
ಹುಣಸಗಿ (ಯಾದಗಿರಿ ಜಿಲ್ಲೆ): ಕೃಷ್ಣಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ತಾಲೂಕಿನ ಮೇಲಿನಗಡ್ಡಿ ಹಾಗೂ ಜಂಗಿನಗಡ್ಡಿ ಗ್ರಾಮದ ರೈತರ 31 ಕುರಿಗಳನ್ನು ರಕ್ಷಿಸಲಾಗಿದೆ. ಕಳೆದ 15 ದಿನಗಳ ಹಿಂದೆ ಕುರಿಗಳ ಮೇಯಿಸಲು ತೆರಳಿದ್ದ ಕುರಿಗಾಹಿಗಳು, ಇತ್ತೀಚಿನ ಪ್ರವಾಹ ಪರಿಸ್ಥಿತಿಯಿಂದ ಕುರಿಗಳನ್ನು ಅಲ್ಲಿಯೇ ಬಿಟ್ಟು ವಾಪಸ್ಸಾಗಿದ್ದರು. ಕುರಿಗಳ ಬಗ್ಗೆ ಆತಂಕಗೊಂಡ ಕುರಿಗಾಹಿಗಳು ತಹಸೀಲ್ದಾರರಿಗೆ ಮನವಿ ಮಾಡಿ, ರಕ್ಷಣಾ ಕಾರ್ಯಕ್ಕೆ ಕೋರಿದ್ದರು. ನಾರಾಯಣಪುರ ಜಲಾಶಯದಿಂದ ಹೊರಹರಿವು ಹೆಚ್ಚಿದ್ದರಿಂದ ಕಾರ್ಯಾಚರಣೆ ಆಗ ಸಾಧ್ಯವಾಗಿರಲಿಲ್ಲ.
ಈಗ, ಹರಿವು ಕಮ್ಮಿಯಾಗುತ್ತಲೇ ತೆಪ್ಪದ ಮೂಲಕ ಕುರಿಗಳನ್ನು ರಕ್ಷಣೆ ಮಾಡಲಾಗಿದೆ. ಇದಕ್ಕಾಗಿ ಜಲಾಶಯದ ಗೇಟುಗಳ ಮುಚ್ಚಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ನಡುಗಡ್ಡೆಯಲ್ಲಿ ಸಿಲುಕಿದ್ದ ಒಟ್ಟು 218 ಕುರಿಗಳ ಪೈಕಿ 187 ಕುರಿಗಳು ಮೃತಪಟ್ಟಿದ್ದು, ಇನ್ನೂ 31 ಕುರಿಗಳನ್ನು ಮೀನುಗಾರರ ಸಹಾಯದಿಂದ ಹಾಗೂ ಇದೇ ನಡುಗಡ್ಡೆಯ ಇನ್ನೊಂದು ಸ್ಥಳದಲ್ಲಿ 81 ಕುರಿಗಳು ಇರುವುದನ್ನು ಖಚಿತಪಡಿಸಿಕೊಂಡ ಕಂದಾಯ ಇಲಾಖೆ ಹಾಗೂ ಪಶು ಇಲಾಖೆ ಅಧಿಕಾರಿಗಳು ಹುಣಸಗಿ ತಹಶೀಲ್ದಾರ್ ಹಾಗೂ ಅಪಾರ ಜಿಲ್ಲಾಧಿಕಾರಿ ಅವರ ಮಾರ್ಗದರ್ಶನದಲ್ಲಿ ನಾರಾಯಣಪುರ ಬಸವಸಾಗರ ಜಲಾಶಯದ ಎಲ್ಲಾ ಗೇಟ್‌ಗಳನ್ನು ಬಂದ್ ಮಾಡಿ ಕುರಿಗಳನ್ನು ರಕ್ಷಿಸಲಾಗಿದೆ ಎಂದು ಉಪ ತಹಸೀಲ್ದಾರ ಕಲ್ಲಪ್ಪ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪಶು ಇಲಾಖೆಯ ಡಾ.ರಾಜಶೇಖರ ದೇಶಪಾಂಡೆ, ಪಶುವೈದ್ಯಾಧಿಕಾರಿ ಡಾ.ಮೆಹಬೂಬ್ ಕಾಜಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಶಿವಶಂಕರ ಸೇರಿದಂತೆ ಪೊಲೀಸ್ ಸಿಬ್ಬಂದಿ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ