ಕ್ರೀಡಾ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆಗೆ ಒತ್ತು : ಕೇಂದ್ರ ಕ್ರೀಡಾ ಸಚಿವ ರಿಜಿಜು

By Suvarna NewsFirst Published Feb 21, 2021, 2:18 PM IST
Highlights

ಯುವಕರನ್ನು ಹೆಚ್ಚು ಹೊಂದಿರುವ ನಾವು ಒಲಂಪಿಕ್‌ನಲ್ಲಿ ಹೆಚ್ಚು ಮೆಡಲ್‌ಗಳನ್ನು ಗೆಲ್ಲುವತ್ತ ಗಮನ ಹರಿಸಬೇಕು ಎಂದು ಕೇಂದ್ರ ಕ್ರೀಡಾ ಸಚಿವ ಕಿರನ್ ರಿಜಿಜು ಹೇಳಿದರು.

ಶಿವಮೊಗ್ಗ (ಫೆ.21): ಈ ಬಾರಿಯ 2024 ರ ಒಲಿಂಪಿಕ್ ಕ್ರೀಡೆಗಳಲ್ಲಿ ಭಾರತ ಪದಕಗಳನ್ನು ಗೆಲ್ಲಲೇ ಬೇಕಿದೆ. ಪ್ರಪಂಚದಲ್ಲಿ  ಯುವಕರನ್ನು ಹೊಂದಿರುವ ದೇಶ ನಮ್ಮದು ಎಂದು ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಹೇಳಿದರು. 

ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡ  ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜೂಜಿ   ಕ್ರೀಡಾ ಚಟುವಟಿಕೆಗಳಲ್ಲಿ ಸಮಗ್ರ ಬದಲಾವಣೆ ತರಬೇಕಿದೆ ಎಂದರು.

ಜಗತ್ತಿನ ಅತಿದೊಡ್ಡ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಕ್ರಿಕೆಟಿಗರು ಫಿದಾ..!

ಇಡಿ ರಾಜ್ಯದಲ್ಲಿ ಶಿವಮೊಗ್ಗವನ್ನು ಕ್ರೀಡಾ ಚಟುವಟಿಕೆಗಳ ಕೇಂದ್ರ ವನ್ನಾಗಿ ರೂಪಿಸಲಾಗುತ್ತದೆ. ಶಿವಮೊಗ್ಗದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಸಾದನೆ ಮಾಡಬೇಕೆಂದು ಆಶಯ ನಮ್ಮದು.  ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ ಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದರು. 

ಇನ್ನು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ರೀಡಾ ಸಚಿವ ನಾರಾಯಣ ಗೌಡ ಮಾತನಾಡಿ ಸಂಸದ ಬಿ ವೈ ರಾಘವೇಂದ್ರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಒಳಾಂಗಣ ಕ್ರೀಡಾಂಗಣ ಕ್ಕೆ ಎರಡು ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದರು.

click me!