
ಬೆಂಗಳೂರು(ಸೆ.03): ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಕಲಬುರಗಿಯಲ್ಲಿ ಸಿಡಿಲಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಕಲಬುರಗಿ, ಚಾಮರಾಜನಗರ, ಬೆಂಗಳೂರು ಮತ್ತು ಚಿತ್ರದುರ್ಗದಲ್ಲಿ ಕೆಲಕಾಲ ಉತ್ತಮ ಮಳೆ ಸುರಿದಿದೆ. ಕಲಬುರಗಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಸಿಡಿಲು ಬಡಿದು ಅಫಜಲ್ಪುರ ತಾಲೂಕಿನ ಸಿದನೂರ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಲಾವತಿ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದೇ ವೇಳೆ ಸವಿತಾ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರು: ಕೈಕೊಟ್ಟ ವರುಣದೇವ, ಮಳೆಗಾಗಿ 37 ವರ್ಷದ ಹಿಂದಿನ ಆಚರಣೆಗೆ ಮುಂದಾದ ಮಲೆನಾಡಿಗರು..!
ಇನ್ನು ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ಸತತ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಧ್ಯಾಹ್ನ 3 ಗಂಟೆಗೆ ಆರಂಭವಾದ ಮಳೆಯಿಂದಾಗಿ ಪಟ್ಟಣದ ಬಸ್ ನಿಲ್ದಾಣ ಮತ್ತು ಸಂತೆ ಮಾರುಕಟ್ಟೆ ಬಳಿ ಕೆಲಕಾಲ ಕೃತಕ ಪ್ರವಾಹ ಸೃಷ್ಟಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ