ಮುಸ್ಲಿಂರಿಗೆ ಏಕೆ ಮೀಸಲಾತಿ ಕೊಡಬಾರದು? ಪ್ರಧಾನಿ ಮೋದಿಗೆ ಸಿಎಂ ಪ್ರಶ್ನೆ!

Published : Apr 15, 2025, 07:26 AM ISTUpdated : Apr 15, 2025, 07:30 AM IST
ಮುಸ್ಲಿಂರಿಗೆ ಏಕೆ ಮೀಸಲಾತಿ ಕೊಡಬಾರದು? ಪ್ರಧಾನಿ ಮೋದಿಗೆ ಸಿಎಂ ಪ್ರಶ್ನೆ!

ಸಾರಾಂಶ

‘ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ್ದೇವೆ. ಮುಸ್ಲಿಮರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವು. ಇದನ್ನು ಮುಸ್ಲಿಮರ ಓಲೈಕೆ ಎಂದು ಕೆಲವು ಹೇಳುತ್ತಿದ್ದಾರೆ. ಮುಸ್ಲಿಮರಿಗೆ ಯಾಕೆ ಮೀಸಲಾತಿ ನೀಡಬಾರದು?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು (ಏ.15): ‘ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ್ದೇವೆ. ಮುಸ್ಲಿಮರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವು. ಇದನ್ನು ಮುಸ್ಲಿಮರ ಓಲೈಕೆ ಎಂದು ಕೆಲವು ಹೇಳುತ್ತಿದ್ದಾರೆ. ಮುಸ್ಲಿಮರಿಗೆ ಯಾಕೆ ಮೀಸಲಾತಿ ನೀಡಬಾರದು?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್‌ ಪಕ್ಷ ಕರ್ನಾಟಕದಲ್ಲಿ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರಿಗೆ ಅನ್ಯಾಯ ಮಾಡಿ ಮುಸ್ಲಿಮರಿಗೆ ಮೀಸಲಾತಿ ನೀಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆ ಮಾಡಿರುವ ಬೆನ್ನಲ್ಲೇ ಕೆಪಿಸಿಸಿ ಕಚೇರಿಯಲ್ಲಿ ನಡೆದ ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದ ವೇಳೆ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಮುಸ್ಲಿಮರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಇದೆಯೇ? ಮುಸ್ಲಿಮರು ವಿದ್ಯಾವಂತರಿದ್ದಾರೆಯೇ? ಯಾಕೆ ಮೀಸಲಾತಿ ಮಾಡಬಾರದು? ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಬೆಂಗಳೂರು: ದೇಶದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಪಣ!

ದಲಿತರಿಗೆ, ಹಿಂದುಳಿದವರಿಗೆ (ಪ್ರವರ್ಗ 1, ಪ್ರವರ್ಗ 2ಎ) ಹಾಗೂ ಅಲ್ಪಸಂಖ್ಯಾತರಿಗೆ ಮೊದಲು 50 ಲಕ್ಷ ರು.ವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡಿದ್ದೆ. ಬಳಿಕ 1 ಕೋಟಿ ರು. ಮಾಡಿ ಈಗ 2 ಕೋಟಿ ರು. ವರೆಗೆ ಹೆಚ್ಚಳ ಮಾಡಿದ್ದೇನೆ. ಶಕ್ತಿ ಇಲ್ಲದಿದ್ದರೆ ಶಕ್ತಿ ತುಂಬುವುದೇ ಕಾಂಗ್ರೆಸ್‌ ಪಕ್ಷದ ಧ್ಯೇಯ. ನಾನು ಯಾವ ಮೇಲ್ವರ್ಗದ ಜಾತಿಯ ವಿರೋಧಿಯೂ ಅಲ್ಲ. ಯಾರಿಗೆ ನ್ಯಾಯ, ಅವಕಾಶ ಸಿಕ್ಕಿಲ್ಲವೋ ಆ ಜನರ ಪರ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕಾರವಾರ: ಅಂಬೇಡ್ಕರ್ ಜಯಂತಿಗೆ ಗೈರಾದ ಜನಪ್ರತಿನಿಧಿಗಳು!

ಕಾಂಗ್ರೆಸ್‌ ನ್ಯಾಯ ಒದಗಿಸುವ ಪಕ್ಷ- ಡಿಕೆಶಿ:

ನರೇಂದ್ರ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೂ ಮೀಸಲಾತಿ ನೀಡಲಾಗಿದೆ. ಸಮಾಜದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆ. ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಂಕಣ ರೈಲ್ವೆ ಭಾರತೀಯ ರೈಲ್ವೇ ವಿಲೀನಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬೇಕು: ಸಚಿವ ಅಶ್ವಿನಿ ವೈಷ್ಣವ್
ರಾಜ್ಯಾದ್ಯಂತ 2000 ಕೋಟಿ ವೆಚ್ಚದಲ್ಲಿ ರೈಲ್ವೆ ವಿದ್ಯುದ್ದೀಕರಣ, ಆಧುನೀಕರಣ, ಕೋಲಾರದಲ್ಲಿ ರೈಲ್ವೆ ಫ್ಯಾಕ್ಟರಿ?