ಈಗಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆ ಎದುರಾಗಿದ್ದು, ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಜಲಕಂಟಕ ಕಾಡುವುದೇ ಎಂಬ ಚಿಂತೆ ಎದುರಾಗಿದೆ.
ಬೆಂಗಳೂರು (ಮಾ.26): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲಕ್ಕೂ ಮುಂಚೆ ಏಪ್ರಿಲ್ ತಿಂಗಳಲ್ಲಿ ಅದ್ಧೂರಿಯಾಗಿ ಕರಗ ಮಹೋತ್ಸವ ಆಚರಣೆ ಮಾಡಲಾಗುತ್ತದೆ. ಆದರೆ, ಈ ಬಾರಿ ರಾಜ್ಯಾದ್ಯಂತ ತೀವ್ರ ಬರಗಾಲ ಆವರಿಸಿದ್ದು, ಕಾವೇರಿ ಜಲಾಶಯ ಬರಿದಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಈಗ ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೂ ಜಲಕಂಟಕ ಎದುರಾಗುವುದೇ ಎಂಬ ಅನುಮಾನ ಎದುರಾಗಿದೆ.
ಹೌದು, ಬೆಂಗಳೂರಿನಲ್ಲಿ ಸುಮಾರು 1.40 ಕೋಟಿ ಜನಸಂಖ್ಯೆ ವಾಸವಾಗಿದ್ದು, ಕುಡಿಯುವ ನೀರಿನ್ನು ಪೂರೈಕೆ ಮಾಡುವುದಕ್ಕೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಹೆಣಗಾಡುತ್ತಿದೆ. ಇನ್ನು ಕಾವೇರಿ ನದಿಯ ಯೋಜನೆಗಳಿಂದ ಬೆಂಗಳೂರಿಗೆ ಸರಬರಾಜು ಮಾಡುವ ನೀರನ್ನು ಜನರು ಗೃಹಬಳಕೆ ಹಾಗೂ ಕುಡಿಯುವ ಉದ್ದೇಶಕ್ಕೆ ಹೊರತಾಗಿ ಯಾವುದೇ ಇನ್ನಿತರ ಕಾರ್ಯಗಳಿಗೆ ಬಳಸದಂತೆ ನಿರ್ಬಂಧಿಸಲಾಗಿದೆ. ಈಗ ಐತಿಹಾಸಿಕ ಕರಗ ಮಹೋತ್ಸವ ಆರಂಭವಾಗುತ್ತಿದ್ದು, ರಾಜ್ಯ, ಹೊರ ರಾಜ್ಯ, ವಿದೇಶಗಳಿಂದಲೂ ಜನರು ಬೆಂಗಳೂರಿಗೆ ಆಗಮಿಸುತ್ತಾರೆ. ಈ ವೇಳೆ ಎಲ್ಲ ಜನರಿಗೆ ಮತ್ತೆ ಹೆಚ್ಚುವರಿ ನೀರು ಪೂರೈಕೆ ಮಾಡುವುದು ಅಗತ್ಯವಾಗಿದೆ.
undefined
ಬೆಂಗಳೂರು ಜನರಿಗೆ ತಾಳಲಾಗುತ್ತಿಲ್ಲ, ಬಿಬಿಎಂಪಿ ಮಾರ್ಷಲ್‌ಗಳ ಕಿರುಕುಳ; ವೃದ್ಧನ ಕಣ್ಣೀರಿಗೂ ಕರಗದ ಕಟುಕರು
ಇನ್ನು ಕರಗ ಮಹೋತ್ಸವ ವೇಳೆ ಅಲ್ಲಲ್ಲಿ ತಾತ್ಕಾಲಿಕ ಕುಡಿಯುವ ನೀರಿನ ಘಟಕಗಳು, ಶೌಚಾಲಯಗಳು ಹಾಗೂ ಕೊಳಚೆ ನೀರಿನ ನಿರ್ವಹಣೆಯನ್ನೂ ಸಮಪರ್ಕಕವಾಗಿ ಮಾಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಜಲಮಂಡಳಿಗೆ ಕಾವೇರಿ ನೀರಿನ ಪೂರೈಕೆಯಲ್ಲಿ ಯಾವುದಾದರೂ ವ್ಯತ್ಯಯ ಉಂಟಾಗುವುದೇ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ನೀರಿನ ಮಿತ ಬಳಕೆಗೆ ಜಲಮಂಡಳಿಯೂ ಅಗತ್ಯ ಸೂಚನೆಯನ್ನು ಸಾರ್ವಜನಿಕರಿಗೆ ತಿಳಿಸುವುದು ಕೂಡ ಅಗತ್ಯವಾಗಿದೆ.
ಪ್ರತಿ ವರ್ಷ ಚೈತ್ರ ಪೌರ್ಣಮಿಯ ಬೆಳದಿಂಗಳಲ್ಲಿ ಐತಿಹಾತಿಕ ಬೆಂಗಳೂರು ಕರದ ಶಕ್ತ್ಯೋತ್ಸವವು ಐತಿಹಾಸಿಕ ಪ್ರಸಿದ್ಧಿಯನ್ನು ಹೊಂದಿದೆ. ಈಗ ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿಯಿಂದ ಹಾಗೂ ಬಿಬಿಎಂಪಿ ವತಿಯಿಂದ ಕರಗ ಮಹೋತ್ಸವಕ್ಕೆ ಸಿದ್ಧತೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರತಿ ವರ್ಷದ ಸಂಪ್ರದಾಯದಂತೆ ಬಿಬಿಎಂಪಿ ವತಿಯಿಂದ ಕರಗ ಮಹೋತ್ಸವಕ್ಕೆ ಅನುದಾನವನ್ನು ಮೀಸಲಿಟ್ಟು ಹಬ್ಬ ಆಚರಣೆ ಮಾಡಲಾಗುತ್ತದೆ. ಕರಗ ಶಕ್ತೋತ್ಸವದ ಮೆರವಣಿಗೆಯು ಧರ್ಮರಾಯಸ್ವಾಮಿ ದೇವಾಲಯದಿಂದ ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ, ಬಳೆಪೇಟೆ, ದೊಡ್ಡಪೇಟೆ, ಕುಂಬಾರಪೇಟೆ, ಗೊಲ್ಲರಪೇಟೆ, ಹಲಸೂರು, ಕೆಆರ್‌ಮಾರುಕಟ್ಟೆ, ಕಾಟನ್‌ಪೇಟೆ ಮತ್ತಿತರ ಪ್ರದೇಶಗಳಲ್ಲಿ ಸಾಗುತ್ತದೆ.
ಬೆಂಗಳೂರು 'ಕರಗ ಮಹೋತ್ಸವ' ಆಚರಣೆ ಕುರಿತು ಪೂರ್ವಭಾವಿ ಸಭೆ: ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಕುರಿತು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಈ ವೇಳೆ ಕರಗ ಮಹೋತ್ಸವಕ್ಕೆ ಕೈಗೊಳ್ಳಬೇಕಾದ ಹಲವು ಅಂಶಗಳ ಬಗ್ಗೆ ಚರ್ಚೆ ಮಾಡಿ, ಎಲ್ಲರೂ ಹೆಚ್ಚುವರಿಯಾಗಿ ಕಾರ್ಯ ನಿರ್ಹವಣೆ ಮಾಡುವಂತೆ ಸೂಚನೆ ನೀಡಿದರು. ಆಯಾ ವಿಭಾಗದ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದರು.
ಬೆಂಗಳೂರು ಐಸಿಐಸಿಐ ಬ್ಯಾಂಕ್ ಉದ್ಯೋಗಿ ಆಗಿದ್ದರೂ, ಲ್ಯಾಪ್‌ಟಾಪ್ ಕದಿಯೋದೇ ಈಕೆಯ ಖಯಾಲಿ
ಪೂರ್ವಭಾವಿ ಸಭೆಯಲ್ಲಿ ಚರ್ಚೆಯಾದ ಅಂಶಗಳು:
* ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು.
* ಕರಗ ಶಕ್ತ್ಯೋತ್ಸವವು ಹೊರಡುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳುವುದು.
* ಕರಗ ಉತ್ಸವ ನಡೆಯುವ ಬೀದಿಗಳಲ್ಲಿ ದೀಪಗಳ ಅಳವಡಿಕೆ ವ್ಯವಸ್ಥೆ ಕೈಗೊಳ್ಳುವುದು.
* ಪಾಲಿಕೆಯ ಆರೋಗ್ಯ ಇಲಾಖೆ ವತಿಯಿಂದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ನಿಯೋಜನೆ ಮಾಡುವುದು.
* ಸ್ವಚ್ಛತಾ ನಿರ್ವಹಣೆತ ದೃಷ್ಠಿಯಿಂಧ ಘನತ್ಯಾಜ್ಯ ವಿಭಾಗದ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜಿಸುವುದು.
* ಭಕ್ತಾದಿಗಳು ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ವ್ಯವಸ್ಥೆ ಮಾಡುವುದು.
* ಜಲಮಂಡಳಿ ವತಿಯಿಂದ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಎಲ್ಲೂ ಕೊಳಚೆ ನೀರು ಹೊರಬಾರದಂತೆ ಅಗತ್ಯ ಕ್ರಮ ವಹಿಸುವುದು.
* ಸಂಚಾರ ದಟ್ಟಣೆಯಾಗದಂತೆ ಮಾರ್ಗ ಬದಾಲವಣೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿಪಡಿಸುವುದು.
* ಕರಗ ಮಹೋತ್ಸವ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳ ಅಳವಡಿಕೆ.
* ಕರಗ ಶಕ್ತ್ಯೋತ್ಸವ ಕಾರ್ಯಕ್ರಮಗಳಲ್ಲಿ ಬೆಂಕಿಯಿಂದ ಅವಘಡಗಳು ಸಂಭವಿಸದಂತೆ ಅಗ್ನಿ ಶಾಮಕ ವ್ಯವಸ್ಥೆಯನ್ನು ಕೈಗೊಳ್ಳುವುದು.
* ಭಕ್ತಾದಿಗಳು ಹಾಗೂ ಸಾರ್ವಜನಿಕರ ಭದ್ರತೆಯ ಹಿತದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವುದು.