
ಬೆಂಗಳೂರು (ಜೂ.6) ಪತ್ನಿಯ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಪಿಎಸ್‌ಐ ರಮೇಶ್ ಅವರನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಳೆದ ಶನಿವಾರ ಬೇಗೂರಿನ ಪಟೇಲ್ ಲೇಔಟ್‌ನ(patel layout beguru) ಮನೆಯಲ್ಲಿ ಪಿಎಸ್‌ಐ ರಮೇಶ್(PSI Ramesh) ಅವರ ಪತ್ನಿ ಶಿಲ್ಪಾ(29) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತಳ ಪೋಷಕರು ಅಳಿಯ ರಮೇಶ್ ವಿರುದ್ಧ ಕೊಲೆ ಆರೋಪ ಮಾಡಿದ್ದರು. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಬೇಗೂರು ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ಇದೀಗ ಪಿಎಸ್‌ಐ ರಮೇಶ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರಿನ ಪೀಪಲ್ಸ್ ಮ್ಯಾನ್ ಖ್ಯಾತಿಯ ಇನ್ಸ್‌ಪೆಕ್ಟರ್ ಮಂಜುನಾಥ್ ಲಿವರ್ ಕ್ಯಾನ್ಸರ್‌ಗೆ ಬಲಿ
ಕೋಲಾರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಿಎಸ್‌ಐ ರಮೇಶ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಶಿಲ್ಪಾ ಕಾಲೇಜಿನಲ್ಲಿ ಸಹಪಾಠಿಗಳಾಗಿದ್ದು ಇಬ್ಬರು ಪ್ರೀತಿಸುತ್ತಿದ್ದರು. ಈ ಪ್ರೇಮಕ್ಕೆ ಎರಡು ಕುಟುಂಬಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ಬೆಳವಣಿಗೆಯಿಂದ ಬೇಸತ್ತು ಶಿಲ್ಪಾಳನ್ನು ಊರಿನಿಂದ ನಗರಕ್ಕೆ ಕರೆತಂದು ಸಹಜೀವನ ರಮೇಶ್ ನಡೆಸುತ್ತಿದ್ದರು. 11 ತಿಂಗಳ ಹಿಂದೆ ರಿಜಿಸ್ಟ್ರರ್ ಮದುವೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಮದುವೆ ಬಳಿಕ ಪಟೇಲ್ ಲೇಔಟ್‌ನಲ್ಲಿ ದಂಪತಿ ನೆಲೆಸಿದ್ದರು. ಬೇಗೂರು ಠಾಣೆಯಲ್ಲಿ ಪಿಎಸ್‌ಐ ರಮೇಶ್ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಕೌಟುಂಬಿಕ ವಿಚಾರವಾಗಿ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಅಪರಾಧ ಪ್ರಕರಣದ ತನಿಖೆ ಸಲುವಾಗಿ ಶುಕ್ರವಾರ ರಮೇಶ್ ಹೊರ ಹೋಗಿದ್ದರು. ಆಗ ರಾತ್ರಿ ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು. ಕೆಲಸ ಮುಗಿಸಿಕೊಂಡು ಶನಿವಾರ ಮುಂಜಾನೆ ರಮೇಶ್ ಮನೆಗೆ ಮರಳಿದಾಗ, ಪತ್ನಿ ಶಿಲ್ಪಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Bengaluru Crime: ಪತ್ನಿಗೆ ಎಸ್‌ಐನಿಂದ ಜಾತಿ ನಿಂದನೆ, ಕಿರುಕುಳ ಆರೋಪ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ