ಮೇಕೆದಾಟು ಪಾದಯಾತ್ರೆ ವೇಳೆ ಚಳವಳಿಗಾರರು ಎಲ್ಲಿದ್ರು?: ಡಿಕೆಶಿ

By Kannadaprabha News  |  First Published Sep 5, 2023, 6:02 AM IST

‘ಕಾವೇರಿ ನೀರಿನ ವಿಚಾರವಾಗಿ ಪ್ರತಿಭಟನೆ ಮಾಡುವ ಸಂಘಟನೆಗಳು ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಎಲ್ಲಿಗೆ ಹೋಗಿದ್ದವು. ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದವರು ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಯಾಕೆ ಒತ್ತಾಯಿಸಿಲ್ಲ?’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.


ಬೆಂಗಳೂರು (ಸೆ.5) :  ‘ಕಾವೇರಿ ನೀರಿನ ವಿಚಾರವಾಗಿ ಪ್ರತಿಭಟನೆ ಮಾಡುವ ಸಂಘಟನೆಗಳು ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಎಲ್ಲಿಗೆ ಹೋಗಿದ್ದವು. ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದವರು ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಯಾಕೆ ಒತ್ತಾಯಿಸಿಲ್ಲ?’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕೆಲ ಸಂಘಟನೆಗಳು ತಮಿಳುನಾಡಿಗೆ ನೀರು ಬಿಡದಂತೆ ಹೋರಾಟ ನಡೆಸುತ್ತಿವೆ ಅವರಿಗೆ ಧನ್ಯವಾದಗಳು. ಆದರೆ, ನಾವು ಮೇಕೆದಾಟು ಪಾದಯಾತ್ರೆ(Mekedatu padayatre) ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ದವು? ಆಗ ಯಾಕೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಕೇಂದ್ರವನ್ನು ಕೇಳಲಿಲ್ಲ? ಎಂದು ಹೇಳಿದರು.

Tap to resize

Latest Videos

ಬೆಳಗಾವಿ ವಿಭಜನೆ ವಿಚಾರದ ಬಗ್ಗೆ ಯಾವುದೇ ತೀರ್ಮಾನ ಸದ್ಯಕ್ಕಿಲ್ಲ: ಡಿ.ಕೆ.ಶಿವಕುಮಾರ್‌

ಅಶ್ವತ್ಥನಾರಾಯಣ್‌ ಹೇಳಿಕೆಗೆ ಡಿಕೆಶಿ ವ್ಯಂಗ್ಯ:

ಕಾಂಗ್ರೆಸ್‌ನಿಂದ ಕೆಲ ಬಿಜೆಪಿ ಶಾಸಕರಿಗೆ ಬ್ಲ್ಯಾಕ್‌ಮೇಲ್‌ ನಡೆಯುತ್ತಿದೆ ಎಂಬ ಮಾಜಿ ಉಪಮುಖ್ಯಮಂತ್ರಿ ಡಾಸಿ.ಎನ್‌. ಅಶ್ವತ್ಥನಾರಾಯಣ್‌ ಹೇಳಿಕೆಗೆ ‘ಓ.. ಬ್ಲ್ಯಾಕ್‌ಮೇಲ್‌ ಎಂದು ಹೇಳಿದ್ದಾರಾ? ಇದು ನವರಂಗಿ ನಾರಾಯಣನ ಮಾತು. ನವರಂಗಿ ನಾರಾಯಣನ ಮಾತಿಗೆ ನಮ್ಮ ಎಂ.ಬಿ.ಪಾಟೀಲ್‌ ತಕ್ಕ ಉತ್ತರ ಕೊಟ್ಟಿದ್ದಾರೆ’ ಎಂದು ವ್ಯಂಗ್ಯ ಧಾಟಿಯಲ್ಲಿ ಹೇಳಿದರು. 

ಕಾವೇರಿ ನೀರನ್ನು ನೀಡದಂತೆ ಡಿಕೆಶಿ ಅಧಿಕಾರಿಗಳ ಬಾಯಿ ಮುಚ್ಚಿಸಿದ್ದಾರೆ: ದೇವೇಗೌಡ ಆರೋಪ

click me!