ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೇನೆ : ಅಗ್ನಿ ಪರೀಕ್ಷೆ ಎದುರಿಸುತ್ತೇನೆ

By Kannadaprabha NewsFirst Published Nov 8, 2019, 9:53 AM IST
Highlights

ಆಕಸ್ಮಿಕವಾಗಿ ಮುಖ್ಯಮಂತ್ರಿ ಹುದ್ದೆ ಸಿಕ್ಕಿದ್ದು ಅಗ್ನಿಪರೀಕ್ಷೆ ಎದುರಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಹೊಸದುರ್ಗ [ನ.08]: ನನಗೆ ಆಕಸ್ಮಿಕವಾಗಿ ಮುಖ್ಯಮಂತ್ರಿ ಹುದ್ದೆ ಸಿಕ್ಕಿದ್ದು ಅಗ್ನಿಪರೀಕ್ಷೆ ಎದುರಿಸುತ್ತಿದ್ದೇನೆ, ನೆರೆಯಿಂದಾಗಿ ರಾಜ್ಯದ ಹಲವು ಪ್ರದೇಶಗಳಿಗೆ ಅನುದಾನ ಕೊಡಲು ಆಗಿಲ್ಲ ಎಂಬ ನೋವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ದ ಸಮಾರೋಪದಲ್ಲಿ  ಮಾತನಾಡಿ, ಸದ್ಯ ಪರಿಸ್ಥಿತಿ ಸುಧಾರಿಸಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಅನುದಾನ ಕೊಡುವ ಮೂಲಕ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಭೀಕರ ನೆರೆಹಾವಳಿಯಿಂದಾಗಿ ರಾಜ್ಯದಲ್ಲಿ ಸುಮಾರು 7 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. 

3.5 ಲಕ್ಷ ಮನೆಗಳಿಗೆ ಧಕ್ಕೆಯಾಗಿದೆ. ಹಾನಿಯಾದ ಮನೆ ನಿರ್ಮಾಣಕ್ಕೆ 5 ಲಕ್ಷ ಹಣ ಬಿಡುಗಡೆಗೆ ತೀರ್ಮಾನಿಸಲಾಗಿದ್ದು ಈಗಾಗಲೇ ಮನೆಗಳಿಗೆ ಬುನಾದಿ ಹಾಕಲು 1 ಲಕ್ಷ ಹಣ ಬಿಡುಗಡೆ ಮಾಡಿದ್ದೇನೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಪಪ್ರಚಾರಕ್ಕೆ ತಲೆಕೆಡಿಸಿಕೊಳ್ಳಲ್ಲ: ತಮ್ಮ ಆಡಳಿತದ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದು ಅದಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನ, ಪರಿಸರ ಉಳಿಸಿ ಬೆಳೆಸದಿದ್ದರೆ ಮುಂದಿನ ದಿನಗಳು ಭೀಕರವಾಗಲಿದೆ. ಮಧ್ಯ ಕರ್ನಾಟಕದ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆಯನ್ನು ನಾನೇ ಪ್ರಾರಂಭಿಸಿದ್ದು, ನಾನೇ ಪೂರ್ಣಗೊಳಿಸುತ್ತೇನೆ. ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡು ೧೦೩ ದಿನ ಕಳೆದಿದ್ದು, ಒಂದು ದಿನವೂ ಸ್ವಂತ ಕೆಲಸಕ್ಕೆ ಆಲೋಚಿಸಿಲ್ಲ ಎಂದು ಹೇಳಿದರು.

click me!