ಗಡಿ ವಿವಾದದಲ್ಲಿ ಕರ್ನಾಟಕದ ವಿರುದ್ಧ ನಿರಂತರವಾಗಿ ಅಸಂಬದ್ಧ ಮಾತುಗಳನ್ನಾಡುತ್ತಿರುವ ಮಹಾರಾಷ್ಟ್ರದ ಗಡಿ ನೋಡಲ್ ಸಚಿವ ಶಂಭುರಾಜ್ ದೇಸಾಯಿ, ‘ಕರ್ನಾಟಕದ ವಿಧಾನಸಭೆ ಪಾಸ್ ಮಾಡಿದ ನಿರ್ಣಯಕ್ಕಿಂತ ಹತ್ತು ಪಟ್ಟು ಹೆಚ್ಚು ಬಲವಾದ ನಿರ್ಣಯವನ್ನು ಮುಂದಿನ ವಾರ ನಾವು ಅಂಗೀಕರಿಸುತ್ತೇವೆ’ ಎಂದು ಹೇಳಿದ್ದಾರೆ.
ನಾಗ್ಪುರ (ಡಿ.24): ಗಡಿ ವಿವಾದದಲ್ಲಿ ಕರ್ನಾಟಕದ ವಿರುದ್ಧ ನಿರಂತರವಾಗಿ ಅಸಂಬದ್ಧ ಮಾತುಗಳನ್ನಾಡುತ್ತಿರುವ ಮಹಾರಾಷ್ಟ್ರದ ಗಡಿ ನೋಡಲ್ ಸಚಿವ ಶಂಭುರಾಜ್ ದೇಸಾಯಿ, ‘ಕರ್ನಾಟಕದ ವಿಧಾನಸಭೆ ಪಾಸ್ ಮಾಡಿದ ನಿರ್ಣಯಕ್ಕಿಂತ ಹತ್ತು ಪಟ್ಟು ಹೆಚ್ಚು ಬಲವಾದ ನಿರ್ಣಯವನ್ನು ಮುಂದಿನ ವಾರ ನಾವು ಅಂಗೀಕರಿಸುತ್ತೇವೆ’ ಎಂದು ಹೇಳಿದ್ದಾರೆ. ಗಡಿ ವಿವಾದದಲ್ಲಿ ಮಹಾರಾಷ್ಟ್ರ ನಡೆದುಕೊಳ್ಳುತ್ತಿರುವ ರೀತಿಯನ್ನು ಖಂಡಿಸಿ ಹಾಗೂ ಕರ್ನಾಟಕದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂದು ಘೋಷಿಸಿ ಕರ್ನಾಟಕದ ವಿಧಾನಸಭೆಯಲ್ಲಿ ಗುರುವಾರ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಂಭುರಾಜ್ ದೇಸಾಯಿ, ‘ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದದ ಬಗ್ಗೆ ನಾವು ವಿಸ್ತೃತವಾದ ನಿರ್ಣಯ ಮಂಡಿಸುತ್ತೇವೆ. ಅದು ಕರ್ನಾಟಕದಲ್ಲಿ ಪಾಸ್ ಮಾಡಿದ್ದಕ್ಕಿಂತ 10 ಪಟ್ಟು ಪರಿಣಾಮಕಾರಿಯಾಗಿರುತ್ತದೆ. ಸೋಮವಾರ ಈ ನಿರ್ಣಯ ಅಂಗೀಕರಿಸಲಾಗುವುದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಗಿನ ಸಭೆಯ ನಂತರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆ ಸಭೆಯಲ್ಲಿ ಆದ ನಿರ್ಧಾರದಂತೆ ನಡೆದುಕೊಳ್ಳುತ್ತಿಲ್ಲ.
ಸಂಜಯ್ ರಾವುತ್ ಚೀನಾ ಏಜೆಂಟ್, ದೇಶದ್ರೋಹಿ: ಸಿಎಂ ಬೊಮ್ಮಾಯಿ
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಬ್ಬರೂ ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಪಡಿಸಿಕೊಳ್ಳಲು ಬಯಸುತ್ತಿದ್ದಾರೆ’ ಎಂದು ಹೇಳಿದರು. ವಿಧಾನಮಂಡಲದಲ್ಲಿ ನಿರ್ಣಯ ಅಂಗೀಕರಿಸಿದ ನಂತರ ಅದನ್ನು ಕೇಂದ್ರ ಗೃಹ ಸಚಿವಾಲಯದ ಗಮನಕ್ಕೆ ತರುತ್ತೇವೆ. ಕರ್ನಾಟಕಕ್ಕೆ ಮಹಾರಾಷ್ಟ್ರದ ನಾಯಕರು ಹೋಗಲು ಅಡ್ಡಿಪಡಿಸುತ್ತಿರುವ ಬಗ್ಗೆಯೂ ದೂರು ನೀಡುತ್ತೇವೆ ಎಂದೂ ತಿಳಿಸಿದರು.
ಗಡಿ ನಿರ್ಣಯ ಮಾಡುತ್ತೇವೆ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಮವಾರ ನಿರ್ಣಯ ಅಂಗೀಕಾರ ಮಾಡುವುದಾಗಿ ಮಹಾರಾಷ್ಟ್ರ ಅಬಕಾರಿ, ಗಡಿ ಉಸ್ತುವಾರಿ ಸಚಿವ ಶಂಭುರಾಜ್ ದೇಸಾಯಿ ಹೇಳಿದ್ದಾರೆ. ಮಹಾರಾಷ್ಟ್ರದ ನಾಗ್ಫುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಕುರಿತು ಕರ್ನಾಟಕ ಸರ್ಕಾರಕ್ಕಿಂತ ಹತ್ತು ಪಟ್ಟು ಹೆಚ್ಚು ಸಮಗ್ರ ಪ್ರಸ್ತಾವನೆಯನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಂಡಿಸುತ್ತೇವೆ ಎಂದಿದ್ದಾರೆ.
ಕರ್ನಾಟಕ ಸರ್ಕಾರ ಮಹಾರಾಷ್ಟ್ರಕ್ಕೆ ಒಂದು ಇಂಚು ಜಾಗವನ್ನೂ ನೀಡುವುದಿಲ್ಲ ಎಂದು ನಿರ್ಣಯ ಅಂಗೀಕರಿಸಿತ್ತು. ಅಲ್ಲದೆ, ಕರ್ನಾಟಕದತ್ತ ಯಾರಾದರೂ ಕಣ್ಣು ಹಾಯಿಸಿದರೆ ಸುಮ್ಮನಿರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಾರಾಷ್ಟ್ರಕ್ಕೆ ಎಚ್ಚರಿಕೆ ನೀಡಿದರು. ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ಆ ನಂತರವೂ ಕರ್ನಾಟಕದ ಮುಖ್ಯಮಂತ್ರಿ ತೆಗೆದುಕೊಂಡ ನಿರ್ಧಾರ ಸರಿಯಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪ್ರಕಾರ, ಈ ವಿವಾದವನ್ನು ಚರ್ಚೆಯ ಮೂಲಕ ಪರಿಹರಿಸಬಹುದು ಎಂದು ಹೇಳಿದರು.
ಕರ್ನಾಟಕಕ್ಕೆ ನೀರು ಬಂದ್: ಮಹಾರಾಷ್ಟ್ರ ಸಚಿವ ಶಂಭುರಾಜ್ ಧಮಕಿ
ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಗಡಿ ವಿವಾದ ಸಂಬಂಧ ಪ್ರಸ್ತಾವನೆಯನ್ನು ಅಂಗೀಕರಿಸಬೇಕಿತ್ತು. ಆದರೆ, ಬಿಜೆಪಿ ಶಾಸಕ ಮುಕ್ತಾ ತಿಲಕ ಅವರ ನಿಧನದ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆ ಮಂಡನೆಯಾಗಲಿಲ್ಲ. ಹಾಗಾಗಿ ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಈ ಪ್ರಸ್ತಾವನೆ ಕರ್ನಾಟಕ ಸರ್ಕಾರಕ್ಕಿಂತ ಹತ್ತು ಪಟ್ಟು ಹೆಚ್ಚು ಪರಿಣಾಮಕಾರಿಯಾಗಿದೆ. ಇದು ಮರಾಠಿ ಭಾಷಿಕರ ಹಿತಾಸಕ್ತಿಯಿಂದ ಕೂಡಿದೆ ಎಂದರು. ಗಡಿ ಕುರಿತು ನಿರ್ಣಯ ಅಂಗೀಕರಿಸಿದ ಬಳಿಕ ಮಹಾರಾಷ್ಟ್ರ ನಾಯಕರನ್ನು ಕರ್ನಾಟಕ ಗಡಿ ಪ್ರವೇಶಿಸಲು ನಿರ್ಬಂಧ ಹೇರಲಾಗುತ್ತದೆ. ಈ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ಶಂಭುರಾಜ್ ದೇಸಾಯಿ ಹೇಳಿದರು.