ಯಶವಂತಪುರ-ಕಾರಟಗಿ ರೈಲು 30 ದಿನಗಳ ಕಾಲ ಮಾರ್ಗ ಬದಲಾವಣೆ; ಇಲ್ಲಿದೆ ಮಾಹಿತಿ

By Ravi Janekal  |  First Published Sep 21, 2023, 6:15 PM IST

ಅಮೃತ ಭಾರತ ನಿಲ್ದಾಣ ಯೋಜನೆಯಡಿ ಬಳ್ಳಾರಿ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ ಸಲುವಾಗಿ ಪ್ಲಾಟ್ ಫಾರ್ಮ್ -3ರಲ್ಲಿನ ಕಾಮಗಾರಿಯಿಂದ ಪ್ರಯಾಣಿಕರಿಗೆ ಅವಕಾಶ ನಿರ್ಬಂಧಿಸಿದ ಪರಿಣಾಮ ರೈಲುಗಳ ಸಂಖ್ಯೆ 16545/16546 ಯಶವಂತಪುರ ಮತ್ತು ಕಾರಟಗಿ ನಿಲ್ದಾಣಗಳ ಮಧ್ಯ ಸಂಚರಿಸುತ್ತಿರುವ ಡೈಲಿ ಎಕ್ಸ್ ಪ್ರೆಸ್ ರೈಲುಗಳನ್ನು 30 ದಿನಗಳ ಕಾಲ ಮಾರ್ಗ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ. 


ಬೆಂಗಳೂರು (ಸೆ.21): ಅಮೃತ ಭಾರತ ನಿಲ್ದಾಣ ಯೋಜನೆಯಡಿ ಬಳ್ಳಾರಿ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ ಸಲುವಾಗಿ ಪ್ಲಾಟ್ ಫಾರ್ಮ್ -3ರಲ್ಲಿನ ಕಾಮಗಾರಿಯಿಂದ ಪ್ರಯಾಣಿಕರಿಗೆ ಅವಕಾಶ ನಿರ್ಬಂಧಿಸಿದ ಪರಿಣಾಮ ರೈಲುಗಳ ಸಂಖ್ಯೆ 16545/16546 ಯಶವಂತಪುರ ಮತ್ತು ಕಾರಟಗಿ ನಿಲ್ದಾಣಗಳ ಮಧ್ಯ ಸಂಚರಿಸುತ್ತಿರುವ ಡೈಲಿ ಎಕ್ಸ್ ಪ್ರೆಸ್ ರೈಲುಗಳನ್ನು 30 ದಿನಗಳ ಕಾಲ ಮಾರ್ಗ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅದರ ಮಾಹಿತಿ ಈ ಕೆಳಗಿನಂತಿವೆ.        

1. ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 23 ರವರೆಗೆ ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16545 ಯಶವಂತಪುರ-ಕಾರಟಗಿ ಡೈಲಿ ಎಕ್ಸ್‌ಪ್ರೆಸ್(Yashwaantapur-karatagi daily express) ರೈಲು ಓಬಳಾಪುರಂ, ಬಳ್ಳಾರಿ ಬೈಪಾಸ್ ಕ್ಯಾಬಿನ್, ಬಳ್ಳಾರಿ ಕಂಟೋನ್ಮೆಂಟ್ ಮತ್ತು ಕುಡತಿನಿ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಬಳ್ಳಾರಿ ಜಂಕ್ಷನಲ್ಲಿ ನಿಲುಗಡೆ ಇರುವುದಿಲ್ಲ. 

Latest Videos

undefined

ಏನ್ ಅದೃಷ್ಟ ಗುರು ಈ ಶಿಕ್ಷಕನದು; ಇನ್ನೇನು ಸತ್ತೇಹೋದ ಅನ್ನುವಷ್ಟರಲ್ಲಿ ನಡೀತು ಪವಾಡ!

2. ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 24 ರವರೆಗೆ ಕಾರಟಗಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16546 ಕಾರಟಗಿ-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್ ರೈಲು ಕುಡತಿನಿ, ಬಳ್ಳಾರಿ ಕಂಟೋನ್ಮೆಂಟ್, ಬಳ್ಳಾರಿ ಬೈಪಾಸ್ ಕ್ಯಾಬಿನ್ ಮತ್ತು ಓಬಳಾಪುರಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಬಳ್ಳಾರಿ ಜಂಕ್ಷನಲ್ಲಿ ನಿಲುಗಡೆ ಇರುವುದಿಲ್ಲ.  

ಬೆಂಗಳೂರು-ಮಂಗಳೂರು ರೈಲು ಮುರ್ಡೇಶ್ವರಕ್ಕೆ ವಿಸ್ತರಣೆ, ಪ್ರತಾಪ್‌ ಸಿಂಹ ಮನವಿ ಒಪ್ಪಿದ ರೈಲ್ವೆ ಇಲಾಖೆ!

ಈ ರೈಲುಗಳಲ್ಲಿ ಪ್ರಯಾಣಿಸುವ (16545/46) ಪ್ರಯಾಣಿಕರ ಅನುಕೂಲಕ್ಕಾಗಿ ಬಳ್ಳಾರಿ ಕಂಟೋನ್ಮೆಂಟ್ ನಿಲ್ದಾಣದಲ್ಲಿ 5 ನಿಮಿಷಗಳ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿದೆ. 

ಅನೀಶ್ ಹೆಗಡೆ,ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ನೈರುತ್ಯ ರೈಲ್ವೆ, ಹುಬ್ಬಳ್ಳಿ

click me!