ಶಿವಮೊಗ್ಗ (ಜು.18): ರಾಜ್ಯದಲ್ಲಿ ಈಗಾಗಲೆ ವರುಣನ ಅಬ್ಬರ ಜೋರಾಗಿದೆ. ಇನ್ನು 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಜುಲೈ 21ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗ ಕೆಲವೆಡೆ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜು.18 ಮತ್ತು 21ರವರೆಗೆ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
undefined
4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್ ಅಲರ್ಟ್
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 18ರಿಂದ 19ರವರೆಗೆ ಆರೆಂಜ್ ಅಲರ್ಟ್ ಇದ್ದು, ಜುಲೈ 20 ಮತ್ತು 21ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ ಇದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಜು.19 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಬೆಳಗ್ಗೆಯಿಂದಲೂ ತುಂತುರು ಮಳೆಯಾಗುತ್ತಿದೆ.