ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಕೊಡುಗೆ ಏನು ?

By Kannadaprabha News  |  First Published Sep 10, 2023, 12:18 PM IST

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ಅವರು ಕೊಡುಗೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಟೀಕಿಸಿದ್ದಾರೆ.


ನರಸಿಂಹರಾಜಪುರ (ಸೆ.10): ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ಅವರು ಕೊಡುಗೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಟೀಕಿಸಿದ್ದಾರೆ.

ಶನಿವಾರ ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೋಭಾ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದಾರೆ. 2 ಜಿಲ್ಲೆಗಳ ಜನರು ಅ‍ವರ ಬಗ್ಗೆ ಬಾರೀ ನಿರೀಕ್ಷೆ ಇಟ್ಟು ಕೊಂಡಿದ್ದರು. ಆದರೆ, ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ವಿಫಲರಾಗಿದ್ದಾರೆ ಎಂದರು.

Tap to resize

Latest Videos

undefined

ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಅವರು ತವರು ಜಿಲ್ಲೆಗೆ ಬಂದಾಗ ಅಧಿಕಾರಿಗಳೊಂದಿಗೆ, ರೈತರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೆವು. ಕನಿಷ್ಟ ಬರಗಾಲ ಘೋಷಣೆ ಮಾಡಲು ಕೇಂದ್ರ ಸರ್ಕಾರ ಸೂಕ್ತ ಗೈಡ್ ಲೈನ್‌ ನೀಡುತ್ತದೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೆವು. ಅದು ಈಡೇರಿಲ್ಲ.ಬರಗಾಲ, ಅತಿವೃಷ್ಠಿ ಬಂದಾಗ ಕೇಂದ್ರ ಕೃಷಿ ಇಲಾಖೆ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿಬಾಯಿಸಬೇಕಾಗಿತ್ತು ಎಂದರು.

ಒನ್ ನೇಷನ್ ಒನ್ ಎಲೆಕ್ಷನ್‌ನಿಂದ ದೇಶ ಸುಧಾರಣೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಜಿಲ್ಲೆಯಲ್ಲಿ ಮಳೆ ಕೊರತೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ. ಅಜ್ಜಂಪುರ, ಕಡೂರು, ಚಿಕ್ಕಮಗಳೂರು ತಾಲೂಕಿನಲ್ಲಿ ಸಾಕಷ್ಟು ಮಳೆಯಾಗದೆ ರೈತರು ಕಷ್ಟದಲ್ಲಿದ್ದಾರೆ, ರಾಗಿ, ಜೋಳ ಬಿತ್ತನೆ ಮಾಡಿದ್ದರೂ ನೀರು ಸಾಕಾಗದೆ ಬೆಳೆ ಹಾಳಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಕೇಂದ್ರ ಕೃಷಿ ಸಚಿವರು ಸ್ಪಂದಿಸಿಲ್ಲ. ಅವರ ತವರು ಜಿಲ್ಲೆಗೇ ಕೊಡುಗೆ ಶೂನ್ಯ ಎಂದು ಟೀಕಿಸಿದರು.

ಕೊಬ್ಬರಿ ಬೆಳೆಗಾರರು ಕಂಗಾಲಾಗಿದ್ದಾರೆ. ಅಡಿಕೆ ಎಲೆ ಚುಕ್ಕಿ ರೋಗ ಬಂದು ಬೆಳೆಗಾರರು ತೀವ್ರ ಸಂಕಷ್ಟಕ್ಕೀಡಾಗಿದ್ದರು. ಕಳೆದ ನವಂಬರ್‌ನಲ್ಲಿ ಕೇಂದ್ರದಿಂದ ಡಾ.ಚೆರಿಯನ್‌ ಎಂಬ ವಿಜ್ಞಾನಿಗಳ ತಂಡ ಬಂದು ವೀಕ್ಷಣೆ ಮಾಡಿದ್ದಾರೆ. ಮುಂದೆ ಏನಾಯಿತು? ಎಂಬ ಬಗ್ಗೆ ಸೃಷ್ಟವಾದ ಉತ್ತರವಿಲ್ಲ. ಅಡಿಕೆಗೆ ಪರ್ಯಾಯವೂ ಇಲ್ಲ. ಪರಿಹಾರವೂ ಇಲ್ಲವಾಗಿದೆ. ಕೇಂದ್ರ ಸರ್ಕಾರ ಯಾವುದೇ ಮಾಹಿತಿ ತಿಳಿಸುವ ಪ್ರಯತ್ನ ಮಾಡಿಲ್ಲ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬದುಕಿನ ಪ್ರಶ್ನೆಗೆ ಸ್ವಂದಿಸುವುದಿಲ್ಲ. ಬಾವನೆಗಳನ್ನು ಮಾತ್ರ ಕೆದುಕುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಸ್ಪಂದಿಸಿದೆ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು 4 ತಿಂಗಳು ಮುಗಿಯುತ್ತಾ ಬಂದಿದೆ. ಶಾಸಕ ಟಿ.ಡಿ.ರಾಜೇಗೌಡ ನೇತ್ರತ್ವದಲ್ಲಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್‌ ಶಾಸಕರ ನಿಯೋಗ ಕೃಷಿ ಹಾಗೂ ತೋಟಗಾರಿಕೆ ಸಚಿವರನ್ನುಭೇಟಿ ಮಾಡಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದರು.

ಸಫ್ರೈಸಿ ಕಾನೂನು ತೆಗೆಯಿರಿ: ಕೇಂದ್ರ ಸರ್ಕಾರ ಕಾಫಿ, ಅಡಿಕೆ,ಟೀ, ಕಾಳು ಮೆಣಸು, ಏಲಕ್ಕಿ ಬೆಳೆಯನ್ನು ಆಹಾರ ಬೆಳೆಯಿಂದ ಹೊರಗಿಟ್ಟು ಪ್ಲಾಂಟೇಷನ್ ಬೆಳೆ ಎಂದು ಕಾನೂನು ಮಾಡಿರುವ ಸರ್ಪ್ರೈಸಿ ಆ್ಯಕ್ಟ್‌ ತಂದಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗಿದೆ. ಕೆಲವೇ ಉದ್ಯಮಿಗಳಿಗೆ ಲಕ್ಷಾಂತರ ರು. ಸಾಲ ಮುನ್ನಾ ಮಾಡುವ ಕೇಂದ್ರದ ಬಿಜೆಪಿ ಸರ್ಕಾರ ರೈತರ ಬಗ್ಗೆ ಮಾತ್ರ ಖಾಳಜಿ ವಹಿಸಿಲ್ಲ ಎಂದು ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ಕಿಡಿಕಾರಿದರು.

ಕಸ್ತೂರಿ ರಂಗನ್‌ ವರದಿ ಜಾರಿಯಾಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಕೇಂದ್ರಕ್ಕೆ ನಿಯೋಗ ಕೊಂಡೊಯ್ದಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ. ಈಗ 1 ವರ್ಷ ಮುಗಿದಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಈ ಬಗ್ಗೆ ಸಬ್‌ ಕಮಿಟಿ ರಚಿಸಿದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರಾದ ಇ.ಸಿ.ಜೋಯಿ, ಸಾಜು,ಕೆ.ಎ.ಅಬೂಬಕರ್‌,ಸುನೀಲ್‌, ಬಿಳಾಲುಮನೆ ಉಪೇಂದ್ರ,ಜುಬೇದ, ಬಿ.ಎಸ್‌.ಸುಬ್ರಮಣ್ಯ, ನಾಗರಾಜ್‌, ರಜಿ,ಸಂಕೇತ, ಪೌಲೋಸ್‌,ಪ್ರಶಾಂತಶೆಟ್ಟಿ ಮುಂತಾದವರಿದ್ದರು.

ನಾರಾಯಣ ಗುರುಗಳಂತಹರಿಂದಾಗಿ ನಮ್ಮ ಸಂಸ್ಕಾರಗಳು ಉಳಿದಿವೆ: ಶೋಭಾ ಕರಂದ್ಲಾಜೆ

ನಾನು ಟಿಕೆಟ್‌ ಆಕಾಂಕ್ಷಿ

ಮುಂದೆ ಬರುವ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ತಿಳಿಸಿದರು. ಈ ಬಗ್ಗೆ ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್‌ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದೇನೆ. ರಾಜ್ಯ ಹಾಗೂ ರಾಷ್ಟ್ರ ನಾಯಕರು ತೀರ್ಮಾನ ತೆಗೆದುಕೊಳ್ಳಬೇಕಾಗಿದೆ ಎಂದರು.

click me!