
ಬೆಂಗಳೂರು(ಅ.10): ‘ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ತಜ್ಞರ, ಹಿರಿಯ ಅಧಿಕಾರಿಗಳ, ಎಲ್ಲ ಪಕ್ಷಗಳ ಮುಖಂಡರ ಸಭೆ ನಡೆಸಿ ಸಾಧಕ-ಭಾದಕ ಚರ್ಚಿಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ, ವದಂತಿಗಳಿಗೆ ಕಿವಿಗೊಡಬಾರದು’ ಎಂದು ಪೋಷಕರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಮನವಿ ಮಾಡಿದ್ದಾರೆ.
"
‘ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನಗಳನ್ನು ಪ್ರಾರಂಭಿಸಿರುವುದನ್ನು ಗಮನಿಸಿದ್ದೇನೆ. ಅಲ್ಲದೇ, ಈ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಆರಂಭಿಸುವ ಮುನ್ನ ಎಲ್ಲಾ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ-ಬಾಧಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಸರ್ಕಾರ ತೀರ್ಮಾನ ಕೈಗೊಳ್ಳುವವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ ಮತ್ತು ವದಂತಿಗಳಿಗೆ ಪೋಷಕರು ಕಿವಿಗೊಡಬಾರದು’ ಎಂದು ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ