ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್

Published : Feb 18, 2021, 08:22 PM ISTUpdated : Feb 18, 2021, 08:25 PM IST
ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್

ಸಾರಾಂಶ

ಕರ್ನಾಟಕ ಬಜೆಟ್ ಮಂಡನೆ ದಿನಾಂಕ ನಿಗದಿ ಮಾಡಲಾಗಿದೆ. ಇಂದು (ಗುರುವಾರ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಮುಹೂರ್ತ ಫಿಕ್ಸ್ ಮಾಡಲಾಗಿದೆ.

ಬೆಂಗಳೂರು, (ಫೆ.18): ಬಹು ನಿರೀಕ್ಷೆ ಹುಟ್ಟಿಸಿರುವ ರಾಜ್ಯ ಬಜೆಟ್ ಮಂಡನೆಗೆ ಮೂಹೂರ್ತ ಫಿಕ್ಸ್ ಆಗಿದ್ದು, ಇಂದಿನ (ಗುರುವಾರ) ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಮಾಹಿತಿ ನೀಡಿದರು. 

ಸಂಪುಟ ಸಭೆಯಲ್ಲಿ ಮೀಸಲಾತಿ ಬಗ್ಗೆ ಸಚಿವರಿಗೆ ಸಿಎಂ ಮಹತ್ವದ ಸೂಚನೆ

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇಲಾಖೆವಾರು ಸರಣಿ ಸಭೆ ನಡೆಸುತ್ತಿದ್ದಾರೆ.

ಇನ್ನೂ, ಈ ವರ್ಷದ ರಾಜ್ಯ ಸರ್ಕಾರ ಬಜೆಟ್ ಮಂಡನೆ ಬಗ್ಗೆ ರಾಜ್ಯದ ಜನರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದು, ಈ ಬಾರಿಯ ಬಜೆಟ್ ಯಾವ ಯಾವ ಕ್ಷೇತ್ರಕ್ಕೆ ಯಾವ ರೀತಿ ಲಾಭವಾಗಲಿದೆ?  ಜನಸಾಮಾನ್ಯರು, ರೈತರಿಗೆ ಎಷ್ಟರಮಟ್ಟಿಗೆ ಲಾಭದಾಯಕವಾಗಲಿದೆ ಎನ್ನುವುದನ್ನು ಕಾದು ನೋಡಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ
ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !