ರಾಮನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು..?

By Web DeskFirst Published Oct 6, 2018, 9:10 AM IST
Highlights

ಇದೀಗ ರಾಮನಗರ ವಿಧಾನಸಭಾ ಚುನಾವಣಾ ಕಣ ಹೆಚ್ಚು ಹೆಚ್ಚು ರಂಗೇರುತ್ತಿದೆ. ಇದೀಗ ಎಲ್ಲಾ ಪಕ್ಷಗಳಿಂದಲೂ ಕೂಡ ಅಭ್ಯರ್ಥಿಗಳ ಆಯ್ಕೆ ಕುರಿತು ಹೆಚ್ಚಿನ ಚರ್ಚೆ ನಡೆಯುತ್ತಿದ್ದು ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಕಣಕ್ಕಿಳಿಸಬೇಕೋ ಬೇಡವೋ ಎನ್ನುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. 

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೋ ಅಥವಾ ಬೇಡವೋ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟದ್ದು. ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ. ಚುನಾವಣೆಗಾಗಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರ ಪಡೆ ಯಾವಾಗಲೂ ಸಿದ್ಧವಾಗಿರುತ್ತದೆ. ಚುನಾವಣೆ ಘೋಷಣೆಯಾದ ಮೇಲೆ ಬರುತ್ತೇವೆ. ಅಭ್ಯರ್ಥಿ ಸ್ಪರ್ಧೆ ಕುರಿತಂತೆ ಕಾರ್ಯಕರ್ತರೊಂದಿಗೆ ಸೇರಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಪುತ್ರಿ ಶಾಂಭವಿ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುರೇಶ್‌, ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಹಾಗಾಗಿ ಯಾರು ಬೇಕಾದರೂ ಸ್ಪರ್ಧೆ ಮಾಡಲಿ ಎಂದು ತಿಳಿಸಿದರು.

click me!