BREAKING: ಯೋಗೇಶ್ ಗೌಡ ಕೊಲೆ ಕೇಸ್‌ನಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Published : Apr 09, 2026, 11:27 AM IST
Yogesh Gowda Murder Case

ಸಾರಾಂಶ

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕುರಿತಾದ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.15ಕ್ಕೆ ಮುಂದೂಡಿದೆ. ಎಂಟು ವರ್ಷಗಳ ಕಾಲ ನಡೆದ ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿತ್ತು. 

ಧಾರವಾಡ (ಏ.9): ಕಳೆದ ಎಂಟು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಕುರಿತಾದ ಅಂತಿಮ ತೀರ್ಪು ಮುಂದೂಡಿಕೆ ಮಾಡಲಾಗಿದೆ. ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ನೀಡಲಿದೆ ಎನ್ನಲಾಗಿತ್ತಾದರೂ, ಬಳಿಕ ತೀರ್ಪನ್ನು ಏಪ್ರಿಲ್‌ 15ಕ್ಕೆ ಮುಂದೂಡಿಕೆ ಮಾಡುವ ತೀರ್ಮಾನ ಮಾಡಿದೆ. 

ಪ್ರಕರಣದ ಹಿನ್ನೆಲೆ

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ತನಿಖೆ ನಡೆಸಿ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ನಡುವೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯ ಮೇರೆಗೆ 2019ರ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು.

ಈ ಸಂಬಂಧ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು 2020ರ ನ.5ರಂದು ಸಿಬಿಐ ಬಂಧಿಸಿತ್ತು. ಬಳಿಕ ವಿಚಾರಣೆ ನಡೆಸಿ ಈ ಪ್ರಕರಣ ಸಂಬಂಧ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿತ್ತು. ಪ್ರಸ್ತುತ ಪ್ರಮುಖ ಆರೋಪಿ ವಿನಯ್‌ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದರು.ಇಂದಿನ ನ್ಯಾಯಾಲಯದ ತೀರ್ಪಿನ ಬಳಿಕ ಈ 21 ಆರೋಪಿಗಳಿಗೆ ಜೈಲು ಶಿಕ್ಷೆ ಖಾಯಂ ಆಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಠ್ಯದಲ್ಲಿ ಹಿಂದಿ ಕಲಿಕೆ ಕನ್ನಡಿಗರಿಗಿಂತ ವಲಸಿಗರಿಗೇ ಲಾಭ! ಉದ್ಯೋಗ ನೀಡದ ಭಾಷೆ ನಮಗೆ ಬೇಕೆ?
Assembly Bypolls 2026 Live: ದಾವಣಗೆರೆ ಉಪಚುನಾವಣೆ - ಹಿರಿಯ ಮತದಾರರಿಂದ ಉತ್ಸಾಹದ ಮತದಾನ