ಮುಂದಿನ 6 ದಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

By Ravi Janekal  |  First Published Oct 11, 2024, 5:49 PM IST

ಕರ್ನಾಟಕ, ಗೋವಾ, ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 6 ದಿನಗಳವರೆಗೆ ರಾಜ್ಯಾದ್ಯಂತ ಎಲ್ಲೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರು (ಅ.11): ಕರ್ನಾಟಕ, ಗೋವಾ, ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 6 ದಿನಗಳವರೆಗೆ ರಾಜ್ಯಾದ್ಯಂತ ಎಲ್ಲೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಆಕ್ಟೊಬರ್ 11 ರಿಂದ 14 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ ದಾವಣಗೆರೆ, ಬಳ್ಳಾರಿ, ರಾಮನಗರದಲ್ಲಿ ಭಾರೀ ಮಳೆಯಾಗಲಿದೆ. ಇನ್ನು ದಕ್ಷಿಣ ಭಾಗದ ಕೆಲವು ಜಿಲ್ಲೆಗಳಲ್ಲಿ ಅಕ್ಟೊಬರ್ 12 ರಂದು ಭಾರೀ ಮಳೆ ಸಾಧ್ಯತೆಯಿದೆ ಎಂದು ತಿಳಿಸಿದೆ.

Latest Videos

undefined

ಕರ್ನಾಟಕದಲ್ಲಿ ವರುಣನ ಅಬ್ಬರ, ಚಾರ್ಮಾಡಿ ಘಾಟ್‌ನಲ್ಲಿ ಭೂಕುಸಿತ: ಇನ್ನೂ ನಾಲ್ಕು ದಿನ ಮಳೆ

ಅ.15 ಮತ್ತು 16 ರಂದು ವ್ಯಾಪಕ ಮಳೆ:
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು,ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅ.11 ರಿಂದ 16 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

click me!