ಅರಮನೇಲಿ ಖಾಸಗಿ ದರ್ಬಾರ್‌ 11ನೇ ಬಾರಿ ಸಿಂಹಾಸನ ಅಲಂಕರಿಸಿದ ಯದುವೀರ್‌

Kannadaprabha News   | Kannada Prabha
Published : Sep 23, 2025, 06:37 AM IST
Yaduveer

ಸಾರಾಂಶ

ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್‌ ಆರಂಭವಾಯಿತು.ಬೆಳಗ್ಗೆ 5.30ಕ್ಕೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿದ ನಂತರ, ಯದುವೀರ್‌ಗೆ ಚಾಮುಂಡಿ ತೊಟ್ಟಿಯಲ್ಲಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಧಾರಣೆ ನೆರವೇರಿತು

ಮೈಸೂರು : ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್‌ ಆರಂಭವಾಯಿತು.

ಬೆಳಗ್ಗೆ 5.30ಕ್ಕೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿದ ನಂತರ, ಯದುವೀರ್‌ಗೆ ಚಾಮುಂಡಿ ತೊಟ್ಟಿಯಲ್ಲಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಧಾರಣೆ ನೆರವೇರಿತು. ಇದಾದ ನಂತರ ವಾಣಿವಿಲಾಸ ಸನ್ನಿಧಾನದ ದೇವರ ಮನೆಯಲ್ಲಿ ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ಕಂಕಣ ಧಾರಣೆ ನೆರವೇರಿತು.

ಬಳಿಕ ಕಳಶ ಪೂಜೆ, ಸಿಂಹಾಸನಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ, ಎಣ್ಣೆ ಮಜ್ಜನ ಮುಗಿಸಿ ಬಂದ ಯದುವೀರ್‌ಗೆ ಪತ್ನಿ ತ್ರಿಷಿಕಾ ಕುಮಾರಿ ಆರತಿ ಬೆಳಗಿ, ಪಾದಪೂಜೆ ನೆರವೇರಿಸಿದರು. ಈ ವೇಳೆ ಪುತ್ರ ಆದ್ಯವೀರ್ ಇದ್ದರು. ನಂತರ, ದರ್ಬಾರ್ ಹಾಲ್‌ಗೆ ಆಗಮಿಸಿದ ಯದುವೀರ್, ಮಧ್ಯಾಹ್ನ 12.42 ರಿಂದ 12.58ರ ಒಳಗಿನ ಶುಭ ಲಗ್ನದಲ್ಲಿ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, 11ನೇ ಬಾರಿಗೆ ಸಿಂಹಾಸನ ಅಲಂಕರಿಸುತ್ತಿದ್ದಂತೆಯೇ ಬಹುಪರಾಕ್ ಮೊಳಗಿತು.

ನಂತರ ಪುರೋಹಿತರಿಂದ ಧಾರ್ಮಿಕ ಪೂಜಾ ವಿಧಿಗಳು ನೆರವೇರಿದವು. ಗಜಪಡೆಯ ಏಕಲವ್ಯ ಮತ್ತು ಶ್ರೀಕಂಠ ಆನೆಗಳು ಅರಮನೆ ಖಾಸಗಿ ದರ್ಬಾರ್‌ನಲ್ಲಿ ಪಟ್ಟಣದ ಆನೆಗಳಾಗಿ ಭಾಗವಹಿಸಿದ್ದವು. ಖಾಸಗಿ ದರ್ಬಾರ್ ಹಿನ್ನೆಲೆಯಲ್ಲಿ ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು.

ಇತಿಹಾಸ ತಿರುಚಬೇಡಿ

ಮೈಸೂರು : ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು ಇತಿಹಾಸ ತಿರುಚಬೇಡಿ. ಬಾನು ಮುಷ್ತಾಕ್ ಹುಟ್ಟಿನಿಂದ ಮುಸ್ಲಿಂ ಮಹಿಳೆ ಆಗಿರ ಬಹುದು. ಆದ್ರೆ, ಅವ್ರೂ ಕೂಡ ಮನುಷ್ಯರು. ಮನುಷ್ಯ ಮನುಷ್ಯರನ್ನ ಪ್ರೀತಿಸಬೇಕು, ಗೌರವಿಸಬೇಕು. ಪರಸ್ಪರ ಪ್ರೀತಿಯಿಂದ ಇರಬೇಕು, ದ್ವೇಷದಿಂದ ಅಲ್ಲಾ. ನಾಡಿನ ಬಹುತೇಕ ಜನ ಬಾನು ಮುಷ್ತಾಕ್ ಉದ್ಘಾಟನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಿದ್ದಾರೆ ಎಂದು ತಿಳಿಸಿದರು. ನಾಡಿನ ಬಹುತೇಕ ಜನ ಬಾನು ಮುಷ್ತಾಕ್ ಉದ್ಘಾಟನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. ವಿಜಯನಗರ ಕಾಲದಲ್ಲಿ ದಸರಾ ಆಚರಣೆ ಮಾಡುತ್ತಿದ್ದರು. ವಿಜಯನಗರ ಸಾಮ್ರಾಜ್ಯ ಪತನವಾದ ಸಂದರ್ಭದಲ್ಲಿ ಅರಸರು ಆಚರಣೆ ಮಾಡಿದ್ರು. ನಂತರ ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಣೆ ಮಾಡಿದ್ದರು ಎಂದು ಸಿಎಂ ಇತಿಹಾಸವನ್ನು ನೆನಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದು, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ ತಕ್ಷಣ ವಾಪಸ್!
ಮೀಸಲಾತಿ ಯಾರಪ್ಪನ ಸ್ವತ್ತಲ್ಲ; ಕುರುಬರ ST ಸೇರ್ಪಡೆ ವಿಚಾರ, ವಿಎಸ್ ಉಗ್ರಪ್ಪ ಮಹತ್ವದ ಹೇಳಿಕೆ!