ಕರ್ನಾಟಕ ಬಿಜೆಪಿ ಆರಂಭಿಕ ಕಾಲದ ಹಿರಿಯ ಸಂಘಟಕ ನಿಧನ: ರಾಜ್ಯಾಧ್ಯಕ್ಷರಿಂದ ಸಂತಾಪ ಸಂದೇಶ

By Sathish Kumar KHFirst Published Jan 1, 2024, 10:02 PM IST
Highlights

ರಾಜ್ಯದಲ್ಲಿ ಆರಂಭಿಕ ಕಾಲದಲ್ಲಿ ಬಿಜೆಪಿ ಸಂಘಟಕರಲ್ಲಿ ಒಬ್ಬರಾದ ಯಾದಗಿರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನೀಲಕಂಠರಾಯ ಯಲ್ಹೇರಿ ಬೈಕ್‌ ಅಪಘಾತದಲ್ಲಿ ನಿಧನರಾಗಿದ್ದಾರೆ.

ಯಾದಗಿರಿ (ಜ.01): ರಾಜ್ಯದಲ್ಲಿ ಆರಂಭಿಕ ಕಾಲದಲ್ಲಿ ಬಿಜೆಪಿ ಸಂಘಟನೆ ಮಾಡಿದವರಲ್ಲಿ ಒಬ್ಬರಾದ ಯಾದಗಿರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನೀಲಕಂಠರಾಯ ಯಲ್ಹೇರಿ ಬೈಕ್‌ ಅಪಘಾತದಲ್ಲಿ ನಿಧನರಾಗಿದ್ದಾರೆ. ಇದರ ಬೆನ್ನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಂತಾಪವನ್ನು ಸೂಚಿಸಿದ್ದಾರೆ.

ಯಾದಗಿರಿ ತಾಲೂಕಿನ ಅರಕೇರಾ(ಕೆ) ಗ್ರಾಮದ ಬಳಿ ಇಂದು ಮಧ್ಯಾಹ್ನ ಬೈಕ್-ಕ್ರೂಷರ್ ವಾಹನ ಡಿಕ್ಕಿಯಾಗಿ ಜೆಪಿ ಜಿಲ್ಲಾ ಉಪಾಧ್ಯಕ್ಷ ನೀಲಕಂಠರಾಯ ಎಲ್ಹೇರಿ  (48) ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಬೈಕ್ ಮೇಲೆ ತೆರಳುತ್ತಿದ್ದ ನೀಲಕಂಠರಾಯ ಎಲ್ಹೇರಿ ಅವರಿಗೆ ಎದರುಗಡೆಯಿಂದ ವೇಗವಾಗಿ ಬಂದ ಕ್ರೂಷರ್ ವಾಹನ ಡಿಕ್ಕಿ ಹೊಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ತಗ್ಗು ಗುಂಡಿ ತಪ್ಪಿಸಿಕೊಳ್ಳಲು ಹೋದಾಗ ಬೈಕ್ ಹಾಗೂ ಕ್ರೂಷರ್ ನಡುವೆ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಮೃತ ದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ, ವಾರಸುದಾರರಿಗೆ ಒಪ್ಪಿಸಲಾಗುತ್ತಿದೆ.

Latest Videos

ಉಚಿತ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ಫೈಟಿಂಗ್: ಕಾಂಗ್ರೆಸ್‌ ಸರ್ಕಾರವೇ ಕಾರಣವೆಂದ ಪ್ರಯಾಣಿಕರು!

ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟದ ದಿನದಿಂದಲೇ ಯಾದಗಿರಿಯಲ್ಲಿ ಬಿಜೆಪಿ ಪಕ್ಷ ಸಂಘಟನೆ ಮಾಡಿದ ಕೀರ್ತಿ ನೀಲಕಂಠರಾಯ ಎಲ್ಹೇರಿ  ಅವರಿಗೂ ಸಲ್ಲುತ್ತದೆ. ಆದರೆ, ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗ ಒಬ್ಬ ಬಿಜೆಪಿ ಸಂಘಟನಾಕಾರರನ್ನು ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೃತ ನೀಲಕಂಠರಾಯ ಅವರಿಗೆ ತಮ್ಮ ಅಧಿಕೃತ ಲೆಟರ್‌ಹೆಡ್‌ ಮೂಲಕ ಸಂತಾಪ ಸಂದೇಶವನ್ನು ಸೂಚಿಸಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಯಾದಗಿರಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನೀಲಕಂಠರಾಯ ಯಲ್ಹೇರಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ತಿಳಿದು ಅಪಾರ ದುಃಖವಾಯಿತು. ಸುದೀರ್ಘ ವರ್ಷಗಳಿಂದಲೂ ಪಕ್ಷ ಸಂಘಟನೆಗೆ ತಮ್ಮನ್ನು ಸಮರ್ಪಿಸಿಕೊಂಡು ವಿಭಾಗ ಸಂಘಟನಾ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಅವರ ಕುಟುಂಬಸ್ಥರಿಗೆ ಹಾಗೂ ಬಂಧು ಮಿತ್ರರಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಓಂ ಶಾಂತಿ ಎಂದು ಸಂತಾಪವನ್ನು ಸೂಚಿಸಿದ್ದಾರೆ.

ಸ್ಕೂಲ್‌ ಬಸ್‌ ಡ್ರೈವರ್‌ ಅಂಕಲ್‌ ಪ್ರೇಮಪಾಶಕ್ಕೆ ಬಲಿಯಾದ 8ನೇ ಕ್ಲಾಸ್‌ ಹುಡುಗಿ!

ಹದಗೆಟ್ಟಿರುವ ಹೆದ್ದಾರಿಯಿಂದ ಹಲವು ಅಪಘಾತ: ಇನ್ನು ಯಾದಗಿರಿ ತಾಲೂಕಿನ ಅರಕೇರಾದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಭಾರಿ ದೊಡ್ಡ ಪ್ರಮಾಣದ ಗುಂಡಿಗಳೇ ನಿರ್ಮಾಣ ಆಗಿವೆ. ತೀವ್ರ ಹದಗೆಟ್ಟಿರುವ ರಸ್ತೆಯಲ್ಲಿ ವಾಹನ ಸಂಚಾರ ಮಾಡುವುದು ತೀವ್ರ ದುಸ್ತರವಾಗಿದೆ. ಈ ರಸ್ತೆಯಲ್ಲಿ ದಿನಂಪ್ರತಿ ಒಂದಲ್ಲಾ ಒಂದು ಅಪಘಾತ ಸಂಭವಿಸುತ್ತಲೇ ಇದೆ. ಆದರೆ, ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ರಸ್ತೆ ಅಭಿವೃದ್ಧಿ ಮತ್ತು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಒಂದಿಷ್ಟೂ ಕಾಳಜಿ ವಹಿಸುತ್ತಿಲ್ಲ. ಈಗ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರೇ ಹದಗೆಟ್ಟ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಬೈಕ್‌ ಮತ್ತು ಕ್ರೂಸರ್ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

click me!