ಭೂಮಿಯಿಂದ ಹೊರಟ ಚಂದ್ರಯಾನ ನೌಕೆ 42 ದಿನಗಳ ಸುದೀರ್ಘ ಪ್ರಯಾಣದ ಬಳಿಕ ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಗೋಧೂಳಿ ಮುಹೂರ್ತದಲ್ಲಿ ಚಂದ್ರನ ದಕ್ಷಿಣ ಧ್ರುವ ಸ್ಪರ್ಶಿಸಲಿದೆ. ಇಸ್ರೋ ಸಾಧನೆ ಕಣ್ತುಂಬಿಕೊಳ್ಳುವ ಕಾತುರವಾಗಿರುವ ಭಾರತ, ಚಂದ್ರಯಾನ ಯಶಸ್ಸಿಗೆ ಪೂಜೆ, ಪುನಸ್ಕಾರ ನಡೆಸುತ್ತಿದೆ. ಮತ್ತೊಂದೆಡೆ ಚಂದ್ರಯಾನ-3 ಗೆ ರಂಭಾಪುರಿ ಶ್ರೀಗಳು ಶುಭಹಾರೈಸಿದ್ದಾರೆ.
ಚಿಕ್ಕಮಗಳೂರು (ಆ.23): ಭೂಮಿಯಿಂದ ಹೊರಟ ಚಂದ್ರಯಾನ ನೌಕೆ 42 ದಿನಗಳ ಸುದೀರ್ಘ ಪ್ರಯಾಣದ ಬಳಿಕ ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಗೋಧೂಳಿ ಮುಹೂರ್ತದಲ್ಲಿ ಚಂದ್ರನ ದಕ್ಷಿಣ ಧ್ರುವ ಸ್ಪರ್ಶಿಸಲಿದೆ. ಇಸ್ರೋ ಸಾಧನೆ ಕಣ್ತುಂಬಿಕೊಳ್ಳುವ ಕಾತುರವಾಗಿರುವ ಭಾರತ, ಚಂದ್ರಯಾನ ಯಶಸ್ಸಿಗೆ ಪೂಜೆ, ಪುನಸ್ಕಾರ ನಡೆಸುತ್ತಿದೆ. ಮತ್ತೊಂದೆಡೆ ಚಂದ್ರಯಾನ-3 ಗೆ ರಂಭಾಪುರಿ ಶ್ರೀಗಳು ಶುಭಹಾರೈಸಿದ್ದಾರೆ. ನಮ್ಮ ವಿಜ್ಞಾನಿಗಳ ಈ ಕೆಲಸ ವಿಶ್ವಕ್ಕೆ ಮಾದರಿಯಾಗಲಿ. ಇಂದು ಇಡೀ ಜಗತ್ತೆ ಭಾರತದತ್ತ ಮುಖ ಮಾಡಿದೆ.
ವಿಜ್ಞಾನಿಗಳಿಗೆ ಬೆನ್ನುಲುಬಾಗಿ ನಿಂತ ಪ್ರಧಾನಿ ಮೋದಿಗೂ ಅಭಿನಂದನೆಗಳು. ಸಾವಿರಾರು ವಿಜ್ಞಾನಿಗಳ ತಂಡದಲ್ಲಿ ಬಾಳೆಹೊನ್ನೂರು ಮಹಿಳೆ ಇರುವುದು ನಮ್ಮ ಹೆಮ್ಮೆ. ಚಂದ್ರಯಾನ-3 ಇಸ್ರೋ ತಂಡದಲ್ಲಿ ಬಾಳೆಹೊನ್ನೂರಿನ ಡಾ.ಕೆ.ನಂದಿನಿ ಕೇಶವಮೂರ್ತಿ-ಮಂಗಳ ಪುತ್ರಿ. ಚಂದ್ರಯಾನ-3 ಲ್ಯಾಂಡಿಂಗ್ ಸುವರ್ಣ ಘಳಿಗೆಯನ್ನ ನಾನು ಕಣ್ತುಂಬಿಕೊಳ್ಳುತ್ತೇನೆ. ಇಸ್ರೋ ವಿಜ್ಞಾನಿಗಳ ಮುಂದಿನ ಭವಿಷ್ಯವೂ ಸುಖಕಾರವಾಗಿರಲಿ-ಸಾಧನೆಗೈಯುವಂತಿರಲಿ ಎಂದು ಎನ್.ಆರ್.ಪುರ ತಾಲೂಕಿನ ರಂಭಾಪುರಿ ಪೀಠದಲ್ಲಿ ಹೇಳಿದ್ದಾರೆ.
undefined
‘ಆಪರೇಷನ್ ಹಸ್ತ’ಕ್ಕೆ ತನ್ವೀರ್ ಸೇಠ್ ಅಸಮಾಧಾನ: ರಾಜಕೀಯ ನಿವೃತ್ತಿ ಬಯಕೆ ವ್ಯಕ್ತಪಡಿಸಿದ ಶಾಸಕ
ಚಂದ್ರಯಾನ-3 ತಂಡದಲ್ಲಿ ಬಾಳೆಹೊನ್ನೂರು ಯುವತಿ ಡಾ ಕೆ ನಂದಿನಿ: ಆಂಧ್ರಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಶುಕ್ರವಾರ ಉಡಾವಣೆ ಮಾಡಿದ ಚಂದ್ರಯಾನ 3ರ ತಂಡದಲ್ಲಿ ಬಾಳೆಹೊನ್ನೂರು ಸಮೀಪದ ತುಪ್ಪೂರು ಗ್ರಾಮದ ಯುವತಿ ಇರುವುದು ಹೆಮ್ಮೆ ಮೂಡಿಸಿದೆ. ಬಾಳೆಹೊನ್ನೂರು ಪಟ್ಟಣದಲ್ಲಿ ಕಾಫಿ ಉದ್ಯಮ, ವ್ಯವಹಾರ ನಡೆಸುತ್ತಿರುವ ಕೇಶವಮೂರ್ತಿ, ಮಂಗಳ ದಂಪತಿ ಪುತ್ರಿ ಡಾ. ಕೆ.ನಂದಿನಿ ಚಂದ್ರಯಾನ 3 ತಂಡದಲ್ಲಿ ಇದ್ದು ಶುಕ್ರವಾರ ನಡೆದ ಯಶಸ್ವಿ ಉಡಾವಣೆಯಲ್ಲಿ ಈಕೆಯೂ ಪಾಲ್ಗೊಂಡಿರುವುದು ಆಕೆಯ ಕುಟುಂಬಸ್ಥರು ಸೇರಿದಂತೆ ಸ್ಥಳೀಯರಲ್ಲಿ ಹರ್ಷ ಮೂಡಿದೆ.
ಪಕ್ಷದಲ್ಲಿನ ಪರಿಸ್ಥಿತಿ ಸ್ವಚ್ಛ ಮಾಡಿದರೆ ಯಾರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ: ಎಸ್.ಟಿ.ಸೋಮಶೇಖರ್
ಡಾ.ನಂದಿನಿ ಕಳೆದ 8 ವರ್ಷಗಳಿಂದ ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇವರು 2019ರ ಚಂದ್ರಯಾನ 2ರ ತಂಡದಲ್ಲೂ ಭಾಗವಹಿಸಿದ್ದು, ಸತತ ಎರಡನೇ ಬಾರಿಯೂ ಕಾರ್ಯನಿರ್ವಹಿಸಿ ಬಾಳೆಹೊನ್ನೂರಿಗೆ ಕೀರ್ತಿ ತಂದಿದ್ದಾರೆ. ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಳೆಹೊನ್ನೂರಿನ ನಿರ್ಮಲಾ ಕಾನ್ವೆಂಟ್‌ನಲ್ಲಿ ಮಾಡಿ, ನಂತರ 12ನೇ ತರಗತಿಯವರೆಗೆ ಸೀಗೋಡು ಜವಾಹರ್ ನವೋದಯ ವಿದ್ಯಾಲಯ ದಲ್ಲಿ ವ್ಯಾಸಂಗ ಮಾಡಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಬಿಎಸ್ಸಿ, ಎಂಎಸ್ಸಿ ವಿದ್ಯಾಭ್ಯಾಸ, ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್‌ನಲ್ಲಿ ಪೂರೈಸಿದ್ದಾರೆ. ಇದೇ ಸಂಸ್ಥೆಯಲ್ಲಿ 5 ವರ್ಷಗಳ ಪಿಎಚ್‌ಡಿ ಪೂರೈಸಿ, ನಂತರ ಬೆಂಗಳೂರು ಇಸ್ರೋದಲ್ಲಿ ಉದ್ಯೋಗದಲ್ಲಿದ್ದಾರೆ.