ಬೆಂಗಳೂರು ಏರ್‌ಪೋರ್ಟ್‌ಗೆ ವಿಶ್ವಮಟ್ಟದ ಪ್ರಶಸ್ತಿ: ಟರ್ಮಿನಲ್‌ 2 ಒಳಾಂಗಣ ವಿನ್ಯಾಸಕ್ಕೆ ಫಿದಾ

Published : Dec 22, 2023, 07:43 AM IST
ಬೆಂಗಳೂರು ಏರ್‌ಪೋರ್ಟ್‌ಗೆ ವಿಶ್ವಮಟ್ಟದ ಪ್ರಶಸ್ತಿ: ಟರ್ಮಿನಲ್‌ 2 ಒಳಾಂಗಣ ವಿನ್ಯಾಸಕ್ಕೆ ಫಿದಾ

ಸಾರಾಂಶ

ನಗರದ ‘ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ದ ಟರ್ಮಿನಲ್‌-2, ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದೆಂಬ ಹಿರಿಮೆಗೆ ಪಾತ್ರವಾಗಿದೆ. 

ಬೆಂಗಳೂರು (ಡಿ.22): ನಗರದ ‘ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ದ ಟರ್ಮಿನಲ್‌-2, ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದೆಂಬ ಹಿರಿಮೆಗೆ ಪಾತ್ರವಾಗಿದೆ. ಈ ಮೂಲಕ ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನೆಸ್ಕೋ ನೀಡುವ ಪ್ರಿಕ್ಸ್‌ ವರ್ಸೈಲ್ಸ್‌ ಗೌರವಕ್ಕೆ ಪಾತ್ರವಾಗಿದೆ. ವಿಶೇಷವೆಂದರೆ ಈ ಗೌರವಕ್ಕೆ ಪಾತ್ರವಾದ ಮೊದಲ ನಿಲ್ದಾಣ ಎಂಬ ಹಿರಿಮೆಗೆ ಬೆಂಗಳೂರು ವಿಮಾನ ನಿಲ್ದಾಣ ಪಾತ್ರವಾಗಿದೆ. ಒಳಾಂಗಣ ವಿನ್ಯಾಸಕ್ಕಾಗಿ ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌- 2ಕ್ಕೆ ಈ ಗೌರವ ಸಂದಿದೆ.

ಟರ್ಮಿನಲ್‌-2 ವಿಶೇಷತೆ ಏನು?: 2,55,661 ಚದರ ಮೀಟರ್‌ ವಿಸ್ತೀರ್ಣದಲ್ಲಿರುವ ಟರ್ಮಿನಲ್‌-2 ಅನ್ನು 4 ಬೃಹತ್‌ ಅಡಿಪಾಯದ ಕಂಬಗಳ ಮೇಲೆ ನಿರ್ಮಾಣವಾಗಿದೆ. ಇಲ್ಲಿನ ಉದ್ಯಾನ ಬಹು ಆಕರ್ಷಣೀಯವಾಗಿದ್ದು, ಇಲ್ಲಿ ಪರಿಸರ ಮತ್ತು ಕರ್ನಾಟಕದ ಶ್ರೀಮಂತ ಪರಂಪರೆ, ಸಂಸ್ಕೃತಿ, ಆಚರಣೆಗಳನ್ನು ಕಾಣಬಹುದಾಗಿದೆ. ಈ ಟರ್ಮಿನಲ್‌-2ನ ಮೊದಲ ಹಂತವು ನ.11, 2022ರಂದು ಉದ್ಘಾಟನೆಯಾಗಿದೆ. ಇದು ವರ್ಷಕ್ಕೆ 2.5 ಕೋಟಿ ಪ್ರಯಾಣಿಕರನ್ನು ನಿರ್ವಹಿಸುತ್ತದೆ.

ಕೆಎಂಎಫ್​ ರಾಯಭಾರಿ ಶಿವರಾಜ್​ಕುಮಾರ್​ಗೆ ಸಿಎಂ ಸಿದ್ದರಾಮಯ್ಯ ಸನ್ಮಾನ!

ಮುಂದಿನ 2 ವರ್ಷಗಳಲ್ಲಿ 12 ಸಾವಿರ ಉದ್ಯೋಗ ಸೃಷ್ಟಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಮುಂದಿನ ಎರಡು ವರ್ಷಗಳಲ್ಲಿ 12 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಹರಿ ಮರಾರ್ ತಿಳಿಸಿದರು.  ನಗರದಲ್ಲಿ ನಡೆದ ಸೋಲ್ (SOUL) ಬೆಂಗಳೂರು ಬಿಸಿನೆಸ್‌ ಕಾನ್‌ಕ್ಲೇವ್‌ನಲ್ಲಿ ‘ಬೆಂಗಳೂರು ರೂಪಾಂತರ’ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎಲ್ಲ ಲೆಕ್ಕಾಚಾರಗಳನ್ನು ಮೀರಿ ಬೆಂಗಳೂರು ನಗರದ ಉದ್ಯಮ, ಕೈಗಾರಿಕೆ ಮತ್ತು ಸಾರಿಗೆ ಕ್ಷೇತ್ರ ಬೆಳೆಯುತ್ತಿದೆ. ವಿಮಾನ ನಿಲ್ದಾಣ ಪ್ರಗತಿಯು ಇಡೀ ದೇಶಕ್ಕೆ ಮಾದರಿಯಾಗಿದೆ. 

ಎರಡನೇ ಟರ್ಮಿನಲ್ ಆರಂಭಕ್ಕೆ ಮುನ್ನ 25 ಸಾವಿರ ಉದ್ಯೋಗಿಗಳಿದ್ದರು. ಈಗ 38 ಸಾವಿರ ಉದ್ಯೋಗಿಗಳಿದ್ದಾರೆ. ಮುಂದಿನ 2 ವರ್ಷಗಳಲ್ಲಿ ಈ ಸಂಖ್ಯೆ 50 ಸಾವಿರಕ್ಕೆ ತಲುಪಲಿದೆ. ವಿಮಾನ ನಿಲ್ದಾಣ ಆವರಣದಲ್ಲಿ ಇಂಡಿಗೋ, ಏರ್ ಇಂಡಿಯಾ ಹಬ್‌ ನಿರ್ಮಾಣ, ₹500 ಕೋಟಿ ವೆಚ್ಚದ ಏರ್‌ಪೋರ್ಟ್‌ ಸಿಟಿ, ಡಿಜಿಟಲ್ ಪ್ಲಾನ್, 2ನೇ ಟರ್ಮಿನಲ್‌ನ ಉಳಿದ ಭಾಗದ ಅಭಿವೃದ್ಧಿ ಸೇರಿದಂತೆ ಹಲವು ಕೆಲಸಗಳು ನಡೆಯುತ್ತಿವೆ’ ಎಂದು ತಿಳಿಸಿದರು.

‘2024ರ ಅಂತ್ಯದ ವೇಳೆಗೆ ನಿಲ್ದಾಣದ ಪ್ರಯಾಣಿಕರ ಸಂಖ್ಯೆ 4 ಕೋಟಿ ತಲುಪುವ ನಿರೀಕ್ಷೆ ಇದೆ. ಸದ್ಯದ ಬೆಳವಣಿಗೆ ಗಮನಿಸಿದರೆ 2032ರ ವೇಳೆಗೆ ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಅಗತ್ಯವಿದೆ. ಅದಕ್ಕಾಗಿ ಎರಡು ವರ್ಷಗಳ ಹಿಂದೆಯೇ ಸರ್ಕಾರ ಸ್ಥಳ ಗುರುತಿಸಿ ಯೋಜನೆ ರೂಪಿಸಬೇಕಿತ್ತು. ಬೆಂಗಳೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ 2030ರ ವೇಳೆಗೆ ಸುಮಾರು ₹15 ಸಾವಿರ ಕೋಟಿ ಹೂಡಿಕೆಯಾಗಲಿದೆ’ ಎಂದು ಹರಿ ಮರಾರ್ ತಿಳಿಸಿದರು.

ಸದನದಿಂದ ಸಂಸದರು ಹೊರಕ್ಕೆ, ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಎಂ.ಬಿ.ಪಾಟೀಲ್‌

ಐಟಿ ಮತ್ತು ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ‘ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಉದ್ಯಮಗಳ ಸ್ಥಾಪನೆಗೆ ಇರುವ ತೊಡಕುಗಳನ್ನು ನಿವಾರಿಸಿ ಮತ್ತಷ್ಟು ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲಾಗುತ್ತದೆ. ಆಟೋಮೊಬೈಲ್, ಬಯೋಟೆಕ್ನಾಲಜಿ ಸೇರಿದಂತೆ ಎಲ್ಲ ವಲಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕವಾಗಿ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಕೌಶಲ್ಯ ಅಭಿವೃದ್ಧಿ ಮೂಲಕ ಭವಿಷ್ಯದ ಸವಾಲುಗಳಿಗೆ ಕರ್ನಾಟಕ ಸಿದ್ಧವಾಗಲಿದೆ. ಅದಕ್ಕೆ ಪೂರಕವಾದ ಎಲ್ಲ ರೀತಿಯ ವಾತಾವರಣವನ್ನು ನಿರ್ಮಿಸಲಾಗುತ್ತಿದೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್