ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?

Kannadaprabha News, Ravi Janekal |   | Kannada Prabha
Published : Dec 08, 2025, 06:35 AM IST
what reason for north goa nightclubtragedy

ಸಾರಾಂಶ

ಗೋವಾದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಬೆಂಗಳೂರಿನ ಥಣಿಸಂದ್ರ ನಿವಾಸಿ ಇಶಾಕ್ (25) ಎಂಬ ಯುವಕ ಸಾವನ್ನಪ್ಪಿದ್ದಾನೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಇಶಾಕ್, ಹೊತ್ತಿಕೊಂಡಿದ್ದ ಬೆಂಕಿಯಿಂದ ಪಾರಾದ ನಂತರ ತನ್ನ ಮೊಬೈಲ್ ತರಲು ಒಳಗೆ ಹೋಗಿ ಸಜೀವ ದಹನವಾಗಿದ್ದಾನೆ.

ಬೆಂಗಳೂರು (ಡಿ.8): ಗೋವಾದಲ್ಲಿ ನಡೆದಿರುವ ಭೀಕರ ಅಗ್ನಿ ದುರಂತದಲ್ಲಿ ಒಬ್ಬ ಕನ್ನಡಿಗನೂ ಬಲಿಯಾಗಿದ್ದಾನೆ.

ದುರಂತದಲ್ಲಿ ಸುಮಾರು 25 ಮಂದಿ ಸಜೀವ ದಹನವಾಗಿದ್ದು, ಈ ಪೈಕಿ ಬೆಂಗಳೂರಿನ ಥಣಿಸಂದ್ರದ ಹೆಗಡೆನಗರದ ನಿವಾಸಿ ಇಶಾಕ್ (25) ಕೂಡ ಸಾವಿಗೀಡಾಗಿದ್ದಾನೆ. ಸದ್ಯ ಗೋವಾದಲ್ಲಿ ಮೃತದೇಹದ ಹಸ್ತಾಂತರ ಪ್ರಕ್ರಿಯೆ ನಡೆದಿದ್ದು, ಕುಟುಂಬಸ್ಥರು ನಗರಕ್ಕೆ ಮೃತದೇಹ ತರುವ ಪ್ರಯತ್ನದಲ್ಲಿದ್ದಾರೆ.

ಮೊಬೈಲ್‌ ತರಲು ಹೋಗಿ ಪ್ರಾಣ ಬಿಟ್ಟ:

ನಾಲ್ವರು ಸ್ನೇಹಿತರ ಜತೆ ಇಸಾಕ್‌ ಗೋವಾ ಟ್ರಿಪ್‌ಗೆ ಹೋಗಿದ್ದರು. ಶನಿವಾರ ಮಧ್ಯರಾತ್ರಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ನೇಹಿತರ ಜತೆ ಇಸಾಕ್‌ ಹೊರ ಬಂದಿದ್ದರು. ಆದರೆ ಮೊಬೈಲ್‌ ಟೇಬಲ್‌ ಮೇಲೆ ಬಿಟ್ಟು ಬಂದಿದ್ದೇನೆ ಅಂತ ಹೇಳಿ ಮತ್ತೆ ವಾಪಸ್ ಹೋಗಿದ್ದು, ಈ ವೇಳೆ ಬೆಂಕಿ ಕೆನ್ನಾಲಗೆಗೆ ಸಿಲುಕಿ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಗೋವಾ ಪಬ್ ದುರಂತಕ್ಕೆ ಕಾರಣವೇನು?

ಘಟನೆಯಲ್ಲಿ 6 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಈ ದುರ್ಘಟನೆಗೆ ಪಬ್‌ನೊಳಗೆ ಹಚ್ಚಿದ ಎಲೆಕ್ಟ್ರಿಕ್‌ ಪಟಾಕಿಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಪಬ್‌ನ ಮ್ಯಾನೇಜರ್‌ ಸೇರಿ ನಾಲ್ವರು ಸಿಬ್ಬಂದಿಗಳನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಮಾಲೀಕರಾದ ಸೌರಭ್‌ ಮತ್ತು ಗೌರವ್‌ ಲೂತ್ರಾಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೊಂದೆಡೆ ಘಟನೆ ಕುರಿತು ತನಿಖೆಗೆ ಗೋವಾ ಸರ್ಕಾರ ಸಮಿತಿ ರಚಿಸಿದ್ದು, ವಾರದಲ್ಲಿ ವರದಿ ಸಲ್ಲಿಸಲು ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!
ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ