
ಚಿಕ್ಕಮಗಳೂರು (ಮೇ.21): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.
ಮೇ 2ರಂದು ನಡೆದ ಮರು ಮತ ಎಣಿಕೆ ವೇಳೆ ಅಂಚೆ ಮತಪತ್ರ ತಿರುಚಲಾಗಿದೆ ಎಂದು ಆರೋಪಿಸಿ, ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಮೇ 11ರಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮರು ಮತ ಎಣಿಕೆ ಪ್ರಕ್ರಿಯೆ ಮತ್ತು ಅದರಿಂದ ಬಂದ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ಮತ್ತು ಮರು ಎಣಿಕೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಇದರಿಂದಾಗಿ ರಾಜೇಗೌಡರ ಶಾಸಕತ್ವ ಊರ್ಜಿತಗೊಂಡಿತ್ತು.
ಮೇ 21ರಂದು, ಗುರುವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿತ್ತು. ಅದರಂತೆ ನ್ಯಾ.ಸಂಜಯ್ ಕುಮಾರ್ ಮತ್ತು ನ್ಯಾ.ವಿನೋದ ಚಂದ್ರ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ 201 ಮತಗಳ ಅಂತರದಿಂದ ಜಯ ಗಳಿಸಿದ್ದರು. ಆದರೆ, ಜೀವರಾಜ್ ಅವರು ಚುನಾವಣಾ ಅಕ್ರಮಗಳ ಆರೋಪ ಹೊರಿಸಿ ಅಂಚೆ ಮತಗಳ ಮರು ಎಣಿಕೆಗೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ಹೈಕೋರ್ಟ್, ಅಂಚೆ ಮತಗಳನ್ನು ಮರು ಎಣಿಕೆ ಮಾಡುವಂತೆ ಸೂಚಿಸಿತ್ತು. ಅದರಂತೆ ಮೇ 2ರಂದು ಅಂಚೆ ಮತಗಳ ಮರು ಎಣಿಕೆ ನಡೆಸಲಾಗಿತ್ತು. ಆ ವೇಳೆ, ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು 52 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಬಳಿಕ, ಅವರು ಶಾಸಕರಾಗಿ ಪ್ರಮಾಣವಚನವನ್ನೂ ಕೂಡ ಪಡೆದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ