ಕನ್ನಡ ರಾಜ್ಯೋತ್ಸವದಂದು ಯಶಸ್ವಿನಿ ಯೋಜನೆ ಮರು ಜಾರಿ: ಸಿಎಂ ಬೊಮ್ಮಾಯಿ

By Govindaraj S  |  First Published Oct 7, 2022, 2:43 PM IST

ರೈತರಿಗೆ ಆರೋಗ್ಯ ಸೌಲಭ್ಯ ನೀಡುವ ಯಶಸ್ವಿನಿ ಯೋಜನೆಯನ್ನು ಕನ್ನಡ ರಾಜ್ಯೋತ್ಸವದಂದು (ನವೆಂಬರ್‌ 1) ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಬೆಂಗಳೂರು (ಅ.07): ರೈತರಿಗೆ ಆರೋಗ್ಯ ಸೌಲಭ್ಯ ನೀಡುವ ಯಶಸ್ವಿನಿ ಯೋಜನೆಯನ್ನು ಕನ್ನಡ ರಾಜ್ಯೋತ್ಸವದಂದು (ನವೆಂಬರ್‌ 1) ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಗುರುವಾರ 50 ಹಾಸಿಗೆಗಳ ಜಯದೇವ ಆಸ್ಪತ್ರೆ ಉಪಕೇಂದ್ರ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತೆಯ ಮಕ್ಕಳ ಐಸಿಯು ಉಪಕೇಂದ್ರದವನ್ನು ಉದ್ಘಾಟಿಸಿ ಮಾತನಾಡಿ ಅವರು, ‘ರಾಜ್ಯ ಸರ್ಕಾರವು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ವಹಿಸಿದೆ. 

ಈ ಹಿಂದೆ ಸಹಕಾರಿ ಸಂಸ್ಥೆಗಳ ಸದಸ್ಯ ರೈತರಿಗೆ ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ಸೌಲಭ್ಯಗಳನ್ನು ನೀಡುವಲ್ಲಿ ಯಶಸ್ವಿನಿ ಯೋಜನೆ ಅನುಕೂಲಕರವಾಗಿತ್ತು. ರೈತರ ಹಿತದೃಷ್ಟಿಯಿಂದ ಯಶಸ್ವಿ ಯೋಜನೆಗೆ ನ.1ಕ್ಕೆ ಮರು ಚಾಲನೆ ನೀಡಲಾಗುತ್ತದೆ ಎಂದರು. ‘ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿಮೆಡಿಸಿನ್‌ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತದೆ. ಇದಕ್ಕಾಗಿ ಪ್ರಾದೇಶಿಕ ಮಟ್ಟದಲ್ಲಿ ಆರು ಕಮಾಂಡ್‌ ಸೆಂಟರ್‌ ಸ್ಥಾಪಿಸಲಾಗುತ್ತಿದ್ದು, ಇದಕ್ಕೆ ರಾಜ್ಯದ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳನ್ನು ಜೋಡಿಸುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. 

Tap to resize

Latest Videos

ರಾಹುಲ್‌ ಗಾಂಧಿ ಹೇಳಿದ ಆನೆ ಮರಿ ರಕ್ಷಣೆಗೆ ಸಿಎಂ ಬೊಮ್ಮಾಯಿ ಸೂಚನೆ

ಕಮಾಂಡ್‌ ಸೆಂಟರ್‌ನ ತಜ್ಞ ವೈದ್ಯರ ತಂಡವು 24*7 ಆರೋಗ್ಯ ಕೇಂದ್ರಗಳಿಗೆ ಸಲಹೆ ಸೂಚನೆಗಳನ್ನು ನೀಡಲಿದೆ. ತಲಾ 7-8 ಲಕ್ಷ ರು. ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳನ್ನು ಹೆಚ್ಚಿಸಲಾಗುವುದು. ಇವುಗಳ ಜತೆಗೆ ಅರ್ಹ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವುದು. ಸುಮಾರು 81 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು. ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ಗ್ರಾಮೀಣ, ತಾಲ್ಲೂಕು ಮಟ್ಟದಲ್ಲಿ ಹಾಗೂ ಬೆಂಗಳೂರಿನ ವಲಯಮಟ್ಟದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 

Bengaluru: ಮಲ್ಲೇಶ್ವರದಲ್ಲಿ ಮಿನಿ ಜಯದೇವ ಆಸ್ಪತ್ರೆ ಶುರು

ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣೆ, ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ, ಬಡವರಿಗೆ ಉಚಿತ ಕನ್ನಡಕ ನೀಡುವ ಕಾರ್ಯಕ್ರಮ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಶ್ರವಣದೋಷ ಹೊಂದಿನ ಬಡ ಮಕ್ಕಳಿಗೆ ಕಾಕ್ಲಿಯರ್‌ ಇಂಪ್ಲಾಂಟ್‌ ವ್ಯವಸ್ಥೆಯನ್ನು ಉಚಿತವಾಗಿ ಪೂರೈಸಲಾಗುತ್ತಿದ್ದು, ಇದಕ್ಕಾಗಿ 500 ಕೋಟಿ ರು. ಮೀಸಲಿರಿಸಲಾಗಿದೆ. ಜಿಲ್ಲಾಸ್ಪತ್ರೆಗಳ ಡಯಾಲಿಸಿಸ್‌ ಸೈಕಲ್‌ಗಳನ್ನು 30 ಸಾವಿರಗಳಿಂದ 60 ಸಾವಿರಗಳನ್ನು ಹೆಚ್ಚಿಸಲಾಗಿದೆ. ಕಿಮೋಥೆರಪಿ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆಯುಷ್ಮಾನ್‌ ಕಾರ್ಡ್‌ ಬಳಸಲು ಸರಳ ನಿಯಮಾವಳಿಗಳನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು ಎಂದರು.

click me!