
ಮೈಸೂರು(ಸೆ.27): ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ. ನನ್ನ ಕಂಡರೇ ವಿಪಕ್ಷಗಳಿಗೆ ಭಯ. ಹೀಗಾಗಿ ಪದೇ ಪದೇ ನನ್ನ ಟಾರ್ಗೆಟ್ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.
ಇಂದು(ಶುಕ್ರವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್. ನಾನು ಮತ್ತೆ ಹೇಳುತ್ತಿದ್ದೇನೆ. ಇದು ರಾಜಕೀಯ ಸಂಬಂಧದ ಮೊದಲ ಕೇಸ್. ಪ್ಲೀಸ್ ಅಂಡರ್ ಲೈನ್ ದಿಸ್ ವರ್ಡ್ ಎಂದು ಹೇಳಿದ್ದಾರೆ.
ಭಂಡತನ ಬಿಟ್ಟು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ
ಕಾನೂನು ಹೋರಾಟವನ್ನ ನಮ್ಮ ವಕೀಲರು ಮಾಡುತ್ತಾರೆ. ಇವತ್ತು ಅಪಾರ ಸಂಖ್ಯೆಯಲ್ಲಿ ಬೆಂಬಲಿಗರ ನನ್ನ ಸ್ವಾಗತಕ್ಕೆ ಬಂದಿದ್ದಾರೆ. ನಾನು ಯಾರನ್ನೂ ಕರೆದಿಲ್ಲ, ಅವರೇ ಪ್ರೀತಿಯಿಂದ ಬಂದಿದ್ದಾರೆ. ನನಗೆ ಯಾವ ಭಯವೂ ಇಲ್ಲ. ನಾನು ಭಯಗೊಂಡ ರೀತಿ ಕಾಣುತ್ತಿದ್ದೀನಾ? ಅಂತ ಪ್ರಶ್ನಿಸಿದ್ದಾರೆ.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಎಸಿಬಿಯೇ ಇದೆ. ಇದಕ್ಕೆ ಯಾಕೆ ಕುಮಾರಸ್ವಾಮಿ ಮಾತನಾಡಲ್ಲ. ನಾನು ಲೋಕಾಯುಕ್ತವನ್ನ ಮುಚ್ಚಿಲ್ಲ. ಎಸಿಬಿ ರಚನೆ ಮಾಡಿದ್ದೇನೆ ಅಂತ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ