ಭಯೋತ್ಪಾದಕರು ಹಾಗೂ ಭಯೋತ್ಪಾದಕ ಕೃತ್ಯಗಳಿಗೆ ಕಾಂಗ್ರೆಸ್ ಯಾವಾಗಲೂ ಅನುಕಂಪ ತೋರುತ್ತಲೇ ಬಂದಿದೆ. ಈಗ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಅಂದು ಡಿ.ಕೆ.ಶಿವಕುಮಾರ್ ಹೇಳಿದ ಹೇಳಿಕೆಯನ್ನು ಮಾಧ್ಯಮಗಳು ತೋರಿಸಬೇಕು. ಅದಕ್ಕೆ ಡಿ.ಕೆ.ಶಿವಕುಮಾರ್ ಮತ್ತೇನು ಹೇಳುತ್ತಾರೆ ನೋಡಿ ಎಂದ ಪ್ರಹ್ಲಾದ್ ಜೋಶಿ
ಧಾರವಾಡ(ಜು.02): ಶಿವಮೊಗ್ಗ, ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಚಾಜ್‌ರ್‍ಶೀಟ್ ಸಲ್ಲಿಸಿದ್ದು, ಅದರಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಧಾರವಾಡದಲ್ಲಿ ಶನಿವಾರ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಈಗ ಉತ್ತರ ಕೊಡಬೇಕು. ಅದೊಂದು ಸಣ್ಣ ವಿಷಯ. ಅದನ್ನು ಡೈವರ್ಟ್ ಮಾಡುತ್ತಿದ್ದಾರೆ ಎಂದು ಅಂದು ಡಿ.ಕೆ.ಶಿವಕುಮಾರ್ ಹೇಳಿದ್ದರು ಎಂದರು.
ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಇಬ್ಬರು ಬಲಿ; ಸೇನೆಯಿಂದ 40 ಕ್ಕೂ ಹೆಚ್ಚು ಉಗ್ರರ ಹತ್ಯೆ!
ಭಯೋತ್ಪಾದಕರು ಹಾಗೂ ಭಯೋತ್ಪಾದಕ ಕೃತ್ಯಗಳಿಗೆ ಕಾಂಗ್ರೆಸ್ ಯಾವಾಗಲೂ ಅನುಕಂಪ ತೋರುತ್ತಲೇ ಬಂದಿದೆ. ಈಗ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಅಂದು ಡಿ.ಕೆ.ಶಿವಕುಮಾರ್ ಹೇಳಿದ ಹೇಳಿಕೆಯನ್ನು ಮಾಧ್ಯಮಗಳು ತೋರಿಸಬೇಕು. ಅದಕ್ಕೆ ಡಿ.ಕೆ.ಶಿವಕುಮಾರ್ ಮತ್ತೇನು ಹೇಳುತ್ತಾರೆ ನೋಡಿ ಎಂದರು.
ಈ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಬಹಳ ಕಟ್ಟುನಿಟ್ಟಾಗಿ ಕೆಲಸ ಮಾಡಿದೆ. ಎಲ್ಲ ಹಂತದ ವಿಚಾರಣೆ ಹಾಗೂ ತನಿಖೆ ಬಳಿಕ ಇದೀಗ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಇದರಲ್ಲಿ ಆಘಾತಕಾರಿ ವಿಷಯಗಳು ಬೆಳಕಿಗೆ ಬಂದಿವೆ.