
ವಿಜಯಪುರ(ಆ.26): ಉತ್ತರ ಕರ್ನಾಟಕ ಭಾಗದ ಬಹುವರ್ಷಗಳ ಬೇಡಿಕೆಯಾದ ಆಲಮಟ್ಟಿಜಲಾಶಯದ ಎತ್ತರವನ್ನು ಹೆಚ್ಚಿಸಬೇಕೆಂಬ ಆಗ್ರಹದ ಈಡೇರಿಕೆಗೆ ರಾಜ್ಯ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಜತೆಗೆ, ಸಾಲ ಮಾಡಿಯಾದರೂ ಆಲಮಟ್ಟಿಅಣೆಕಟ್ಟೆಯನ್ನು ಎತ್ತರಿಸಲಾಗುವುದು ಎಂದೂ ಭರವಸೆ ನೀಡಿದ್ದಾರೆ.
ಮಂಗಳವಾರ ಆಲಮಟ್ಟಿಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆಲಮಟ್ಟಿಅಣೆಕಟ್ಟೆಎತ್ತರವನ್ನು 524.256 ಮೀಟರ್‌ವರೆಗೆ ಹೆಚ್ಚಿಸಲು ಸರ್ಕಾರ ಬದ್ಧವಿದೆ. ನ್ಯಾಯಾಧಿಕರಣದ ತೀರ್ಪಿನ ಅನ್ವಯ ರಾಜ್ಯಕ್ಕೆ ದೊರೆತಿರುವ 130 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಹೇಳಿದರು.
ಈಗಾಗಲೇ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೇಂದ್ರದ ಜಲ ಸಂಪನ್ಮೂಲ ಇಲಾಖೆ ಸಭೆಯಲ್ಲಿ ಆಲಮಟ್ಟಿ ಅಣೆಕಟ್ಟೆಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸುವ ಕುರಿತು ಗಮನ ಸೆಳೆದಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ(ಯುಕೆಪಿ)ಯ 3ನೇ ಹಂತದ ಯೋಜನಾ ಕಾಮಗಾರಿಗಳು ಹಾಗೂ ಆಲಮಟ್ಟಿಅಣೆಕಟ್ಟೆಎತ್ತರ ಹೆಚ್ಚಳಕ್ಕೆ ಸಂಬಂಧಿಸಿ ಸದ್ಯದಲ್ಲೇ ನಾನೂ ಪ್ರಧಾನಿ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ