
ಮದ್ದೂರು: ರಾಮಜನ್ಮ ಭೂಮಿಯಲ್ಲಿ ರಾಮ ಮಂದಿರ ಇಲ್ಲ ಎಂದ ಮೇಲೆ ಹಿಂದೂಸ್ತಾನದಲ್ಲಿ ಇನ್ನಾವ ಮಂದಿರ ಕಟ್ಟುವುದು? ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇಬೇಕು.
ಇದು ಪ್ರತಿಯೊಬ್ಬ ಹಿಂದೂಗಳ ಆಶಯವೂ ಆಗಿದೆ ಎಂದು ಉಡುಪಿ ಸೋದೆ ವಾದಿರಾಜ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅನಗತ್ಯ ವಿಳಂಬ ಮಾಡುತ್ತಿದೆ ಎಂಬುದು ಹಿಂದೂಪರ ಸಂಘಟನೆಗಳ ವಾದವಾಗಿದೆ ಎಂದರು.
ಹಿಂದೂಗಳನ್ನು ಒಟ್ಟುಗೂಡಿಸಿದರೆ ಮಾತ್ರ ಮಂದಿರ ನಿರ್ಮಾಣದ ಕೆಲಸ ಆಗಲು ಸಾಧ್ಯ. ಎಲ್ಲಾ ಹಿಂದೂಗಳು ಒಕ್ಕೊರಲಿನಿಂದ ಮನವಿ ಮಾಡುವಂತಹ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಹಿಂದೂಪರ ಸಂಘಟನೆಗಳು ಒಗ್ಗೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ