
ಹುಬ್ಬಳ್ಳಿ : ‘ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗಿರುವ ಅನ್ಯಾಯ ನನ್ನ ಗಮನಕ್ಕೆ ಬಂದಿದ್ದು, ಕನ್ನಡಿಗರಿಗೆ ನ್ಯಾಯ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
‘ಕನ್ನಡಪ್ರಭ’ದಲ್ಲಿ ಶನಿವಾರ ಪ್ರಕಟವಾಗಿರುವ ‘ರೈಲ್ವೆಯಿಂದ ಮತ್ತೆ ಕನ್ನಡಿಗರಿಗೆ ಅನ್ಯಾಯ’ ವರದಿ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ರೈಲ್ವೆ ನೇಮಕಾತಿಯಲ್ಲಿ ಎಲ್ಲಾ ಭಾಷೆಗಳಿಗೆ ಮಾನ್ಯತೆ ಸಿಗಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರಕ್ಕೆ ವಿಶೇಷ ಒತ್ತು ನೀಡುತ್ತಿದ್ದಾರೆ. ಇದೇ ವೇಳೆ ರೈಲ್ವೆ ಇಲಾಖೆಯಲ್ಲಿ ಪ್ರೋತ್ಸಾಹ, ಪದೋನ್ನತಿ, ವರ್ಗಾವಣೆ ಸೇರಿದಂತೆ ಆಡಳಿತಾತ್ಮಕ ವಿಷಯಗಳಲ್ಲಿಯೂ ಸುಧಾರಣೆಗಳನ್ನು ತರಲು ಚಿಂತನೆ ನಡೆಯುತ್ತಿದೆ. ಇದರಿಂದ ಉದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಎಲ್ಲಾ ಭಾಷಿಕರಿಗೆ ಸಮಾನ ಅವಕಾಶ ದೊರಕುತ್ತಿರಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ವಿವಿಧ ಭಾಷೆಗಳ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗಿದೆ ಎಂದರು.
ದೇಶದಲ್ಲಿ ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದ್ದು, ಇತರ ಪ್ರಾದೇಶಿಕ ಭಾಷೆಗಳಿಗೂ ಸಮಾನ ಅವಕಾಶ ಸಿಗಬೇಕೆಂಬುದು ಸರ್ಕಾರದ ಆಶಯವಾಗಿದೆ. ಅದರಲ್ಲೂ ಕನ್ನಡ ಭಾಷಿಕರಿಗೆ ನ್ಯಾಯಸಮ್ಮತ ಸ್ಥಾನಮಾನ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕನ್ನಡ ಭಾಷಿಕರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡುವುದಾಗಿ ಸಚಿವರು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ