ಮತದಾರರ ಪಟ್ಟಿ ಬಿಡುಗಡೆ: ಕರ್ನಾಟಕದ ಇತಿಹಾಸದಲ್ಲೇ ಮೊದಲ ಸಲ ಗಂಡಸರನ್ನು ಹಿಂದಿಕ್ಕಿದ ಮಹಿಳೆಯರು!

By Kannadaprabha News  |  First Published Jan 7, 2025, 10:05 AM IST

ಒಟ್ಟು 5.52 ಕೋಟಿ ಮಂದಿ ರಾಜ್ಯದಲ್ಲಿ ಮತದಾನ ಹಕ್ಕು ಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಲಕ್ಷಕ್ಕೂ ಹೆಚ್ಚು ಹೊಸ ಮತದಾರರು ಸೇರಿದ್ದಾರೆ. ರಾಜ್ಯದಲ್ಲಿನ 5.52 ಕೋಟಿ ಮತದಾರರ ಪೈಕಿ 2.75 ಕೋಟಿ ಪುರುಷರು ಮತ್ತು 2.76 ಕೋಟಿ ಮಹಿಳೆಯರಿದ್ದಾರೆ. 31 ಜಿಲ್ಲೆಗಳ ಪೈಕಿ 26 ಜಿಲ್ಲೆಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದ್ದು, ಐದು ಜಿಲ್ಲೆಗಳಲ್ಲಿ ಪುರುಷ ಮತದಾರರ ಸಂಖ್ಯೆ ಹೆಚ್ಚಿದೆ. 


ಬೆಂಗಳೂರು(ಜ.07):  ರಾಜ್ಯ ಮುಖ್ಯಚುನಾವಣಾಧಿಕಾರಿ ಕಚೇರಿಯು ಪ್ರಸಕ್ತ 2025ರ ಅಂತಿಮ ಪರಿಷ್ಕೃತ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. 

ಒಟ್ಟು 5.52 ಕೋಟಿ ಮಂದಿ ರಾಜ್ಯದಲ್ಲಿ ಮತದಾನ ಹಕ್ಕು ಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಲಕ್ಷಕ್ಕೂ ಹೆಚ್ಚು ಹೊಸ ಮತದಾರರು ಸೇರಿದ್ದಾರೆ. ರಾಜ್ಯದಲ್ಲಿನ 5.52 ಕೋಟಿ ಮತದಾರರ ಪೈಕಿ 2.75 ಕೋಟಿ ಪುರುಷರು ಮತ್ತು 2.76 ಕೋಟಿ ಮಹಿಳೆಯರಿದ್ದಾರೆ. 31 ಜಿಲ್ಲೆಗಳ ಪೈಕಿ 26 ಜಿಲ್ಲೆಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದ್ದು, ಐದು ಜಿಲ್ಲೆಗಳಲ್ಲಿ ಪುರುಷ ಮತದಾರರ ಸಂಖ್ಯೆ ಹೆಚ್ಚಿದೆ. 

Tap to resize

Latest Videos

ಬೆಂಗಳೂರಿನಲ್ಲಿ 1 ಕೋಟಿ ದಾಟಿದ ಮತದಾರರ ಸಂಖ್ಯೆ: ಹೊಸದಾಗಿ 4 ಲಕ್ಷ ಸೇರ್ಪಡೆ

ಬೆಂಗಳೂರು, ಕಲಬುರಗಿ, ಬೀದರ್, ಹಾವೇರಿ, ವಿಜಯಪುರದಲ್ಲಿ ಪುರುಷ ಮತದಾರರು ಹೆಚ್ಚಿದ್ದಾರೆ. ಹೊಸದಾಗಿ ಸೇರ್ಪಡೆಯಾದ ಪಟ್ಟಿಯಲ್ಲಿ 30,999 ಪುರುಷ ಮತದಾರರು, 72,754 ಮಹಿಳಾ ಮತದಾರರು 30 ಸೇರಿದಂತೆ ಒಟ್ಟು 1,03,776 ಮತದಾರರು ಮತದಾನದ ಹಕ್ಕು ಪಡೆದಿದ್ದಾರೆ. 18-19 ವರ್ಷದ ಯುವ ಮತದಾರರ ಸಂಖ್ಯೆಯು 8,02,423ರಷ್ಟು ಹೊಂದಿದೆ. ಕರಡು ಪಟ್ಟಿಗೆ ಹೋಲಿಸಿದರೆ ಅಂತಿಮ ಪಟ್ಟಿಯಲ್ಲಿ 1,21,226 ಮತದಾರರು ಹೆಚ್ಚಳವಾಗಿದ್ದಾರೆ. 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರ ಸಂಖ್ಯೆಯು 6,36,551. 100 ವರ್ಷಕ್ಕಿಂತ ಮೇಲ್ಪಟ್ಟು ಮತದಾರರ ಸಂಖ್ಯೆಯು 22,552 ಆಗಿದೆ. ಅಂಗವಿಕರ ಮತದಾರರ ಸಂಖ್ಯೆ 6,28,554. 

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚು ಮತದಾರರು: 

224 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವು ಅತಿ ಹೆಚ್ಚು ಮತದಾರರನ್ನು ಹೊಂದಿದ್ದು, ಒಟ್ಟು 7,67,416 ಮತದಾರರಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದಲ್ಲಿ ಕಡಿಮೆ ಮತದಾರರಿದ್ದು, ಒಟ್ಟು 1,68,882 ಮತದಾರರನ್ನು ಹೊಂದಿದೆ. 

ರಾಜ್ಯದಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಾರ, 58,932 ಮತಗಟ್ಟೆಗಳಿವೆ. ಪ್ರತಿ ಮತದಾನ ಕೇಂದ್ರಕ್ಕೆ ಸರಾಸರಿ 937 ಮತದಾರರಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳಿಗೆ ಅನುಗುಣವಾಗಿ ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಮತಗಟ್ಟೆಯಲ್ಲಿ ಬೂತ್ ಮಟ್ಟದ ಏಜೆಂಟರನ್ನು ನಿಯೋಜಿಸಲು  ಒತ್ತಾಯಿಸಲಾಗಿದೆ. ಹೆಚ್ಚುವರಿಯಾಗಿ, ಎಲ್ಲಾ ಅರ್ಹ ಮತದಾರರ ನೋಂದಣಿಗೆ ಮತ್ತು ವಿವಿಧ ಚುನಾವಣಾ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಬೂತ್ ಮಟ್ಟದ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರವನ್ನು ನೀಡುವಂತೆ ತಿಳಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 1.02 ಕೋಟಿ ಮತದಾರರು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ನಗರ ವ್ಯಾಪ್ತಿಯಲ್ಲಿ 1.02 ಕೋಟಿ ಮತದಾರರಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಪ್ರಸಕ್ತ ವರ್ಷದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡಲಾಗಿದೆ. 2024ರ ಅಕ್ಟೋಬರ್ 29ರಂದು ಕರಡು ಪಟ್ಟಿ ಪ್ರಕಟಿಸಲಾಗಿತ್ತು. 

ಒಮರ್‌ ಬಳಿಕ ಈಗ ಮಮತಾ ಪಕ್ಷದಿಂದ ಕಾಂಗ್ರೆಸ್‌ಗೆ ಇವಿಎಂ ಚಾಟಿ

ಅದಾದನಂತರ 23,448 ಮತದಾರರು ಪಟ್ಟಿಗೆ ಸೇರ್ಪಡೆಯಾ ಗಿದ್ದು, ಅಂತಿಮ ಪಟ್ಟಿಯಲ್ಲಿ 1,02,64,714 ಮತ ದಾರರಿದ್ದಾರೆ. ಅದರಲ್ಲಿ 52.80 ಲಕ್ಷ ಪುರುಷ, 49.70 ಮಹಿಳೆಯರು ಮತ್ತು 1,831 ಇತರೆ ಮತದಾರರಿದ್ದಾರೆ. ಮತದಾರರ ಪಟ್ಟಿಯನ್ನು ವಾರ್ಡ್ ಕಚೇರಿ, 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಬದಲಾವಣೆಗಳಿದ್ದರೆ, ಮತದಾರರು ಸೂಕ್ತ ದಾಖಲೆಗಳೊಂದಿಗೆ ಬದಲಿಸಬಹುದಾಗಿದೆ ಎಂದರು. 

ಸದ್ಯ ಪ್ರಕಟಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು 7.67 ಲಕ್ಷ ಮತದಾರರಿದ್ದು, ಶಿವಾಜಿನಗರ ಕ್ಷೇತ್ರದಲ್ಲಿ ಅತಿ ಕಡಿಮೆ 1.97 ಲಕ್ಷ ಮತದಾರರಿದ್ದಾರೆ. ಇದರ ಹೊರತಾಗಿಯೂ ಮತದಾರರ ಪಟ್ಟಿಯಲ್ಲಿ ಬದಲಾವಣೆಗಳಿದ್ದರೆ, ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬ‌ರ್ 1ರಲ್ಲಿ ನಡೆಯಲಿರುವ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ಸಂದರ್ಭದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

click me!