
ಬೆಂಗಳೂರು(ಅ.08): 'ಸಾಮಾಜಿಕ ಜಾಲತಾಣ 'ಎಕ್ಸ್'ನ ಬಿಜೆಪಿ ಖಾತೆಯಲ್ಲಿ ನನ್ನ ಹಾಗೂ ನನ್ನ ಧರ್ಮದ ಬಗ್ಗೆ ಅನಗತ್ಯವಾಗಿ ಪ್ರಸ್ತಾಪಿಸಲಾಗುತ್ತಿದೆ. ಇದಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬಸುಮ್ ರಾವ್ ಅವರು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು 15 ದಿನದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.
ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ತರಬೇಡಿ: ಬಿಜೆಪಿ ವಿರುದ್ಧ ಮಹಿಳಾ ಆಯೋಗಕ್ಕೆ ದಿನೇಶ್ ಗುಂಡೂರಾವ್ ಪತ್ನಿ ದೂರು
'ನನ್ನ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ. ಬಿಜೆಪಿಯಿಂದ ಈ ರೀತಿಯ ಘಟನೆಗಳು ಪುನರಾವರ್ತನೆ ಆಗುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು. ಕೃತ್ಯಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ತಬಸುಮ್ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಯೋಗವು, ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ