ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಮಲೆನಾಡಿನ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು(ಜ.05): ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಹಗುರದಿಂದ ಸಾಧಾರಣ ಮಳೆಯ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಜ.7ರಂದು ಭಾರಿ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಎಚ್ಚರಿಕೆ ಕೊಡಲಾಗಿದೆ. ಅಲ್ಲದೇ ಜ.7ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ಮತ್ತು ಚಳಿಯ ವಾತಾವರಣ ಇರಲಿದೆ.
undefined
ಅರ್ಚಕರನ್ನು ಮದುವೆಯಾದರೆ 3 ಲಕ್ಷ ಬಾಂಡ್
ಆಗಾಗ ಹಗುರದಿಂದ ಸಾಧಾರಣ ಮಳೆ ಬೀಳುವ ಸಂಭವವಿದೆ. ಒಂದು ವೇಳೆ ಮೇಲ್ಮೈ ಸುಳಿಗಾಳಿ ತೀವ್ರಗೊಂಡು ಗಾಳಿ ಬೀಸುವಿಕೆ ಪ್ರಮಾಣ ಹೆಚ್ಚಾದರೆ ಇದೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜ.4ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಅತಿ ಕನಿಷ್ಠ ತಾಪಮಾನ ಹಾಸನದಲ್ಲಿ 11.6, ಬೀದರ್‌ನಲ್ಲಿ 12.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಜ.7ರವರೆಗೂ ಪುನಃ ಇದೇ ಜಿಲ್ಲೆಗಳು ಸೇರಿದಂತೆ ದಾವಣಗೆರೆ, ಧಾರವಾಡ, ಹಾಸನ, ಬೆಂಗಳೂರು ನಗರ ಹಾಗೂ ಸುತ್ತ ಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿರುವ ಹಿನ್ನೆಲೆ ಚಳಿ ವಾತಾವರಣದ ನಿರೀಕ್ಷೆ ಇದೆ. ಇನ್ನು ರಾಜ್ಯದ ಗರಿಷ್ಠ ತಾಪಮಾನ ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಜ.7ರವರೆಗೂ ಪಣಂಬೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕನಿಷ್ಠ 23ರಿಂದ ಗರಿಷ್ಠ 35 ಡಿ.ಸೆ.ವರೆಗೆ ಉಷ್ಣಾಂಶ ದಾಖಲಾಗುವ ಸಂಭವಿದೆ.
ಬ್ರಿಟನ್ ರಿಟರ್ನ್ಡ್ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆ
ಇನ್ನು ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಹೆಚ್ಚು 5 ಸೆಂ.ಮೀ. ಮಳೆ ಸುರಿದಿದೆ. ಉಳಿದಂತೆ ಶಿವಮೊಗ್ಗ, ಕೊಡಗಿನ ಭಾಗಮಮಂಡಲ ತಲಾ 3, ದಕ್ಷಿಣ ಕನ್ನಡದ ಸುಳ್ಯ, ಶಿವಮೊಗ್ಗದ ಭದ್ರಾವತಿ, ಚಿಕ್ಕಮಗಳೂರಿನ ಲಕ್ಕವಳ್ಳಿ ತಲಾ 2 ಸೆಂ.ಮೀ ಮಳೆ ಸುರಿದಿದೆ.