ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)50 ವರ್ಷಗಳಿಂದ ಪುಂಡಾಟಿಕೆಯಲ್ಲಿ ತೊಡಗಿದೆ. ಅದನ್ನು ಹೇಗೆ ನಿಯಂತ್ರಿಸಬೇಕು ಎಂಬುದು ಸರ್ಕಾರಕ್ಕೆ ತಿಳಿದಿದೆ. ಎಂಇಎಸ್ ಮುಖಂಡರ ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವ ಕೆಲಸ ಸರ್ಕಾರಕ್ಕೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ (ಡಿ.19) : ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)50 ವರ್ಷಗಳಿಂದ ಪುಂಡಾಟಿಕೆಯಲ್ಲಿ ತೊಡಗಿದೆ. ಅದನ್ನು ಹೇಗೆ ನಿಯಂತ್ರಿಸಬೇಕು ಎಂಬುದು ಸರ್ಕಾರಕ್ಕೆ ತಿಳಿದಿದೆ. ಎಂಇಎಸ್ ಮುಖಂಡರ ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವ ಕೆಲಸ ಸರ್ಕಾರಕ್ಕೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಂಇಎಸ್ ಬೆಳಗಾವಿಯಲ್ಲಿ ಮಹಾಮೇಳ ನಡೆಸುತ್ತಿದೆ. ಇವರ ಪುಂಡಾಟಿಕೆ ಇದೇ ಮೊದಲಲ್ಲ. ಅದನ್ನು ಯಾವ ರೀತಿ ಹದ್ದುಬಸ್ತಿನಲ್ಲಿಡಬೇಕು ಎಂಬುದು ಗೊತ್ತಿದೆ. ಆ ಕೆಲಸವನ್ನು ಮಾಡಲಾಗುವುದು ಎಂದರು.
ಬಿಜೆಪಿಗೆ ಬಿಎಸ್‌ವೈ ನಾಯಕತ್ವದ ಶ್ರೀರಕ್ಷೆಯಿದೆ: ಸಿಎಂ ಬೊಮ್ಮಾಯಿ
ಎಸ್ಸಿ,ಎಸ್ಟಿಮೀಸಲಾತಿ ಬಿಲ್ ಮಂಡನೆ: ಸೋಮವಾರ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತಿದೆ. ಎಸ್ಸಿ, ಎಸ್ಟಿಮೀಸಲಾತಿ ಮಸೂದೆ ಸೇರಿ ಇತರ ಇಲಾಖೆಗಳ ಹಲವಾರು ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಸಿದ್ದು ತಿಳಿದು ಮಾತನಾಡಲಿ: ಇದೇ ವೇಳೆ ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಮಾತನಾಡುವ ಮೊದಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಪೂರ್ಣವಾಗಿ ಅರ್ಥೈಸಿಕೊಳ್ಳಲಿ. ಆನಂತರ ಪ್ರತಿಕ್ರಿಯೆ ನೀಡಿದರೆ ಸಿದ್ದರಾಮಯ್ಯನವರ ಸ್ಥಾನಕ್ಕೆ ಘನತೆ ಬರುತ್ತದೆ. ಆ ಘಟನೆಯನ್ನು ಆಕಸ್ಮಿಕ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಮಹಾರಾಷ್ಟ್ರ ಬೆದರಿಕೆ; ಕರ್ನಾಟಕ ಸೇರಲ್ಲ ಎಂದ 10 ಮಹಾ ಗ್ರಾಮಗಳು!