ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆ

By Suvarna NewsFirst Published Jun 15, 2021, 10:15 PM IST
Highlights

* ಕರಾವಳಿ ಜಿಲ್ಲೆಗಳಲ್ಲಿ ಜೂ.15 ರಿಂದ 19 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ
* ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ
* ಜೂ.18 ಹಾಗೂ 19 ರಂದು ಬಹುತೇಕ ಎಲ್ಲಾ ಕಡೆ ಮಳೆಯಾಗುವ ಮುನ್ಸೂಚನೆ
* ಹಲವು ಜಿಲ್ಲೆಗಳಲ್ಲಿ ಆರೇಂಜ್, ಯೆಲ್ಲೋ ಅಲರ್ಟ್

ಬೆಂಗಳೂರು, (ಜೂನ್.15): ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಾನ್ಸೂನ್ ಚುರುಕಾಗಿದೆ. 

ರಾವಳಿ ಜಿಲ್ಲೆಗಳಲ್ಲಿ ಜೂ.17 ರಿಂದ ಇನ್ನೂ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ ನಿಡಿದೆ.

ನೆರೆ ಪರಿಸ್ಥಿತಿ ಎದುರಿಸಲು ರಾಜ್ಯ ಸಿದ್ಧ : ಪಾಠ ಕಲಿತ ಸರ್ಕಾರ

* ಜೂ.15 ರಿಂದ 19 ರವರೆಗೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂ.15 ರಿಂದ 16 ರವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

* ಜೂ.17 ರಿಂದ 19 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂ.15 ರಿಂದ 17 ರವರೆಗೆ ವ್ಯಾಪಕ ಮಳೆಯಾಗಲಿದೆ.

*  ಜೂ.18 ಹಾಗೂ 19 ರಂದು ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆಗಳಿವೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಜೂ.15 ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ

* ಜೂ.16, 17 ರಂದು ಮಲೆನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

* ಬೆಳಗಾವಿ, ಹಾವೇರಿ, ಧಾರವಾಡ ಹಾಗೂ ಗದಗ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಜೂ.15 ರಿಂದ 17 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

click me!