ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಸಬೇಕೋ? ಬೇಡವೋ ಎನ್ನುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದ್ರೆ, ಇತ್ತ ಸಚಿವರೊಬ್ಬರು ಕರ್ಫ್ಯೂ ಮುಂದುವರಿಕೆ ಬಗ್ಗೆ ಸುಳಿವು ಕೊಟ್ಟಿದ್ದಾರೆ.
ಹುಬ್ಬಳ್ಳಿ, (ಏ.25): ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇದನ್ನು ಮುಂದಿನ ವಾರ ವಿಸ್ತರಣೆ ಮಾಡಬೇಕೋ? ಬೇಡವೋ ಎನ್ನುವ ಬಗ್ಗೆ ಚಿಂತನೆ ನಡೆಸಿದೆ.
ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಅವರು ನಾಳೆ (ಸೋಮವಾರ) ಸಚಿವ ಸಂಪುಟ ಸಭೆ ಕರೆದಿದ್ದಾರೆ. ಆದ್ರೆ, ಸಂಪುಟ ಸಭೆಗೂ ಮುನ್ನವೇ ಸಚಿವ ಜಗದೀಶ್ ಶೆಟ್ಟರ್ ಅವರು ಮುಂದಿನ ವಾರವೂ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.
undefined
ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್: ಮುಂಬೈ ಮಾದರಿಯಲ್ಲಿ ಕ್ರಮ!
ಹೌದು...ಇಂದು (ಭಾನುವಾರ) ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್ ಬಗ್ಗೆಯೂ ಚರ್ಚೆ ನಡೀತಾ ಇದೆ. ನಾಳೆಯ (ಏ.26) ಕ್ಯಾಬಿನೆಟ್ ಸಭೆಯಲ್ಲಿ ಇದು ಚರ್ಚೆ ಆಗಲಿದೆ. ಕ್ಯಾಬಿನೆಟ್‌ನಲ್ಲಿ ಸಿಎಂ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
ಇನ್ನು ಅತ್ತ ಬೆಂಗಳೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವೀಕೆಂಡ್ ಕರ್ಫ್ಯೂ ಮುಂದುವರೆಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದನ್ನು ಇಲ್ಲ ಸ್ಮರಿಸಬಹುದು.
ಮತ್ತೊಂದೆಡೆ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ಮುಂಬೈ ಮಾದರಿಯಲ್ಲಿ ಜನತಾ ಕರ್ಫ್ಯೂ ಸುಳಿವು ಕೊಟ್ಟಿದ್ದಾರೆ.