
ಬೆಂಗಳೂರು (ಜುಲೈ.9): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಇಂದು ಬೃಹತ್ ಮುಷ್ಕರಕ್ಕೆ ಕರೆ ನೀಡಿವೆ. AITUC, CITU, HMS, INTUC, SEWA ಸೇರಿದಂತೆ ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಹೋರಾಟದಲ್ಲಿ ಭಾಗವಹಿಸಿದ್ದು, ಸುಮಾರು 25 ಕೋಟಿಗೂ ಹೆಚ್ಚು ಕಾರ್ಮಿಕರು ಈ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಕಾರ್ಮಿಕ ವಿರೋಧಿ, ರೈತ ವಿರೋಧಿ, ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ಖಂಡಿಸಿ ಈ ಬಂದ್ ಆಯೋಜಿಸಲಾಗಿದೆ.
ಭಾರತ್ ಬಂದ್‌ನಿಂದ ಏನೇನು ವ್ಯತ್ಯಯ?
ಈ ಬಂದ್‌ನಿಂದಾಗಿ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಗಾರ್ಮೆಂಟ್ಸ್, ಎಲ್‌ಐಸಿ, ಬಿಎಸ್‌ಎನ್‌ಎಲ್, ಇನ್ಶುರೆನ್ಸ್ ಕಚೇರಿಗಳು, ಮತ್ತು ಪಿಎಫ್ ಕಚೇರಿಗಳಂತಹ ಸಾರ್ವಜನಿಕ ವಲಯದಲ್ಲಿ ಭಾರೀ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಎಲ್‌ಐಸಿ, ಕಾರ್ಖಾನೆಗಳು, ಮತ್ತು ಬ್ಯಾಂಕ್ ವ್ಯವಹಾರಗಳು ಸ್ಥಗಿತಗೊಂಡಿವೆ.
ಏನೇನು ಇರಲಿವೆ:
ಬಸ್, ಮೆಟ್ರೋ, ರೈಲು, ಆಟೋ, ಖಾಸಗಿ ಬಸ್‌ಗಳು, ಶಾಲೆ-ಕಾಲೇಜು, ಹೋಟೆಲ್, ಸರ್ಕಾರಿ ಕಚೇರಿಗಳು, ಖಾಸಗಿ ಕಚೇರಿಗಳು, ಮಾರ್ಕೆಟ್, ಬೀದಿ ಬದಿ ವ್ಯಾಪಾರ, ಮತ್ತು ಆರೋಗ್ಯ ಸೇವೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲಿವೆ.
ಕಾರ್ಮಿಕರ ಬೇಡಿಕೆಗಳೇನು?
ಭಾರತ್ ಬಂದ್: ಟೌನ್‌ಹಾಲ್ ಮುಂಭಾಗ ಬಿಗಿ ಭದ್ರತೆ:
ದೇಶವ್ಯಾಪಿ ಕಾರ್ಮಿಕ ಸಂಘಟನೆಗಳ ಮುಷ್ಕರದ ಹಿನ್ನೆಲೆಯಲ್ಲಿ ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ಪೊಲೀಸ್ ಬಂದೋಬಸ್ತ್ ಜಾರಿಗೊಳಿಸಲಾಗಿದೆ. ಪೊಲೀಸರು ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆಗೆ ಅನುಮತಿ ನೀಡಿದ್ದರೂ, ಟೌನ್‌ಹಾಲ್ ಮುಂಭಾಗದಲ್ಲಿ ಕಾರ್ಮಿಕ ಸಂಘಟನೆಗಳು ಜಮಾಯಿಸುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ