೃತ್ತಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ಬಿಜೆಪಿ ನಾಯಕರು ಸಚಿವ ಪ್ರಿಯಾಂಕ್ ಖರ್ಗೆಗೆ ಭರ್ಜರಿ ಟಾಂಗ್ ನೀಡಿದ್ದಾರೆ. ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಸೇರಿದಂತೆ ಬಿಜೆಪಿಯ ಅನೇಕ ಪ್ರಮುಖರು, ಯುವ ಮುಖಂಡರು ನಗರದಲ್ಲಿನ ಪೋಸ್ಟರ್ ಅಂಟಿಸುವ ಅಭಿಯಾನದಲ್ಲಿ ಪಾಲ್ಗೊಂಡು ಗಮನ ಸೆಳೆದರು
ಸಂಘ ಪರಿವಾರ ರಾಷ್ಟ್ರಾದ್ಯಂತ ದೇಶಭಕ್ತಿಗೆ ಪ್ರೇರಣೆ ನೀಡುತ್ತದೆ, ಇದು ಸಚಿವರಿಗೆ ಗೊತ್ತಿಲ್ಲವೆ? ಸಂಘದ ಜನ್ಮ ಶತಾಬ್ದಿ ವರ್ಷಾಚರಣೆಯಲ್ಲಿ ಇಡೀ ದೇಶದ ಜನರೇ ಪಾಲ್ಗೊಂಡು ಹರ್ಷ ಪಡುತ್ತಿರುವಾಗ ಸಚಿವ ಖರ್ಗೆಯವರು ಮೊಸರಲ್ಲಿ ಕಲ್ಲು ಹುಡುಕುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಖರ್ಗೆ ಬರೆದ ಪತ್ರವನ್ನು ಉಗ್ರವಾಗಿ ಖಂಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ