ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ, ವಿಪಕ್ಷ ಶಾಸಕರಿಗೆ 10 ಕೋಟಿ ರೂ. ಅನುದಾನ ಹಂಚಿಕೆ; ಪರಮೇಶ್ವರ

By Sathish Kumar KH  |  First Published Nov 29, 2024, 4:40 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಮತ್ತು ಬಿಜೆಪಿ, ಜೆಡಿಎಸ್ ಶಾಸಕರಿಗೆ 10 ರಿಂದ 15 ಕೋಟಿ ರೂ. ನೀಡುವ ಭರವಸೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ. ಮೆಟ್ರೋ ರೈಲು ಯೋಜನೆಯನ್ನು ತುಮಕೂರಿಗೆ ವಿಸ್ತರಿಸಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ.


ಬೆಂಗಳೂರು/ತುಮಕೂರು (ನ.29): ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ (ಕಾಂಗ್ರೆಸ್) ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ತೀರ್ಮಾನ ಮಾಡಿದ್ದಾರೆ. ಇದರ ಜೊತೆಗೆ ವಿರೋಧ ಪಕ್ಷದ (ಬಿಜೆಪಿ, ಜೆಡಿಎಸ್) ಶಾಸಕರಿಗೂ 10 ರಿಂದ 15 ಕೋಟಿ ರೂ. ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಮಾಹಿತಿ ನೀಡಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳನ್ನು ನೀಡುವ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಆದ್ಯತೆ ನೀಡಲಾಗುತ್ತಿದೆ. ರಾಜ್ಯದಲ್ಲಿ ನಮ್ಮ ಪಕ್ಷದ ಎಲ್ಲ ಶಾಸಕರಿಗೂ ತಮ್ಮ ಕ್ಷೇತ್ರಗಳ ಅಭಿವೃದ್ಧಿ ಮಾಡುವುದಕ್ಕೆ ಅನುಕೂಲ ಆಗುವಂತೆ ತಲಾ 25 ಕೋಟಿ ರೂ. ಅನುದಾನವನ್ನು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಜೊತೆಗೆ, ವಿಪಕ್ಷಗಳ ಶಾಸಕರಿಗೆ ತಲಾ 10 ಕೋಟಿ ರೂ.ಗಳಿಂದ 15 ಕೋಟಿ ರೂ.ವರೆಗೆ ಅನುದಾನ ಕೊಡಲಿದ್ದಾರೆ ಎಂದು ತಿಳಿಸಿದರು.

Tap to resize

Latest Videos

ಇನ್ನು ಈ ಹಿಂದಿನ ಬಿಜೆಪಿ ಸರ್ಕಾರವು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಕೇವಲ 10 ಕೋಟಿ ರೂ. ಅನುದಾನವನ್ನು ನೀಡುತ್ತಿದ್ದರು. ಆದರೆ, ತಮ್ಮ ಪಕ್ಷದ ಶಾಸಕರಿಗೆ ಮಾತ್ರ ಬರೋಬ್ಬರಿ ತಲಾ 50 ಕೋಟಿ ರೂ. ಅನುದಾನ ನೀಡಿದ್ದರು. ಆದರೆ, ಇದೀಗ ಜಿಲ್ಲೆಯ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿ, ಶಂಕುಸ್ಥಾಪನೆಗಳಿವೆ. ಹಲವು ಯೋಜನೆಗಳ ಫಲಾನುಭವಿಗಳಿದ್ದಾರೆ. ಎಲ್ಲ ಕ್ಷೇತ್ರಗಳ ಅಭಿವೃದ್ಧಿಯಾದರೆ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಅನುದಾನವನ್ನು ಹಂಚಿಕೆ ಮಾಡಲಿದ್ದಾರೆ. ಈ ಮೂಲಕ ರಾಜ್ಯದ ಎಲ್ಲ‌ ಜಿಲ್ಲೆಗಳ ಅಭಿವೃದ್ಧಿಯಾದರೆ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂಬುದು ನಮ್ಮ ದೂರದೃಷ್ಟಿಯಾಗಿದೆ. ಆದರೆ, ವಿಪಕ್ಷಗಳ ಶಾಸಕರು ತುಮಕೂರಿಗೆ ಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಭಾವುಟ ತೋರಿಸಲು ಮುಂದಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳನ್ನು ಮಾಡುವವರಿಗೆ ಇದರ ಅಗತ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಖ್ಯಾತಿ ಕುಗ್ಗಿಸಲಿದೆಯೇ ತುಮಕೂರು ಅಂತಾರಾಷ್ಟ್ರೀಯ ಸ್ಟೇಡಿಯಂ!

ಮೆಟ್ರೋ ರೈಲು ವಿಸ್ತರಣೆ ಡಿಪಿಆರ್: ಬೆಂಗಳೂರಿನ ಮೆಟ್ರೋ ರೈಲು ಸೇವೆಯು ಇದೀಗ ನೆಲಮಂಗಲದ ಬಳಿಯ ಮಾದವಾರದವರೆಗೂ ವಿಸ್ತರಣೆಗೊಂಡಿದೆ. ಇದೀಗ ತುಮಕೂರು ನಗರವರೆಗೂ ಮೆಟ್ರೋ ರೈಲು ಯೋಜನೆಯನ್ನು ವಿಸ್ತರಣೆ ಮಾಡುವುದಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗುತ್ತಿದೆ. ಹೈದರಾಬಾದ್ ಮೂಲದ ಕಂಪನಿಗೆ ಟೆಂಡರ್ ಆಗಿದ್ದು, ಒಂದೂವರೆ ತಿಂಗಳಿಂದ ಮಾಡುತ್ತಿದೆ. ವಸಂತಾನರಸಾಪುರಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಟೌನ್‌ಶಿಪ್‌ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಮಾಧ್ಯಮಗಳ ಮುಂದೆ ಮಾತನಾಡಿದಂತೆ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿದ್ದರಾಮಯ್ಯ ಸಮಾವೇಶದ ಬಗ್ಗೆ ಸ್ಪಷ್ಟನೆ: ಹಾಸನದಲ್ಲಿ ಡಿ.5ರಂದು ನಡೆಯುವ ಕಾರ್ಯಕ್ರಮದ ಕುರಿತು ನನ್ನ ಪ್ರತಿಕ್ರಿಯೆಯನ್ನು ಖಾಸಗಿ ಸುದ್ದಿ ವಾಹಿನಿಯೊಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಿದೆ. ಹಾಸನದ ಕಾರ್ಯಕ್ರಮದ ಕುರಿತು‌ ನನ್ನ ಪ್ರತಿಕ್ರಿಯೆ ಕೇಳಿದಾಗ, ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದೇನೆ. ಆದರೆ, ಇದನ್ನು ಪರಮೇಶ್ವರ ಮತ್ತು ಸಿದ್ದರಾಮಯ್ಯ ಅವರು ಎಣ್ಣೆಸೀಗೆಕಾಯಿ ಎಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಲಾಗಿದೆ. ನಾನು ಮತ್ತು ರಾಜಣ್ಣ ಮಾತಾಡಿಕೊಂಡು, ಮೊದಲು ತುಮಕೂರಿನಲ್ಲಿ ಸ್ವಾಭಿಮಾನ ಸಮಾವೇಶ ಮಾಡಲು ಚಿಂತನೆ ನಡೆಸಿ, ಎರಡು ಸಭೆಗಳನ್ನು ಮಾಡಿದ್ದೇವೆ. ನಾನು ಮತ್ತು ಸಿದ್ದರಾಮಯ್ಯ ಅವರು ಯಾವಾಗಲೂ ಒಟ್ಟಿಗೆ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗಲೂ ಒಟ್ಟಿಗಿದ್ದೇವೆ, ಮುಂದೆಯೂ ಒಟ್ಟಿಗೆ ಕೆಲಸ ಮಾಡುತ್ತೇವೆ. ನಮ್ಮ ಮಧ್ಯೆ ಯಾವ ಭಿನ್ನಾಭಿಪ್ರಾಯಗಳಿಲ್ಲ. ಯಾವ ಎಣ್ಣೆ ಸೀಗೆಕಾಯಿಯು ಇಲ್ಲ‌ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದರು.

click me!