Karnataka Monsoon ನೈಋತ್ಯ ಮಾನ್ಸೂನ್ ಪ್ರವೇಶ: ಕರ್ನಾಟಕದಲ್ಲಿ ಮಳೆ ಮುನ್ಸೂಚನೆ

By Suvarna NewsFirst Published Jun 14, 2022, 11:40 AM IST
Highlights

* ಭಾರತ ಪ್ರವೇಶಿಸಿದ ನೈಋತ್ಯ ಮಾನ್ಸೂನ್
* ಕರ್ನಾಟಕದಲ್ಲೂ ಮಳೆಯ ಮುನ್ಸೂಚನೆ
* ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ 

ಬೆಂಗಳೂರು, (ಜೂನ್.14): ನೈಋತ್ಯ ಮುಂಗಾರು ಮಾರುತಗಳು ಅವಧಿಗಿಂತಲೂ ಮುನ್ನವೇ ಪ್ರವೇಶಿಸಿದ್ದು, ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ,  ಗುಜರಾತ್‌, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತೆಲಂಗಾಣ, ರಾಯಲಸೀಮಾ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಆಂಧ್ರಪ್ರದೇಶ, ಪಶ್ಚಿಮ ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಹೆಚ್ಚಿನ ಭಾಗಗಳಲ್ಲಿ ಮಳೆಯಾಗಲಿದೆ . ಮುಂದಿನ 5 ದಿನಗಳಲ್ಲಿ ಈಶಾನ್ಯ ಭಾರತ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

Karnataka Rain Updates: ರಾಜ್ಯದ 14 ಜಿಲ್ಲೆಗಳಲ್ಲಿ ವರುಣಾರ್ಭಟ : ಕರುನಾಡಿಗೆ 5 ದಿನ ಜಲ ಕಂಟಕ
 
ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ಭಾರತದ ಹಲವು ಭಾಗಗಳಲ್ಲೂ ಭಾರಿ ಮಳೆ ಸಾಧ್ಯತೆಯಿದೆ. ಜೂನ್ 15 ಮತ್ತು 17 ರ ನಡುವೆ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆ ಮುನ್ಸೂಚನೆ: ರಾಜ್ಯದ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. pic.twitter.com/7ZhwXpTn1d

— KSNDMC (@KarnatakaSNDMC)

ಕರ್ನಾಟಕದಲ್ಲೂ ಮಳೆ
ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗುತ್ತಿದ್ದು, ಇಂದಿನಿಂದ (ಮಂಗಳವಾರ) 3 ದಿನ ವರುಣನ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ, ಕರಾವಳಿಯಲ್ಲಿ ಹಳದಿ ಅಲರ್ಟ್​ (Yellow Alert) ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 15ರಿಂದ ಮಳೆ ಹೆಚ್ಚಾಗಲಿದೆ. ಜೂನ್ 16ರಿಂದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆ ಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ. 15ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಜೂ. 16ರಿಂದ ಮಳೆ ಬಿರುಸು ಪಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Rainfall Forecast: Isolated to scattered very light to moderate rains likely over SIK, NIK & Malnad districts and widespread very light to moderate rains likely over Coastal districts. pic.twitter.com/tj0nAqGAXO

— KSNDMC (@KarnatakaSNDMC)
click me!