ಚಂಡಮಾರುತ, ಸುಳಿಗಾಳಿ ಎಫೆಕ್ಟ್: ರಾಜ್ಯದಲ್ಲಿ ಡಿ.10ರವರೆಗೆ ಮಳೆ -ಎಲ್ಲೆಲ್ಲಿ ಎಫೆಕ್ಟ್?

Kannadaprabha News   | Asianet News
Published : Dec 07, 2020, 07:04 AM IST
ಚಂಡಮಾರುತ, ಸುಳಿಗಾಳಿ ಎಫೆಕ್ಟ್: ರಾಜ್ಯದಲ್ಲಿ  ಡಿ.10ರವರೆಗೆ ಮಳೆ -ಎಲ್ಲೆಲ್ಲಿ ಎಫೆಕ್ಟ್?

ಸಾರಾಂಶ

ಸುಳಿಗಾಳಿ ಹಾಗೂ ಚಂಡಮಾರುತದ ಪರಿಣಾಮವಾಗಿ  ರಾಜ್ಯದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಎಲ್ಲೆಲ್ಲಿ..?

ಬೆಂಗಳೂರು (ಡಿ.07): ಹವಾಮಾನದಲ್ಲಿನ ನಿರಂತರ ಬದಲಾವಣೆಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಮೂರು ದಿನಗಳ ಕಾಲ ಅಂದರೆ, ಡಿ.10ರವರೆಗೆ ಹಗುರದಿಂದ ಸಾಧಾರಣ ಮಳೆ ಹಾಗೂ ಚಳಿಯ ವಾತಾವರಣ ಮುಂದುವರಿಯಲಿದೆ.

 ಕನ್ಯಾಕುಮಾರಿ ಭಾಗದಲ್ಲಿ ‘ಬುರೆವಿ’ ಚಂಡಮಾರುತದ ಪ್ರಭಾವ ಸಂಪೂರ್ಣ ತಗ್ಗಿಲ್ಲ. ಈ ಮಧ್ಯೆ ಬಂಗಾಳಕೊಲ್ಲಿಯ ಆಗ್ನೇಯ ಭಾಗದ ಅಂಡಮಾನ್‌ ಬಳಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿಯ ಲಕ್ಷಣಗಳು ಕಂಡುಬಂದಿವೆ. ಈ ಕಾರಣಗಳಿಂದ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಡಿ.10ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. 

ಬುರೆವಿ ಅಬ್ಬರ ಕ್ಷೀಣಿಸಿದ್ರೂ ಬೆಂಗ್ಳೂರಲ್ಲಿ ಹೆಚ್ಚಾದ ಚಳಿ ...

ಈ ಮೇಲ್ಮೈ ಸುಳಿಗಾಳಿ ತೀವ್ರಗೊಂಡರೆ ‘ಬುರೆವಿ’ ಬೆನ್ನಲ್ಲೇ ಮತ್ತೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಡಿ.9ರವರೆಗೆ ತುಂತುರು, ಡಿ.10ಕ್ಕೆ ಸಾಧಾರಣ ಮಳೆ ಆಗಲಿದೆ. ಕರಾವಳಿ ಭಾಗದಲ್ಲಿ ಡಿ.10ರವರೆಗೆ ತುಂತುರು ಮಳೆ ಬೀಳಲಿದೆ.

ಉತ್ತರ ಒಳನಾಡಿನಲ್ಲಿ ಡಿ.8ರವರೆಗೆ ಒಣಹವೆ ಮುಂದುವರಿಯಲಿದ್ದು, ಡಿ.9ಕ್ಕೆ ಅಲ್ಲಲ್ಲಿ ತುಂತುರು ಮಳೆ ಸಂಭವ ಇದೆ. ಡಿ.6ರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಹಿಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಮಾತ್ರ ಸಾಮಾನ್ಯ ಮಳೆ ಬಿದ್ದಿದೆ. ಉಳಿದೆಲ್ಲ ಕಡೆಗಳಲ್ಲಿ ಚಳಿಯ ವಾತಾವರಣ ಕಂಡು ಬಂದಿದೆ. ರಾಜ್ಯದ ಕನಿಷ್ಠ ತಾಪಮಾನ ವಿಜಯಪುರದಲ್ಲಿ 11 ಡಿಗ್ರಿ ಸೆಲ್ಸಿಯಸ್‌ ಹಾಗೂ ಗರಿಷ್ಠ ತಾಪಮಾನ 35.5 ಡಿಗ್ರಿ ಸೆಲ್ಸಿಯಸ್‌ ಕಾರವಾರದಲ್ಲಿ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!